AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡು, ಕೊಡಗಿನಲ್ಲಿ ತುಂಬಾ ಖುಷಿ ಅಥವಾ ದುಃಖ ಆದಾಗ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಭಯೋತ್ಪಾದಕ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು. ಈ ಕುರಿತು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕೇಂದ್ರ ಸರ್ಕಾರದ ಜತೆ ಚರ್ಚಿಸಿ ಈ ಕುರಿತು ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಮಲೆನಾಡು, ಕೊಡಗಿನಲ್ಲಿ ತುಂಬಾ ಖುಷಿ ಅಥವಾ ದುಃಖ ಆದಾಗ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ ಮತ್ತು ಭಗವಂತ ಖೂಬಾ
TV9 Web
| Edited By: |

Updated on:Aug 20, 2021 | 5:48 PM

Share

ಮಂಗಳೂರು: ಮಲೆನಾಡು ಹಾಗೂ ಕೊಡಗಿನಲ್ಲಿ ತುಂಬಾ ಖುಷಿಯಾದಾಗ ಅಥವಾ ದುಃಖವಾದಾಗ ಗಾಳಿಯಲ್ಲಿ ಗುಂಡು ಹಾರಿಸುವ ಸಂಸ್ಕೃತಿಯಿದೆ. ಕೇಂದ್ರ ಸಚಿವ ಭಗವಂತ ಖೂಬಾ ಆಗಮಿಸಿದಾಗ ಅವರ ಬೆಂಬಲಿಗರು ಖುಷಿಗೆ ಗಾಳಿಯಲ್ಲಿ ಗುಂಡುಹಾರಿಸಿರಬಹುದು. ಆದರೆ ಸಾರ್ವಜನಿಕವಾಗಿ ಈ ರೀತಿ ಮಾಡಿರುವುದು ತಪ್ಪು ಎಂದು ಮಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.

ಯಾದಗಿರಿ ತಾಲೂಕಿನ ಯರಗೋಳ್ ಬಳಿ ನಡೆದಿದ್ದ ಈ ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಮೂವರು ಪಿಸಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಈ ಬಗ್ಗೆ ನನಗೆ ಯಾವುದೇ ರೀತಿಯ ಮಾಹಿತಿ ಇಲ್ಲ. ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆಂದು ಬಳ್ಳಾರಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಈಗಾ ತಿಳಿಸಿದ್ದಾರೆ.

ಬಂದೂಕು ಹಿಡಿದು ಅಟ್ಟಹಾಸಗೈದಿದ್ದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮತ್ತು ಇತರೆ ಬಿಜೆಪಿ ಮುಖಂಡರು, ಆದರೆ ಪೊಲೀಸರು ಬಂಧಿಸಿದ್ದು ಕೇವಲ ಕಾರ್ಯಕರ್ತರನ್ನ ಮಾತ್ರ. ಮಾಜಿ ಸಚಿವರ ಮೇಲೆ ಕೇಸ್ ದಾಖಲಿಸಿ, ಬಂಧಿಸದಿರುವುದೇಕೆ? ರಾಜಕೀಯ ಹಿತಾಸಕ್ತಿಗೆ ಅಮಾಯಕ ಕಾರ್ಯಕರ್ತರನ್ನು ಬಲಿ ಕೊಡುವುದು ತಾಲಿಬಾನ್ ಸಂಸ್ಕೃತಿ. ತಾಲಿಬಾನ್ ಸಂಸ್ಕೃತಿಯ ಬಿಜೆಪಿಗೆ ಇದು ಹಳೆಯ ಚಾಳಿ ಎಂದು ರಾಜ್ಯ ಕಾಂಗ್ರೆಸ್ ಟೀಕೆ ಮಾಡಿದೆ.

ಮಂಗಳೂರಿನಲ್ಲಿ ಎನ್​ಐಎ ಕಚೇರಿ ಮಂಗಳೂರಿನಲ್ಲಿ NIA ಕೇಂದ್ರ ಸ್ಥಾಪನೆ ಮಾಡುವ ವಿಚಾರವಾಗಿಯೂ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಭಯೋತ್ಪಾದಕ ಚಟುವಟಿಕೆಗಳನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಭಯೋತ್ಪಾದಕ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು. ಈ ಕುರಿತು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕೇಂದ್ರ ಸರ್ಕಾರದ ಜತೆ ಚರ್ಚಿಸಿ ಈ ಕುರಿತು ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: 

ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರ ಸ್ವಾಗತ ಕೇಸ್; ಮೂವರು ಪಿಸಿಗಳು ಸಸ್ಪೆಂಡ್, ಈ ಬಗ್ಗೆ ಮಾಹಿತಿ ಇಲ್ಲ ಎಂದ ಭಗವಂತ ಖೂಬಾ

ಇಂದಿರಾ ಕ್ಯಾಂಟೀನ್​ಗೆ ಅನ್ನಪೂರ್ಣೇಶ್ವರಿ ಹೆಸರು ಇಡುವುದರಿಂದ ಕಾಂಗ್ರೆಸ್​ನವರಿಗೆ ಏನು ಸಮಸ್ಯೆ? ಸಂಸದ ಭಗವಂತ ಖೂಬಾ

(Karnataka Home Minister Araga Jnanendra says Malnad and Kodagu people Shoot in the air when they are very happy or sad about Minister Bhagwanth Khuba case)

Published On - 5:41 pm, Fri, 20 August 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ