ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು FIR

ಕೆಲ ದಿನಗಳ ಹಿಂದಷ್ಟೇ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ದರ್ಪ ಪ್ರದರ್ಶಿಸಿದ ಆರೋಪದಡಿ ಎಫ್ಐಆರ್ ದಾಖಲಾಗಿತ್ತು. ಇದೀಗ ಪೊಲೀಸರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರಿಗೂ ತಡೆದ ಆರೋಪದ ಮೇಲೆ ಮತ್ತೊಂದು ಎಫ್ಐಆರ್(FIR) ದಾಖಲಾಗಿದೆ.

ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು FIR
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು FIR
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: May 21, 2024 | 10:49 PM

ದಕ್ಷಿಣ ಕನ್ನಡ, ಮೇ.21: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ(Harish Poonja) ವಿರುದ್ದ ಮತ್ತೊಂದು ಎಫ್ಐಆರ್(FIR) ದಾಖಲಾಗಿದೆ. ಮೇ.20ರಂದು ಬೆಳ್ತಂಗಡಿ(Belthangady) ತಾಲೂಕು ಕಚೇರಿ ಎದುರು ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ. ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಬೆದರಿಕೆ ಹಾಕಿದ್ದರು.

ಜೊತೆಗೆ ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದರು. ಇದೀಗ ಪೊಲೀಸರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರಿಗೂ ತಡೆದ ಆರೋಪದ ಮೇಲೆ ಐಪಿಸಿ ಸೆಕ್ಸನ್​ 143, 147, 341, 504, 506 ಜೊತೆಗೆ 149 ಐ.ಪಿ.ಸಿಯಂತೆ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಆಕ್ರೋಶ: ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌!

ಕೆಲ ದಿನಗಳ ಹಿಂದಷ್ಟೇ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ದರ್ಪ ಪ್ರದರ್ಶಿಸಿದ ಆರೋಪದಡಿ ಎಫ್ಐಆರ್ ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆಗೆ ಮೇಲೆ ದಾಳಿ ನಡೆಸಿ, ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಜೊತೆಗೆ ಆರೋಪಿ ಬಿಜೆಪಿ ಮುಖಂಡ ಶಶಿರಾಜ್‌ ಶೆಟ್ಟಿ (35) ಬಂಧಿಸಿದ್ದರು. ಬಂಧಿತ ಆರೋಪಿ ಶಶಿರಾಜ್ ರೌಡಿಶೀಟರ್ ಕೂಡ ಆಗಿದ್ದ. ಆದರೆ, ಶಶಿರಾಜ್‌ ಪರವಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಕಾಲತ್ತು ವಹಿಸಿ, ಮೇ.18ರಂದು ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ ಪೊಲೀಸರ ವಿರುದ್ದ ದರ್ಪ ಪ್ರದರ್ಶಿಸಿ, ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಕೆ ಹಾಕಿದ ಆರೋಪದ ಬಗ್ಗೆ ಎಫ್ಐಆರ್ ದಾಖಲಾಗಿತ್ತು. ಇದೀಗ ಶಾಸಕ ಹರೀಶ್ ಪೂಂಜಾ ವಿರುದ್ದ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ