Mangaluru: ಸುರತ್ಕಲ್ನ ಕಾಟಿಪಳ್ಯದಲ್ಲಿ ಚಾಕು ಇರಿತ
ಮಂಗಳೂರು ಹೊರವಲಯದ ಸುರತ್ಕಲ್ನ ಕಾಟಿಪಳ್ಳ ನಾಲ್ಕನೇ ಬ್ಲಾಕ್ನಲ್ಲಿ ಜಲೀಲ್ ಎಂಬಾತನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ.
ಮಂಗಳೂರು: ಮಂಗಳೂರು (Mangalore) ಹೊರವಲಯದ ಸುರತ್ಕಲ್ನ (Surathkal) ಕಾಟಿಪಳ್ಳ ನಾಲ್ಕನೇ ಬ್ಲಾಕ್ನಲ್ಲಿ ಜಲೀಲ್ (45) ಎಂಬುವರಿಗೆ ದುಷ್ಕರ್ಮಿಗಳು ಇಂದು (ಡಿ. 24) ಚಾಕು ಇರಿದಿದ್ದಾರೆ. ಜಲೀಲ್ ಕಾಟಿಪಳ್ಳದ ನೈತಂಗಡಿ ರಸ್ತೆಯಲ್ಲಿರುವ ಲತೀಫಾ ಸ್ಟೋರ್ ಮಾಲಿಕರಾಗಿದ್ದರು. ಸ್ಟೋರ್ನಲ್ಲಿದ್ದ ಜಲೀಲ್ಗೆ ದುಷ್ಕರ್ಮಿಗಳ ಗುಂಪು ಚಾಕು ಇರಿದು ಪರಾರಿಯಾಗಿದ್ದರು. ಇದರಿಂದ ತೀರ್ವ ಗಯಗೊಂಡಿದ್ದ ಜಲೀಲ್ರನ್ನು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಲೀಲ್ ಸಾವನ್ನಪ್ಪಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹೊಸ ವರ್ಷ ಆಚರಣೆ; ಮಂಗಳೂರಿನ ಮೇಲೆ ಡ್ರಗ್ ಪೆಡ್ಲರ್ಗಳ ಕಣ್ಣು
ಹೊಸ ವರ್ಷಾಚರಣೆ ಆಚರಿಸಲು ಮಂಗಳೂರಿಗೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸುವ ಸಾಧ್ಯತೆ ಹಿನ್ನೆಲೆ ಡ್ರಗ್ ಪೆಡ್ಲರ್ಗಳ ಕಣ್ಣು ಮಂಗಳೂರಿನ ಮೇಲೆ ಬಿದ್ದಿದೆ. ಕೇರಳ ಸೇರಿದಂತೆ ವಿವಿಧ ಕಡೆಯಿಂದ ಗಾಂಜಾ, ಡ್ರಗ್ಸ್ ಅಪಾರ ಪ್ರಮಾಣದಲ್ಲಿ ಬರುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.
ಇದನ್ನೂ ಓದಿ: 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, 6 ತಿಂಗಳ ಗರ್ಭಿಣಿ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢ
ಮಹಿಳೆಯನ್ನು ಬರ್ಬರ ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು
ಹಾಸನ: ಕತ್ತು ಸೀಳಿ ಮಹಿಳೆಯ ಬರ್ಬರ ಹತ್ಯೆ ಮಾಡಿ, ದುಷ್ಕರ್ಮಿಗಳು ಪರಾರಿಯಾಗಿರುವಂತಹ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ(58) ಹತ್ಯೆಯಾದ ಮಹಿಳೆ. ಇಂದು(ಡಿ. 24) ಬೆಳಿಗ್ಗೆ ಹತ್ತು ಗಂಟೆ ಸಮಯದಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪಾರ್ವತಮ್ಮ ಪತಿ ರಾಜೇಗೌಡ ಹೊರಗೆ ಹೋಗಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಮಾಸ್ಕ್ ಧರಿಸಿ ಇಬ್ಬರು ಬೈಕ್‌ನಲ್ಲಿ ಬಂದು ಕೊಲೆ ಮಾಡಿರುವ ಆರೋಪ ಮಾಡಿದ್ದು, ಗ್ರಾಮಸ್ಥರು ದುಷ್ಕರ್ಮಿಗಳು ಬೈಕ್‌ನಲ್ಲಿ ಪರಾರಿಯಾಗುವುದನ್ನು ನೋಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:18 pm, Sat, 24 December 22