AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಆರ್ಭಟ, ಪ್ರಮುಖ ಜಿಲ್ಲೆಗಳಿಗೆ ಅಲರ್ಟ್

ಆಗಸ್ಟ್ 6ರಂದು ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ತೀವ್ರಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆಯಿದೆ. ಕರಾವಳಿ ತೀರದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲೂ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಕರ್ನಾಟಕ ಹವಾಮಾನ ವರದಿ: ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಆರ್ಭಟ, ಪ್ರಮುಖ ಜಿಲ್ಲೆಗಳಿಗೆ ಅಲರ್ಟ್
ಸಾಮದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 06, 2026 | 7:03 AM

Share

ಬೆಂಗಳೂರು, ಆ.6: ನೈಋತ್ಯ ಮಾನ್ಸೂನ್ (ಮಳೆಗಾಲ) ರಾಜ್ಯಾದ್ಯಂತ ಚುರುಕಾಗಿದ್ದು, ಇಂದು (ಆಗಸ್ಟ್ 6) ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ರಭಸ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು (Heavy Rain Alert), ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಮಲೆನಾಡು ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಕಾವೇರಿ ಹಾಗೂ ತುಂಗಾ ನದಿ ಕೊಳ್ಳದ ಪ್ರದೇಶಗಳಲ್ಲಿ ಜಲಾನಯನ ಭಾಗದಲ್ಲಿ ಮಳೆ ಹೆಚ್ಚಾಗಲಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಬೈಕ್ ಸವಾರನ ಮೇಲಿನ ದರ್ಪ ಪ್ರಕರಣ: ಮಾಲೂರು JMFC ಜಡ್ಜ್ ಗಾಯತ್ರಿ ಬೀದರ್‌ಗೆ ವರ್ಗಾವಣೆ

ಬೆಂಗಳೂರು ನಗರ/ಗ್ರಾಮಾಂತರ, ಮೈಸೂರು, ಹಾಸನ, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ (ಬೆಳಗಾವಿ, ಧಾರವಾಡ, ಹಾವೇರಿ, ರಾಯಚೂರು, ಕಲಬುರಗಿ) ಗಾಳಿ ಸಹಿತ ಸಾಧಾರಣ ಮಳೆಯಾಗಲಿದ್ದು, ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ತುಂತುರು ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ