ಡ್ರಗ್ಸ್ ಮಾರುತ್ತಿದ್ದ ಇಬ್ಬರ ಬಂಧನ; ನಗದು ಸೇರಿ 16 ಲಕ್ಷ ಮೌಲ್ಯದ ವಸ್ತು ವಶಕ್ಕೆ

ಇತ್ತೀಚೆಗೆ ಮಾದಕವಸ್ತು ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ಕೂಡ ಹದ್ದಿನ ಕಣ್ಣೀಟ್ಟಿದ್ದಾರೆ. ಅದರಂತೆ ಇಂದು(ಮೇ.02) ಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರ್​ ಬೀರಿ ಬಳಿ ಡ್ರಗ್ಸ್ ಮಾರುತ್ತಿದ್ದ ಇಬ್ಬರನ್ನ ಮಂಗಳೂರು(Mangalore) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಡ್ರಗ್ಸ್ ಮಾರುತ್ತಿದ್ದ ಇಬ್ಬರ ಬಂಧನ; ನಗದು ಸೇರಿ 16 ಲಕ್ಷ ಮೌಲ್ಯದ ವಸ್ತು ವಶಕ್ಕೆ
ಮಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ಇಬ್ಬರ ಬಂಧನ
Edited By: ಕಿರಣ್ ಹನುಮಂತ್​ ಮಾದಾರ್

Updated on: May 02, 2024 | 3:24 PM

ದಕ್ಷಿಣ ಕನ್ನಡ, ಮೇ.02: ಡ್ರಗ್ಸ್ ಮಾರುತ್ತಿದ್ದ ಇಬ್ಬರನ್ನ ಮಂಗಳೂರು(Mangalore) ಸಿಸಿಬಿ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರ್​ ಬೀರಿ ಬಳಿ ಬಂಧಿಸಿದ್ದಾರೆ. ಉಳ್ಳಾಲದ ಮೊಹಮ್ಮದ್​​ ಇಶಾನ್​​, ಜಾಫರ್​ ಸಾಧಿಕ್​​ ಬಂಧಿತ ಆರೋಪಿಗಳು. ಇವರ ಬಳಿಯಿದ್ದ 9 ಲಕ್ಷ ಮೌಲ್ಯದ 407 ಗ್ರಾಂ. ತೂಕದ MDMA ಮಾದಕವಸ್ತು, ಕಾರು, ಮೊಬೈಲ್​, ನಗದು ಸೇರಿ 16,13,800 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಈ ಆರೋಪಿಗಳು ಬೆಂಗಳೂರಿನಿಂದ ಡ್ರಗ್ಸ್​​​​ ಖರೀದಿಸಿ ತಂದು, ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಡ್ರಗ್ಸ್ ಮಾರುತ್ತಿದ್ದರು.

ಆರೋಪಿ ಜಾಫರ್ ವಿರುದ್ಧ ದಾಖಲಾಗಿತ್ತು 9 ಕೇಸ್

ಇನ್ನು ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಜಾಫರ್ ಎಂಬಾತನ ವಿರುದ್ಧ ಹಲ್ಲೆ ಮತ್ತು ಕೊಲೆ ಯತ್ನ ಸೇರಿ ಒಟ್ಟು 9 ಕೇಸ್​ಗಳು ದಾಖಲಾಗಿತ್ತು. ಇನ್ನು ಆರೋಪಿ ಮೊಹಮ್ಮದ್‌ ಇಶಾನ್ ವಿರುದ್ಧವು ಈ ಹಿಂದೆ MDMA ಮಾದಕವಸ್ತು ಮಾರಾಟ ಪ್ರಕರಣ ದಾಖಲಾಗಿದೆ. ಈ ಹಿನ್ನಲೆ ಇಂದು ಖಚಿತ ಮಾಹಿತಿ ಪಡೆದು ದಾಳಿ ಮಾಡಿದಾಗ ಮಾದಕ ವಸ್ತುಗಳು ಪತ್ತೆಯಾಗಿವೆ.

ಇದನ್ನೂ ಓದಿ:ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 3 ಪ್ರತ್ಯೇಕ ಡ್ರಗ್ಸ್ ಪ್ರಕರಣಗಳಲ್ಲಿ ನಾಲ್ವರು ಅರೆಸ್ಟ್

ತ್ಯಾಜ್ಯ ವಿಲೇವಾರಿ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ

ದಾವಣಗೆರೆ: ತಾಲೂಕಿನ ಅವರಗೊಳ್ಳ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಹಿನ್ನಲೆ ಸುತ್ತಮುತ್ತಲಿನ ಪ್ರದೇಶಕ್ಕೆ ಹೊಗೆ ಅವರಿಸಿದ್ದು, ಬೆಂಕಿ ಕಾಣಿಸಿಕೊಂಡಿದ್ದರಿಂದ ಸುತ್ತಮುತ್ತಲಿನ ಜನರಲ್ಲಿ ಆತಂಕ ಮೂಡಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು, ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Thu, 2 May 24

ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Loading...
Unable to load recommendations.
Follow Us