ಲೈಂಗಿಕ ದೌರ್ಜನ್ಯ ಆರೋಪ: ಬಾರ್ ಅಸೋಸಿಯೇಷನ್​ನಿಂದ ವಕೀಲ ರಾಜೇಶ್ ಭಟ್ ಅಮಾನತು

ಆರೋಪಿ‌ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಸನ್ನದು‌ ಅಮಾನತು ಮಾಡಲಾಗಿದೆ. ಕರ್ನಾಟಕ ವಕೀಲರ ಪರಿಷತ್​​ನಿಂದ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳಲಾಗಿದೆ. ಆರೋಪಿ‌ ವಕೀಲ ಕೆ.ಎಸ್.ಎನ್. ರಾಜೇಶ್ ವಿರುದ್ಧ ವಿಚಾರಣೆ ನಡೆಸಲು ಬಾರ್ ಕೌನ್ಸಿಲ್ ನಿರ್ಧಾರ ಮಾಡಿದೆ.

ಲೈಂಗಿಕ ದೌರ್ಜನ್ಯ ಆರೋಪ: ಬಾರ್ ಅಸೋಸಿಯೇಷನ್​ನಿಂದ ವಕೀಲ ರಾಜೇಶ್ ಭಟ್ ಅಮಾನತು
ವಕೀಲ ರಾಜೇಶ್ ಭಟ್
Follow us
TV9 Web
| Updated By: ganapathi bhat

Updated on:Oct 22, 2021 | 7:48 PM

ಮಂಗಳೂರು: ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಾರ್ ಅಸೋಸಿಯೇಷನ್​​ನಿಂದ ರಾಜೇಶ್ ಭಟ್ ಅಮಾನತು ಆಗಿದ್ದಾರೆ. ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್​​ನಿಂದ ಅಮಾನತು ಆಗಿದ್ದಾರೆ. ಮುಂದಿನ ಆದೇಶದವರೆಗೂ ಪ್ರಾಕ್ಟೀಸ್ ಮಾಡದಂತೆ ಸೂಚನೆ ನೀಡಲಾಗಿದೆ.

ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿ ಎಸ್‌ಪಿಪಿಯಾಗಿ ಕಾರ್ಯನಿರ್ವಹಿಸದಿರಲು ಸೂಚನೆ ಕೊಡಲಾಗಿದೆ. ಎಸಿಬಿ ಪೊಲೀಸ್ ಅಧೀಕ್ಷಕರಿಂದ ಸೂಚನಾ ಪತ್ರ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಎಸಿಬಿ ಪ್ರಕರಣಗಳಲ್ಲಿ ಅಭಿಯೋಜನೆ ಮಾಡದಂತೆ ಸೂಚನೆ ಕೊಡಲಾಗಿದೆ. ರಾಜೇಶ್ ಭಟ್ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಎಸಿಬಿ ಎಸ್​ಪಿಪಿ ಆಗಿ ನಿಯೋಜನೆಗೊಂಡಿದ್ದ ರಾಜೇಶ್ ಭಟ್​ಗೆ ಕಾರ್ಯನಿರ್ವಹಿಸದಿರಲು ಸೂಚಿಸಲಾಗಿದೆ.

ಅಷ್ಟೇ ಅಲ್ಲದೆ, ಆರೋಪಿ‌ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಸನ್ನದು‌ ಅಮಾನತು ಮಾಡಲಾಗಿದೆ. ಕರ್ನಾಟಕ ವಕೀಲರ ಪರಿಷತ್​​ನಿಂದ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳಲಾಗಿದೆ. ಆರೋಪಿ‌ ವಕೀಲ ಕೆ.ಎಸ್.ಎನ್. ರಾಜೇಶ್ ವಿರುದ್ಧ ವಿಚಾರಣೆ ನಡೆಸಲು ಬಾರ್ ಕೌನ್ಸಿಲ್ ನಿರ್ಧಾರ ಮಾಡಿದೆ. ವಕೀಲಿಕೆ ನಡೆಸದಂತೆ ಸನ್ನದು ಅಮಾನತು ಮಾಡಲಾಗಿದೆ. ಎಲ್. ಶ್ರೀನಿವಾಸ ಬಾಬು ಅಧ್ಯಕ್ಷತೆಯಲ್ಲಿ ನಡೆದ ಬಾರ್ ಕೌನ್ಸಿಲ್ ಸಭೆಯಲ್ಲಿ ಇಂದು ಈ ಬಗ್ಗೆ ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ: ವಕೀಲ K.S.N.ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಮೂವರು ಅರೆಸ್ಟ್, ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಇದನ್ನೂ ಓದಿ: ಮಂಗಳೂರು: ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ವಕೀಲ ರಾಜೇಶ್ ಭಟ್ ಸೇರಿ ನಾಲ್ವರ ವಿರುದ್ಧ ಎಫ್​ಐಆರ್; ತನಿಖೆಗೆ 3 ತಂಡ ರಚನೆ

Published On - 7:47 pm, Fri, 22 October 21

ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ