ಹವಾಮಾನ ಇಲಾಖೆ ಎಚ್ಚರಿಕೆ: ಮುಂದಿನ 5 ದಿನಗಳ ಕಾಲ ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ

ಕರ್ನಾಟಕದಲ್ಲಿ ಅಕ್ಟೋಬರ್ 15 ರಿಂದ 20 ರವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಅಕ್ಟೋಬರ್ 16 ರಿಂದ 20 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆ ಎಚ್ಚರಿಕೆ: ಮುಂದಿನ 5 ದಿನಗಳ ಕಾಲ ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ
ಸಾಂರ್ಭಿಕ ಚಿತ್ರ
Edited By:

Updated on: Oct 15, 2026 | 12:18 PM

ಮಂಗಳೂರು , ಅ.15: ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಕರಾವಳಿ ಕರ್ನಾಟಕದಾದ್ಯಂತ ಅಕ್ಟೋಬರ್ 16 ರಿಂದ 20 ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಕರ್ನಾಟಕ ಹವಾಮಾನ ಇಲಾಖೆ ನೀಡಿದೆ.

ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆಯ ಅಬ್ಬರ?:

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 16 ರಿಂದ ಅಕ್ಟೋಬರ್ 20 ರವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ವಿಜಯನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 20 ರವರೆಗೆ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನಲ್ಲೂ ಮಳೆಯ ಆರ್ಭಟ ಹೇಗಿದೆ?:

ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಅಕ್ಟೋಬರ್ 16 ರಿಂದ 20 ರವರೆಗೆ ಮಳೆ ಸಾಧ್ಯತೆಯಿದೆ ಎಂದು ಇಲಾಖೆ ತನ್ನ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ:

ಇಂದು (ಅ.15) ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯೊಂದಿಗೆ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇನ್ನು ನಾಳೆ (ಅ.16) ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ವಿಜಯಪುರ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Thu, 15 October 26

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us