ಮಂಗಳೂರು: ತ್ಯಾಜ್ಯ ಸಂಗ್ರಹದಿಂದ ನದಿ ನೀರು ಕಲುಷಿತ; ಪಾಲಿಕೆ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ಅಸಮಾಧಾನ

| Updated By: ganapathi bhat

Updated on: Sep 24, 2021 | 4:28 PM

Mangaluru News: ಮಂಗಳೂರಿನ ಜನರಿಗೆ ಶುದ್ಧ ಕುಡಿವ ನೀರು ಒದಗಿಸಲು ಹೇಳಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್​ಗೆ ಕ್ರಮ ಕೈಗೊಳ್ಳಬೇಕು. ಕ್ರಮಕೈಗೊಂಡ ವರದಿ ಸಲ್ಲಿಸಲು ಹೈಕೋರ್ಟ್ ಆದೇಶ ನೀಡಿದೆ.

ಮಂಗಳೂರು: ತ್ಯಾಜ್ಯ ಸಂಗ್ರಹದಿಂದ ನದಿ ನೀರು ಕಲುಷಿತ; ಪಾಲಿಕೆ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ಅಸಮಾಧಾನ
ಹೈಕೋರ್ಟ್
Follow us on

ಮಂಗಳೂರು: ನಗರದ ತ್ಯಾಜ್ಯ ಸಂಗ್ರಹದಿಂದ ನದಿ ನೀರು ಕಲುಷಿತ ಆಗುತ್ತಿದೆ. ಈ ಬಗ್ಗೆ ಮಂಗಳೂರು ಪಾಲಿಕೆ ನಿರ್ಲಕ್ಷ್ಯ ವಹಿಸಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ನಾಗರಿಕರಿಗೆ ಶುದ್ಧ ಕುಡಿಯುವ ನೀರಿನ ಹಕ್ಕಿದೆ. ಪಂಚನಾಡಿ ಅಣೆಕಟ್ಟಿನ ನೀರು ಪರೀಕ್ಷೆಗೆ ಒಳಪಡಿಸಬೇಕು. ಒಳಬರುವ, ಹೊರಹೋಗುವ ನೀರಿನ ಪರೀಕ್ಷೆ ಮಾಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.

ಅಷ್ಟೇ ಅಲ್ಲದೆ, ನೀರಿನ ಪರೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚನೆ ಕೊಟ್ಟಿದೆ. ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಮಂಗಳೂರಿನ ಜನರಿಗೆ ಶುದ್ಧ ಕುಡಿವ ನೀರು ಒದಗಿಸಲು ಹೇಳಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್​ಗೆ ಕ್ರಮ ಕೈಗೊಳ್ಳಬೇಕು. ಕ್ರಮಕೈಗೊಂಡ ವರದಿ ಸಲ್ಲಿಸಲು ಹೈಕೋರ್ಟ್ ಆದೇಶ ನೀಡಿದೆ.

ಬೆಂಗಳೂರು: ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ವಾಯುಮಾಲಿನ್ಯಕ್ಕೆ ಜನರ ಆಕ್ರೋಶ
ಬೆಂಗಳೂರಿನ ಕೆಮಿಕಲ್ ಕಂಪನಿ ಒಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ಘಟನೆ ಇಂದು ನಡೆದಿದೆ. ಅತ್ತಿಬೆಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟವಾಗಿದೆ. ಕೆಮಿಕಲ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟದಿಂದ ಗಾಳಿಯಲ್ಲಿ ವಾಸನೆ ಉಂಟಾಗಿದೆ. ಗಾಳಿಯಲ್ಲೆಲ್ಲಾ ಕೆಮಿಕಲ್ ತುಂಬಿ ಬಟ್ಟೆಗಳಲ್ಲಿಯೂ ವಾಸನೆ ಉಂಟಾಗಿದೆ. ಈ ಕೆಮಿಕಲ್‌ ವಾಸನೆಗೆ ಹೆದರಿ ಜನರು ಫ್ಯಾಕ್ಟರಿ ಸಮೀಪಕ್ಕೆ ತೆರಳುತ್ತಿಲ್ಲ.

ಬಾಯ್ಲರ್ ‌ಬ್ಲಾಸ್ಟ್​ಗೆ ಇಡೀ ಪ್ರದೇಶದಲ್ಲಿ ಕೆಮಿಕಲ್ ವಾಸನೆ ಹರಡಿದೆ. ಉಸಿರು ತೆಗೆದುಕೊಳ್ಳಲೂ ಸ್ಥಳೀಯರು ಯೋಚಿಸುವಂತಾಗಿದೆ. ಕೂಡಲೇ ಕಂಪನಿ‌ ಸ್ಥಳಾಂತರಿಸಲು ಸ್ಥಳೀಯರು ಆಗ್ರಹಿಸಿದ್ದಾರೆ. ಲೇಕ್ ಕೆಮಿಕಲ್ ಕಂಪನಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ‌ ಜಮಾಯಿಸಿದ ಜನರನ್ನು ಪೊಲೀಸರು ಚದುರಿಸಿದ್ದಾರೆ. ಬಾಯ್ಲರ್ ಬ್ಲಾಸ್ಟ್​ನಿಂದ ಮೂರು ನಾಲ್ಕು ಕಿ.ಮಿ.ವರೆಗೂ ವಿಷಮಯ ವಾತಾವರಣ ಉಂಟಾಗಿದೆ.

ಅತ್ತಿಬೆಲೆ, ವಡ್ಡರಪಾಳ್ಯ ಮಾಯಸಂದ್ರ, ಮುಚ್ಚೆಂದ, ಕಂಬಳೀಪುರ, ಇಂಚಗೂರು, ಮಯಾಸಂದ್ರ, ಬಾಂಡೇಪುರ ವರೆಗೂ ಕೆಮಿಕಲ್ ಘಾಟು ಹಬ್ಬಿದೆ. ಅತ್ತಿಬೆಲೆ ಸಮೀಪದ ವಡ್ಡರಪಾಳ್ಯದಲ್ಲಿರುವ ಲೇಕ್ ಕೆಮಿಕಲ್ ಫ್ಯಾಕ್ಟರಿ ಬಾಯ್ಲರ್ ಸ್ಫೋಟ ಹಲವು ಪ್ರದೇಶಗಳಿಗೆ ತೊಂದರೆ ಉಂಟುಮಾಡಿದೆ.

ಇದನ್ನೂ ಓದಿ: ಮಂಗಳೂರು: ಸರ್ಕಾರಿ ಕಚೇರಿಯಲ್ಲಿದ್ದ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ

ಇದನ್ನೂ ಓದಿ: ಬೆಂಗಳೂರು: ರಾಸಾಯನಿಕ ಕಂಪೆನಿಯಲ್ಲಿ ಬಾಯ್ಲರ್ ಸ್ಫೋಟ; ಗಾಳಿಯೆಲ್ಲಾ ವಾಸನೆ