AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆಗೆ ಮುಹೂರ್ತ ಫಿಕ್ಸ್ ಮಾಡಿದ್ದ ಮಾಸ್ಟರ್ ಮೈಂಡ್​​ಗಳಿಬ್ಬರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಗಳಿಬ್ಬರು ಸಿಕ್ಕಿಬಿದ್ದಿದ್ದಾರೆ. ಸ್ಥಳೀಯ ನಿವಾಸಿ ಮಹಮ್ಮದ್ ನಝೀರ್ ಜೊತೆ ಸಂಪರ್ಕ ಮಾಡಿ 6 ತಿಂಗಳ ಹಿಂದೆ ಸಂಚು ಮಾಡಿ ದರೋಡೆ ನಡೆಸಲು ದಿನಾಂಕ ಹಾಗೂ ಸಮಯ ನಿಗದಿ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆಗೆ ಮುಹೂರ್ತ ಫಿಕ್ಸ್ ಮಾಡಿದ್ದ ಮಾಸ್ಟರ್ ಮೈಂಡ್​​ಗಳಿಬ್ಬರ ಬಂಧನ
Kotekaru Bank
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ|

Updated on:Feb 25, 2025 | 5:31 PM

Share

ಮಂಗಳೂರು, (ಫೆಬ್ರವರಿ 25): ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್​ ದರೋಡೆಯ ಇಬ್ಬರು ಮಾಸ್ಟರ್​ ಮೈಂಡ್​ಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಸಿ.ರೋಡ್ ನಿವಾಸಿ ಮಹಮ್ಮದ್ ನಜೀರ್​  ಹಾಗೂ ಭಾಸ್ಕರ್ ಬೆಳ್ಚಪಾಡ ಅಲಿಯಾಸ್ ಶಶಿ ಥೇವರ್  ಬಂಧಿತ ಮಾಸ್ಟರ್​ ಮೈಂಡ್​ಗಳು. ಸ್ಥಳೀಯ ನಿವಾಸಿ ಮಹಮ್ಮದ್ ನಜೀರ್ ಜೊತೆ ಸಂಪರ್ಕ ಮಾಡಿ 6 ತಿಂಗಳ ಹಿಂದೆ ಸಂಚು ರೂಪಿಸಿ ದರೋಡೆ ನಡೆಸಲು ಇಬ್ಬರು ದಿನಾಂಕ ಹಾಗೂ ಸಮಯ ನಿಗದಿ ಮಾಡಿದ್ದರು. ಇದೀಗ ಈ ಪ್ರಮುಖ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ದರೋಡೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳಲ್ಲಿ ಮಂಗಳೂರು ಪೊಲೀಸರು ಈಗಾಗಲೇ ಮುರುಗನ್ ಡಿ. ದೇವರ್, ಯೋಶುವಾ ರಾಜೇಂದ್ರನ್, ಕಣ್ಣನ್ ಮಣಿ ಮತ್ತು ಚಿನ್ನಾಭರಣ ಅಡಗಿಸಿಡಲು ಸಹಕರಿಸಿದ್ದ ಷಣ್ಮುಗಂ ಸುಂದರಂನನ್ನು ಬಂಧಿಸಿದ್ದಾರೆ.

ಆರೋಪಿಗಳು ದೋಚಿದ್ದ 18.314ಕೆ.ಜಿ. ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಲೆಕ್ಕಾಚಾರದ ಪ್ರಕಾರ 360ಗ್ರಾಂ ಚಿನ್ನಾಭರಣ ಇನ್ನೂ ಸಿಕ್ಕಿಲ್ಲ. ದರೋಡೆಯಲ್ಲಿ ಬ್ಯಾಂಕ್‌ನವರ ಲೆಕ್ಕಾಚಾರ ಪ್ರಕಾರ 11,67,044 ರೂ. ದರೋಡೆ ಮಾಡಲಾ ಗಿದ್ದು,  18.314 ಕೆಜಿ ಚಿನ್ನ ಹಾಗೂ  3,80,500 ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಳಿದ 7,86,544 ರೂ. ಮೊತ್ತ ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜನವರಿ 16ರಂದು ಮುಂಬೈನ ತಿಲಕನಗರದಿಂದ ಮುರುಗಂಡಿ ಮೂವರು ಸಹಚರರ ಜತೆ ಫಿಯೆಟ್ ಕಾರಿನಲ್ಲಿ ಹೊರಟ್ಟಿದ್ದ ಕಣ್ಣನ್ ಮಣಿ ಮತ್ತು ಇನ್ನಿಬ್ಬರು ರೈಲಿನಲ್ಲಿ ಬಂದಿದ್ದು, ದರೋಡೆ ಬಳಿಕ ಮುರುಗಂಡಿ ಮತ್ತು ಯೊಸುವಾ ರಾಜೇಂದ್ರನ್ ಫಿಯೆಟ್​ ಕಾರಿನಲ್ಲಿ ಕೇರಳ ಮೂಲಕ ತಮಿಳುನಾಡಿಗೆ ಪರಾರಿಯಾಗಿದ್ದರು. ಮೂವರು ಆರೋಪಿಗಳು ರಿಕ್ಷಾದಲ್ಲಿ ಹಾಗೂ ಒಬ್ಬ ಬಸ್​ ಮೂಲಕ ಮಂಗಳೂರು ಸೆಂಟ್ರಲ್​ ರೈಲ್ವೆ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಮುಂಬೈಗೆ ಪರಾರಿಯಾಗಿದ್ದರು.

Published On - 5:25 pm, Tue, 25 February 25