Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: 100 ಪರ್ಸೆಂಟ್‌ ಫಲಿತಾಂಶಕ್ಕಾಗಿ ಮಕ್ಕಳನ್ನು SSLC ಪರೀಕ್ಷೆ ಬರೆಯಲು ಬಿಡದ ಶಿಕ್ಷಕರು!

ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕೂರಿಸದೇ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಿದೆ. 100% ಫಲಿತಾಂಶದ ಆಸೆಗೆ ಬಿದ್ದು, ಶಾಲಾ ಮುಖ್ಯ ಶಿಕ್ಷಕರು ಹೀಗೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಲಾಗಿದೆ. ಪೋಷಕರ ಆಕ್ರೋಶದ ಬೆನ್ನೆಲ್ಲೇ ಉಳಿದ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಮಂಗಳೂರು: 100 ಪರ್ಸೆಂಟ್‌ ಫಲಿತಾಂಶಕ್ಕಾಗಿ ಮಕ್ಕಳನ್ನು SSLC ಪರೀಕ್ಷೆ ಬರೆಯಲು ಬಿಡದ ಶಿಕ್ಷಕರು!
ಮಂಗಳೂರು: 100 ಪರ್ಸೆಂಟ್‌ ಫಲಿತಾಂಶಕ್ಕಾಗಿ ಮಕ್ಕಳನ್ನು SSLC ಪರೀಕ್ಷೆ ಬರೆಯಲು ಬಿಡದ ಶಿಕ್ಷಕರು!
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Mar 28, 2025 | 11:48 AM

ಮಂಗಳೂರು, ಮಾರ್ಚ್​ 28: ಕರ್ನಾಟಕದಾದ್ಯಂತ ಎಸ್​ಎಸ್​ಎಲ್​ಸಿ (SSLC) ಪರೀಕ್ಷೆ ನಡೆಯುತ್ತಿದೆ. ಆದರೆ 100 ಪರ್ಸೆಂಟ್‌ ರಿಸಲ್ಟ್‌ಗಾಗಿ ಆಸೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಯೊಂದು ಎಡವಟ್ಟು ಮಾಡಿಕೊಂಡಿದೆ. ಇಬ್ಬರು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯರನ್ನ (Students) ಪರೀಕ್ಷೆಗೆ ಕೂರಿಸದೇ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಿದೆ. ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣ ನೀಡಿ ಇಬ್ಬರು ವಿದ್ಯಾರ್ಥಿನಿಯರಿಗೆ SSLC ಪರೀಕ್ಷೆ ಬರೆಯಲು ಅವಕಾಶವೇ ಕೊಟ್ಟಿಲ್ಲವಂತೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯೊಂದು, ಮಕ್ಕಳ ಭವಿಷ್ಯದ ಜತೆ ಚೆಲ್ಲಾಟವಾಡಿದೆ. ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣ ನೀಡಿ ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ.

ಪೋಷಕರ ಆಕ್ರೋಶ

ಇದನ್ನೂ ಓದಿ
Image
ವೈರಲ್ ಆಗ್ತಿವೆ ಎಸ್​ಎಸ್​ಎಲ್​ಸಿ ಪರೀಕ್ಷೆಯ ನಕಲಿ ಪ್ರಶ್ನೆ ಪತ್ರಿಕೆ
Image
ಹಡೆದವ್ವ ಸಾವಿನ ನೋವಿನಲ್ಲೂ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿ..!
Image
ಅಜ್ಜಿ ಮೃತದೇಹಕ್ಕೆ ಪೂಜೆ: ದುಃಖದಲ್ಲಿಯೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ
Image
SSLC ಪರೀಕ್ಷೆಗೆ ಕ್ಷಣಗಣನೆ: ಹಾಲ್​ ಟಿಕೆಟ್​ ಸಿಗದೇ ವಿದ್ಯಾರ್ಥಿಗಳು ಕಂಗಾಲು

ಮುಖ್ಯ ಶಿಕ್ಷಕರು 100 ಪರ್ಸೆಂಟ್ ಫಲಿತಾಂಶ ದಾಖಲಿಸಬೇಕೆಂಬ ದುರುದ್ದೇಶದಿಂದಲೇ ಓದೋದರಲ್ಲಿ ಹಿಂದುಳಿದ ಇಬ್ಬರು ವಿದ್ಯಾರ್ಥಿನಿಯರಿಗೆ ಹಾಲ್ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ನಮ್ಮ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಇದನ್ನೂ ಓದಿ: SSLC ಪರೀಕ್ಷೆಗೆ ಕ್ಷಣಗಣನೆ: ಇನ್ನೂ ಹಾಲ್​ ಟಿಕೆಟ್​ ಸಿಗದೇ ವಿದ್ಯಾರ್ಥಿಗಳು ಕಂಗಾಲು, ಪೋಷಕರು ಆತಂಕ

ಇತ್ತ ವಿದ್ಯಾರ್ಥಿನಿಯರು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿಡಿಪಿಐ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ರಾಜ್ಯ ಎಸ್​ಡಿಎಂಸಿ ಸಮನ್ವಯ ವೇದಿಕೆಗೆ ಪತ್ರ ಬರೆದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಶಾಲೆಗೆ ಭೇಟಿ ನೀಡಿದ್ದ ಬಿಇಓ ಹಾಲ್ ಟಿಕೆಟ್ ಕೊಡಿಸಿದ್ದು, ಉಳಿದ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಅಲ್ಲದೆ ಈ ಬಗ್ಗೆ ತನಿಖೆ ನಡೆಸುವುದಾಗಿ ಬಿಇಒ ಹೇಳಿದ್ದಾರೆ. ಅದೇನೆ ಇರಲಿ ಮಕ್ಕಳ ಭವಿಷ್ಯದ ಜತೆ ಹೀಗೆ ಚೆಲ್ಲಾಟ ಆಡುವವರಿಗೆ ಬಿಸಿ ಮುಟ್ಟಿಸಬೇಕಿದೆ.

ಪರೀಕ್ಷಾ ಕೇಂದ್ರದಲ್ಲೇ ತೀವ್ರ ಹೊಟ್ಟೆ ನೋವಿನಿಂದ ಬಳಲಿದ್ದ ವಿದ್ಯಾರ್ಥಿನಿ

ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರದಲ್ಲೇ ತೀವ್ರ ಹೊಟ್ಟೆ ನೋವಿನಿಂದ ವಿದ್ಯಾರ್ಥಿನಿ ಬಳಲಿದ್ದ ಘಟನೆ ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಸರ್ಕಾರಿ ಪಿಯು ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ. ತುರ್ತಾಗಿ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಝಿಯಾ ಬಾನು ಹೊಟ್ಟೆ ನೋವಿನಿಂದ ಬಳಲಿದ ವಿದ್ಯಾರ್ಥಿನಿ.

ಇದನ್ನೂ ಓದಿ: ಅಜ್ಜಿ ಮೃತದೇಹಕ್ಕೆ ಪೂಜೆ ಸಲ್ಲಿಸಿ ದುಃಖದಲ್ಲಿಯೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ

ಪರೀಕ್ಷೆ ಆರಂಭವಾದ ಕೆಲ ಕ್ಷಣದಲ್ಲಿ ಹೊನ್ನಾಳಿ ಜನತಾ ಉರ್ದು ಹೈಸ್ಕೂಲ್ ವಿದ್ಯಾರ್ಥಿನಿ ನಾಝಿಯಾ ಭಾನು ಗೆ ತೀವ್ರ ಹೊಟ್ಟೆ ನೋವು ಶುರುವಾಗಿತ್ತು. ಬಳಿಕ ಹೊನ್ನಾಳಿ ತಾಲೂಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಬಳಿಕ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದ ವಿದ್ಯಾರ್ಥಿನಿ ಮತ್ತೆ ಪರೀಕ್ಷೆಗೆ ಹಾಜರಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:47 am, Fri, 28 March 25

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ