AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಮಂಗಳೂರಿನ ಜನ ಕೂಲ್​ ಕೂಲ್: ದಕ್ಷಿಣ ಕನ್ನಡ ಮತ್ತು ಉಡುಪಿಯ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರಾವಳಿ ಕರ್ನಾಟಕಕ್ಕೆ ಮೇ 6 ರಿಂದ ಗುಡುಗು ಸಹಿತ ಮಳೆ ಸಿಹಿ ಸುದ್ದಿ. ದಕ್ಷಿಣ ಕನ್ನಡ, ಉಡುಪಿ ಸೇರಿ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲೂ ಮಳೆಯ ನಿರೀಕ್ಷೆಯಿದೆ. ಬಿರುಗಾಳಿ, ಸಿಡಿಲು ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಲು ಹವಾಮಾನ ಇಲಾಖೆ ಸೂಚಿಸಿದೆ. ತಾಪಮಾನದಲ್ಲಿ ಕೊಂಚ ಬದಲಾವಣೆ ಕಂಡುಬಂದಿದೆ.

ನಾಳೆಯಿಂದ ಮಂಗಳೂರಿನ ಜನ ಕೂಲ್​ ಕೂಲ್: ದಕ್ಷಿಣ ಕನ್ನಡ ಮತ್ತು ಉಡುಪಿಯ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 05, 2026 | 2:34 PM

Share

ಮಂಗಳೂರು, ಮೇ.5: ಕರಾವಳಿ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಸಿಹಿ ಸುದ್ದಿ ನೀಡಿದೆ. ಮೇ 6ರ ಬುಧವಾರದಿಂದ ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯುದ್ದಕ್ಕೂ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.

ಈ ಮಳೆಯ ಅವಧಿಯಲ್ಲಿ ಬಿರುಗಾಳಿ ಹಾಗೂ ಸಿಡಿಲು ಸಹಿತ ಗುಡುಗು ಸಂಭವಿಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಲು ಸೂಚಿಸಲಾಗಿದೆ. ಇದೇ ಸಮಯದಲ್ಲಿ ಉತ್ತರ ಒಳನಾಡಿನ ಕರ್ನಾಟಕದಲ್ಲೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಸೋಮವಾರ ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿ.ಸೆ. ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 0.3 ಡಿ.ಸೆ. ಕಡಿಮೆಯಾಗಿದೆ. ಕನಿಷ್ಠ ತಾಪಮಾನ 26.1 ಡಿ.ಸೆ. ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 0.8 ಡಿ.ಸೆ. ಹೆಚ್ಚಾಗಿದೆ.

ಸೋಮವಾರ ಕರಾವಳಿಯ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದರೂ ಮಳೆಯಾಗಿರಲಿಲ್ಲ. ಆದರೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಈಗಾಗಲೇ ಸಾಧಾರಣ ಮಳೆಯಾಗಿರುವುದು ವರದಿಯಾಗಿದೆ. ಮೇ 6 ಮತ್ತು 7 ರಂದು ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಲಘು ಅಥವಾ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆರಾಯನದ್ದೇ ಹವಾ! ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್​

ಉತ್ತರ ಒಳನಾಡು (ಬೀದರ್, ಕಲಬುರಗಿ, ಯಾದಗಿರಿ) ಈ ಭಾಗದಲ್ಲಿ ಮೇ 7 ರಂದು ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ತಾಪಮಾನದಲ್ಲಿ ಸ್ಥಿರತೆ ಕಂಡುಬರಲಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಾರಾಂತ್ಯದಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗಲಿದ್ದು, ಪ್ರವಾಸಿಗರು ಜಾಗರೂಕರಾಗಿರಲು ಸೂಚಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Tue, 5 May 26

Follow Us
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!