ಹರೇಕಳ ಗ್ರಾಮ ಪಂಚಾಯಿತಿ ನೂತನವಾಗಿ ನಿರ್ಮಿಸಿದ ಗೋಡೆ ಮೇಲೆ ಹಾಜಬ್ಬನವರ ಚಿತ್ರ ಬಿಡಿಸಿ ಗೌರವ

ಗೋಡೆಯಲ್ಲಿ ಹಾಜಬ್ಬ ಮತ್ತು ಅವರ ಜೀವನದ ಚಿತ್ರಗಳಿವೆ. ಕಿತ್ತಳೆ ಹಣ್ಣನ್ನು ಮಾರಾಟ ಮಾಡುವ ಮೂಲಕ, ಹಾಜಬ್ಬ ಮಕ್ಕಳಿಗೆ ಶಿಕ್ಷಣಕ್ಕಾಗಿ ತಮ್ಮ ಗ್ರಾಮದಲ್ಲಿ ಶಾಲೆಯನ್ನು ನಿರ್ಮಿಸುವ ಕನಸನ್ನು ನನಸಾಗಿಸಿದರು.

ಹರೇಕಳ ಗ್ರಾಮ ಪಂಚಾಯಿತಿ ನೂತನವಾಗಿ ನಿರ್ಮಿಸಿದ ಗೋಡೆ ಮೇಲೆ ಹಾಜಬ್ಬನವರ ಚಿತ್ರ ಬಿಡಿಸಿ ಗೌರವ
ಹರೇಕಳ ಹಾಜಬ್ಬನವರ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 17, 2022 | 2:25 PM

ಹರೇಕಳ ಗ್ರಾಮ ಪಂಚಾಯತ್(Harekala Gram Panchayat) ನೂತನವಾಗಿ ನಿರ್ಮಿಸಿದ ಗೋಡೆಯ ಮೇಲೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ(Harekala Hajabba) ಅವರ ಚಿತ್ರ ಬಿಡಿಸಿ ಅಕ್ಷರ ಸಂತನನ್ನು ಗೌರವಿಸಿದೆ. ಶಾಸಕ ಯು.ಟಿ.ಖಾದರ್ ಬಿಡುಗಡೆ ಮಾಡಿದ ವಿಶೇಷ ಅನುದಾನ ಹಾಗೂ ಇತರೆ ಅನುದಾನದಲ್ಲಿ ಬಾವಲಿಗುರಿಯಲ್ಲಿ ಪಂಚಾಯಿತಿ ಕಟ್ಟಡ ನಿರ್ಮಾಣವಾಗುತ್ತಿದೆ. ಕಾಮಗಾರಿ ನಡೆಯುತ್ತಿದ್ದು ಶೀಘ್ರದಲ್ಲೇ ಕಟ್ಟಡ ಉದ್ಘಾಟನೆ ನಡೆಯಲಿದೆ. ‘ಗೋಡೆಯಲ್ಲಿ ಹಾಜಬ್ಬ ಮತ್ತು ಅವರ ಜೀವನದ ಚಿತ್ರಗಳಿವೆ. ಕಿತ್ತಳೆ ಹಣ್ಣನ್ನು ಮಾರಾಟ ಮಾಡುವ ಮೂಲಕ, ಹಾಜಬ್ಬ ಮಕ್ಕಳಿಗೆ ಶಿಕ್ಷಣಕ್ಕಾಗಿ ತಮ್ಮ ಗ್ರಾಮದಲ್ಲಿ ಶಾಲೆಯನ್ನು ನಿರ್ಮಿಸುವ ಕನಸನ್ನು ನನಸಾಗಿಸಿದರು. ಅವರ ಕಾರ್ಯಕ್ಕೆ ಪದ್ಮಶ್ರೀ ಪ್ರಶಸ್ತಿಯ ಜೊತೆಗೆ ವಿಶ್ವದಾದ್ಯಂತ ಗೌರವ ಸಿಕ್ಕಿತು,” ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಬದ್ರುದ್ದೀನ್ ಹೇಳಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ,

ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಅವರನ್ನು ಚಿತ್ರಕಲೆಗಳ ಮೂಲಕ ಗೌರವಿಸಲು ಪಂಚಾಯಿತಿಯ ಎಲ್ಲ ಸದಸ್ಯರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ ಎಂದು ಅವರು ಹೇಳಿದರು.

ಅಕ್ಷರ ಸಂತ ಹಾಜಬ್ಬ

ಇದನ್ನೂ ಓದಿ
Image
ಬರಿಗಾಲಲ್ಲೇ ತೆರಳಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಹರೇಕಳ ಹಾಜಬ್ಬ; ಅಕ್ಷರ ಸಂತನ ಸರಳತೆ ಕಂಡು ರಾಷ್ಟ್ರಪತಿಗೂ ಅಚ್ಚರಿ
Image
Harekala Hajabba: ಪ್ರಧಾನಿ ಮೋದಿ ನನ್ನ ಕೈ ಮುಟ್ಟಿ ಮಾತಾಡಿಸಿದರು; ಖುಷಿ ಹಂಚಿಕೊಂಡ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನವರಾದ ಹರೇಕಳ ಹಾಜಬ್ಬ ರಸ್ತೆಯ ಬದಿಯಲ್ಲಿ ನಿಂತು ಹಣ್ಣುಗಳನ್ನು ಮಾರಿದ ಹಣದಿಂದ ತಮ್ಮೂರಲ್ಲಿ ಶಾಲೆ ಕಟ್ಟಿದ್ದಾರೆ. 64 ವರ್ಷದ ಹಾಜಬ್ಬ ಶಾಲೆಯ ಮೆಟ್ಟಿಲು ಹತ್ತಿದವರಲ್ಲ, ಆದರೂ ಈಗ ತಮ್ಮೂರಿಗೆ ಶಾಲೆ ಕಟ್ಟಿಸಿ ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಆಸರೆಯಾಗಿದ್ದಾರೆ. ಇದೇ ಕಾರಣಕ್ಕೆ ಅವರನ್ನು ಅಕ್ಷರ ಸಂತ ಎಂದು ಕರೆಯಲಾಗುತ್ತಿದೆ. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ 2020ರ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಿತ್ತು. ಮಂಗಳೂರಿನ ಹರೇಕಳದಲ್ಲಿ ಹುಟ್ಟಿದ ಹಾಜಬ್ಬನವರದ್ದು ಬಡ ಕುಟುಂಬ. ಮನೆಯಲ್ಲಿ ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ಇದ್ದುದರಿಂದ ಶಾಲೆಗೆ ಹೋಗಿ ಶಿಕ್ಷಣ ಕಲಿಯಲು ಸಾಧ್ಯವಾಗಲಿಲ್ಲ. ಬಾಲ್ಯದಿಂದಲೇ ಬೀಡಿ ಸುತ್ತಿ ಜೀವನ ನಡೆಸುತ್ತಿದ್ದ ಅವರು ಆಮೇಲೆ ಮಂಗಳೂರಿಗೆ ಹೋಗಿ ಕಿತ್ತಳೆ, ಮೂಸಂಬಿ ಹಣ್ಣುಗಳನ್ನು ರಸ್ತೆ ಬದಿಯಲ್ಲಿ ಮಾರತೊಡಗಿದರು. ಹಾಜಬ್ಬ ಯಾವಾಗ ಮಂಗಳೂರಿಗೆ ಹೋಗಿ ಹಣ್ಣು ವ್ಯಾಪಾರ ಶುರು ಮಾಡಿದರೋ ಆಗ ಶಿಕ್ಷಣ, ಭಾಷೆಗಳು ಗೊತ್ತಿಲ್ಲದಿದ್ದರೆ ಸಮಾಜದಲ್ಲಿ ಎಷ್ಟು ಮುಜುಗರಕ್ಕೆ ಒಳಗಾಗಬೇಕಾಗುತ್ತದೆ ಎಂಬುದು ಅನುಭವಕ್ಕೆ ಬಂದಿತು. ಹೀಗಾಗಿ, ತನ್ನಂತೆ ತನ್ನೂರಿನ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗಬಾರದು ಎಂದು ನಿರ್ಧರಿಸಿದ ಅವರು ಕಿತ್ತಳೆ ಮಾರಿದ ಹಣದಿಂದ ಬಡ ಮಕ್ಕಳಿಗಾಗಿ ಊರಿನಲ್ಲಿ ಶಾಲೆ ಕಟ್ಟಿಸಿದರು.

ದುಬಾರಿ ಹಣ ಕೊಟ್ಟು ಶಿಕ್ಷಣ ಕಲಿಯಲು ಸಾಧ್ಯವಾಗದ ಬಡ ಮಕ್ಕಳಿಗೆಂದು ತಮ್ಮೂರಲ್ಲಿ ಶಾಲೆಯೊಂದನ್ನು ಆರಂಭಿಸಬೇಕೆಂದು ಹಾಜಬ್ಬ ನಿರ್ಧರಿಸಿದರು. ಅದಕ್ಕಾಗಿ ಹಾಜಬ್ಬ ಜಿಲ್ಲಾ ಪಂಚಾಯಿತಿ, ಜಿಲ್ಲಾಧಿಕಾರಿ, ಬಿಇಓ ಕಚೇರಿಗೆ ಅಲೆದಾಡಿದರು. ಹಣ್ಣಿನ ವ್ಯಾಪಾರವನ್ನು ಬದಿಗಿಟ್ಟು ಶಾಲೆ ಕಟ್ಟಲು ಅನುಮತಿ ಪಡೆಯಲು ಓಡಾಡಿದ ಹಾಜಬ್ಬನವರಿಗೆ ಶಾಲೆಯನ್ನು ಆರಂಭಿಸಲು ಅನುಮತಿ ದೊರೆಯಲಿಲ್ಲ, ಹಣ್ಣಿನ ಮಾರಾಟದಿಂದ ಬರುತ್ತಿದ್ದ ಹಣವೂ ಇಲ್ಲದಂತಾಯಿತು. ಆದರೂ ಧೃತಿಗೆಡದ ಹಾಜಬ್ಬನವರ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದಿಂದ ಪ್ರಾಥಮಿಕ ಶಾಲೆಗೆ ಜಿಲ್ಲಾ ಪಂಚಾಯಿತಿ ಅನುಮತಿ ಪಡೆದು, 1999ರ ಜೂ.6ರಂದು ನ್ಯೂಪಡ್ಪು ಗ್ರಾಮದ ಮದರಸಾ ಕಟ್ಟಡದಲ್ಲಿ ತಾತ್ಕಾಲಿಕವಾಗಿ 28 ಮಕ್ಕಳೊಂದಿಗೆ ಪ್ರಾಥಮಿಕ ಶಾಲೆ ಆರಂಭಿಸಿದ್ದರು.

ತನ್ನೂರಿನ ವಿದ್ಯಾರ್ಥಿಗಳಿಗಾಗಿ ಸ್ವಂತ ಶಾಲಾ ಕಟ್ಟಡ ಕಟ್ಟಬೇಕೆಂದು ಹಠ ತೊಟ್ಟ ಹಾಜಬ್ಬ ಕಿತ್ತಳೆ ಮಾರಿ ಅದುವರೆಗೂ ಸಂಗ್ರಹಿಸಿದ್ದ 25 ಸಾವಿರ ರೂ. ಹಿಡಿದುಕೊಂಡು ಗ್ರಾಮದಲ್ಲಿ ಬೇರೆಯವರು ಅತಿಕ್ರಮಣ ಮಾಡಿದ್ದ ಸರ್ಕಾರಿ ಜಾಗವನ್ನು ಶಾಲೆಗಾಗಿ ನೀಡುವಂತೆ ಅಧಿಕಾರಿಗಳ ಮುಂದೆ ಹಠ ಹಿಡಿದರು. ಬಳಿಕ 2004ರಲ್ಲಿ ಪತ್ರಿಕೆಯೊಂದು ನೀಡಿದ ವರ್ಷದ ವ್ಯಕ್ತಿಯ 1 ಲಕ್ಷ ರೂ. ಬಹುಮಾನದ ಮೊತ್ತವನ್ನು ಶಾಲೆಯ ಕಟ್ಟಡಕ್ಕೆ ಹಾಕಿ ಪ್ರೌಢಶಾಲೆಯನ್ನೂ ಆರಂಭಿಸಲು ಅಲೆದಾಡಿದರು. ಆಗ ಶಾಸಕರಾಗಿದ್ದ ಯು.ಟಿ. ಖಾದರ್‌ ಆ ಊರಿಗೆ ಪ್ರೌಢಶಾಲೆ ಮಂಜೂರು ಮಾಡಿಸಿದರು. ಹೀಗೆ ಹರೇಕಳದಲ್ಲಿ ಶಾಲೆಯೊಂದು ತಲೆ ಎತ್ತಿತು.

ಇದಾದ ಬಳಿಕ ಹಾಜಬ್ಬನವರ ಬಗ್ಗೆ ಎಲ್ಲ ಕಡೆ ಚರ್ಚೆಯಾಗತೊಡಗಿತು. ಹಾಜಬ್ಬನವರ ಪ್ರಯತ್ನಕ್ಕೆ ಕೈಜೋಡಿಸಲು ಅನೇಕರು ಮುಂದೆ ಬಂದರು. ಹಲವು ಸಂಘ-ಸಂಸ್ಥೆಗಳು ಆ ಶಾಲಾ ಕಟ್ಟಡಕ್ಕೆ ಹಣ ಸಹಾಯವನ್ನು ಕೂಡ ಮಾಡಿದವು. ಮಾಧ್ಯಮಗಳಲ್ಲೂ ಹಾಜಬ್ಬನವರ ಹೆಸರು ಕಾಣಲಾರಂಭಿಸಿತು. ಹಣ್ಣು ಮಾರುತ್ತಲೇ ಶಾಲೆಯೊಂದನ್ನು ಕಟ್ಟಿದ ಹಾಜಬ್ಬನವರಿಗೆ ಪದ್ಮಶ್ರೀ ಪ್ರಶಸ್ತಿಯೂ ಒಲಿದು ಬಂದಿತು.

ಇದುವರೆಗೂ ಸಾಕಷ್ಟು ಪ್ರಶಸ್ತಿಗಳನ್ನು ಪಡೆದಿರುವ ಹರೇಕಳ ಹಾಜಬ್ಬ ಇಂದಿಗೂ ಕಿತ್ತಳೆ ಹಣ್ಣು ಮಾರುತ್ತಾರೆ. ಹಳೆಯದೊಂದು ಪಂಚೆ ಸುತ್ತಿಕೊಂಡು, ಕಿತ್ತಳೆ ಹಣ್ಣುಗಳನ್ನು ಮಾರುತ್ತಾ ಮಂಗಳೂರಿನ ರಸ್ತೆಗಳಲ್ಲಿ ಓಡಾಡುವ ಹಾಜಬ್ಬ ಇನ್ನೂ ತಮ್ಮ ವೃತ್ತಿಯನ್ನು ಬಿಟ್ಟಿಲ್ಲ. ಅಕ್ಷರ ಸಂತ ಎಂದೇ ಕರೆಯಲ್ಪಡುವ ಹಾಜಬ್ಬನವರ ಬಗ್ಗೆ ಮಂಗಳೂರು ವಿಶ್ವವಿದ್ಯಾಲಯ ಸೇರಿದಂತೆ ಅನೇಕ ವಿಶ್ವವಿದ್ಯಾಲಯಗಳ ಪಠ್ಯಪುಸ್ತಕದಲ್ಲಿ ಪಾಠವೂ ಸೇರ್ಪಡೆಯಾಗಿದೆ. ತಾವು ಶಿಕ್ಷಣ ಕಲಿಯದಿದ್ದರೂ ನೂರಾರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಹಾಜಬ್ಬ ಎಲ್ಲೆಡೆ ಮನೆಮಾತಾಗಿದ್ದಾರೆ.

Published On - 2:23 pm, Thu, 17 November 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ