ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಧರ್ಮ ದಂಗಲ್​; ಅನ್ಯಧರ್ಮಿಯರ ವ್ಯಾಪಾರ ನಿಷೇಧಕ್ಕೆ ಆಗ್ರಹಿಸಿದ ಹಿಂದೂ ಸಂಘಟನೆಗಳು

ಚಂಪಾ ಷಷ್ಠಿ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೆ ನಡೆಯುತ್ತದೆ. ಈ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ‌ ಅವಕಾಶ ನೀಡದಂತೆ ಸುಬ್ರಹ್ಮಣ್ಯದ ಕುಮಾರಧಾರ ಬಳಿ ಹಿಂದೂ ಸಂಘಟನೆಗಳು ಬ್ಯಾನರ್ ಹಾಕಿ ಮನವಿ ಸಲ್ಲಿಸಿದ್ದಾರೆ.

ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಧರ್ಮ ದಂಗಲ್​; ಅನ್ಯಧರ್ಮಿಯರ ವ್ಯಾಪಾರ ನಿಷೇಧಕ್ಕೆ ಆಗ್ರಹಿಸಿದ ಹಿಂದೂ ಸಂಘಟನೆಗಳು
ಕುಕ್ಕೆ ಸುಬ್ರಮಣ್ಯ ದೇವಸ್ಥಾನ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 15, 2023 | 2:44 PM

ದಕ್ಷಿಣ ಕನ್ನಡ, ಡಿ.15: ದೇವಾಲಯಗಳ ಬಳಿ ಹಿಂದೂಗಳನ್ನು ಹೊರತುಪಡಿಸಿ ಬೇರೆಯವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎನ್ನುವ ಹೋರಾಟ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ(Kukke Subramanya) ದೇವಸ್ಥಾನದಲ್ಲಿ ಮತ್ತೆ ಶುರುವಾಗಿದೆ. ಡಿಸೆಂಬರ್​.18 ರಂದು ನಡೆಯಲಿರುವ ಚಂಪಾ ಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ‌ ಸಂಘಟನೆಗಳು ಒತ್ತಾಯಿಸಿದ್ದಾವೆ. ಈ ಹಿನ್ನಲೆ ದೇವಳದ ಕಾರ್ಯ ನಿರ್ವಹಣಾ ಅಧಿಕಾರಿಯವರಿಗೆ ಮನವಿ ಸಲ್ಲಿಸಿದ್ದಾರೆ.

ಅನ್ಯಮತೀಯರಿಗೆ‌ ವ್ಯಾಪಾರಕ್ಕೆ‌ ವಿರೋಧಿಸಿ ಬ್ಯಾನರ್

ಚಂಪಾ ಷಷ್ಠಿ ಸಂದರ್ಭದಲ್ಲಿ ಇಲ್ಲಿ ಜಾತ್ರೆ ನಡೆಯುತ್ತದೆ. ಈ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ‌ ಅವಕಾಶ ನೀಡದಂತೆ ಸುಬ್ರಹ್ಮಣ್ಯದ ಕುಮಾರಧಾರ ಬಳಿ ಹಿಂದೂ ಸಂಘಟನೆಗಳು ಬ್ಯಾನರ್ ಹಾಕಿ ಮನವಿ ಸಲ್ಲಿಸಿದ್ದಾರೆ. ಹಿಂದೂ ಹಿತರಕ್ಷಣಾ ವೇದಿಕೆ ಸುಬ್ರಹ್ಮಣ್ಯ ಎನ್ನುವ ಹೆಸರಲ್ಲಿ ಈ ಬ್ಯಾನರ್ ಹಾಕಲಾಗಿದೆ. ಇದರಲ್ಲಿ ‘ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯಮತೀಯ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ  ಎಂದು ಬರೆಯಲಾಗಿದೆ. ಇನ್ನು ಈ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನ ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದೆ.

ಇದನ್ನೂ ಓದಿ:ಧಾರವಾಡದಲ್ಲಿ ಮತ್ತೆ ಮುನ್ನೆಲೆಗೆ ಬಂದ ಧರ್ಮ ದಂಗಲ್; ದೇವಸ್ಥಾನಗಳಲ್ಲಿ ಅನ್ಯ ಧರ್ಮದವರ ವ್ಯಾಪಾರ ನಿಷೇಧಕ್ಕೆ ಆಗ್ರಹ

ಧಾರವಾಡದಲ್ಲೂ ಧರ್ಮ ದಂಗಲ್​

ಕಳೆದ ವರ್ಷ ಏಪ್ರಿಲ್ 9 ರಂದು ಧಾರವಾಡ ತಾಲೂಕಿನ ಪ್ರಸಿದ್ಧ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಯೊಬ್ಬರ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಗಲಾಟೆ ಮಾಡಿದ್ದರು. ಯಾವುದೇ ಕಾರಣಕ್ಕೂ ಹಿಂದೂ ದೇವಸ್ಥಾನಗಳ ಬಳಿಕ ಬೇರೆ ಧರ್ಮದವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬಾರದು ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಆಗ್ರಹಿಸಿದ್ದರು. ಇದೀಗ ಅದೇ ದೇವಸ್ಥಾನದಲ್ಲಿ ಮತ್ತೆ ಬೇರೆ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಸಂಘಟನೆ ಕಾರ್ಯಕರ್ತರು ಆಗ್ರಹಿಸಿ, ಮತ್ತೊಮ್ಮೆ ಹೋರಾಟ ಆರಂಭಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Fri, 15 December 23

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ