ಕುಕ್ಕೆ ಸುಬ್ರಹ್ಮಣ್ಯ ಆದಾಯದಲ್ಲಿ ಭಾರಿ ಏರಿಕೆ: ವಾರ್ಷಿಕ ಆದಾಯ 155.95 ಕೋಟಿ ರೂ

Kukke Subrahmanya Temple income: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ಆದಾಯ 155.95 ಕೋಟಿ ರೂ ಏರಿಕೆಯಾಗಿದೆ. ಅಂದರೆ ಕಳೆದ ವರ್ಷಕ್ಕಿಂತ 9.94 ಕೋಟಿ ರೂ ಹೆಚ್ಚಳವಾಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನವೆಂದು ಸಾಬೀತಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ಆದಾಯದಲ್ಲಿ ಭಾರಿ ಏರಿಕೆ: ವಾರ್ಷಿಕ ಆದಾಯ 155.95 ಕೋಟಿ ರೂ
ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ
Updated By: ಗಂಗಾಧರ​ ಬ. ಸಾಬೋಜಿ

Updated on: Apr 17, 2025 | 9:34 AM

ಮಂಗಳೂರು, ಏಪ್ರಿಲ್​ 17: ಕರ್ನಾಟಕದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ (Kukke Subrahmanya) ದೇವಸ್ಥಾನದ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ (income) 146.01 ಕೋಟಿ ರೂ. ಆಗಿತ್ತು. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

ವರ್ಷದಿಂದ ವರ್ಷಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ಕಳೆದ ವರ್ಷವೂ ಪ್ರಥಮ ಸ್ಥಾನದಲ್ಲಿತ್ತು. ಈ ಭಾರಿ ಕೂಡ ವಾರ್ಷಿಕ ಆದಾಯದಲ್ಲಿ ಏರಿಕೆಯಿಂದಾಗಿ ಮತ್ತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತನ್ನ ಪ್ರಥಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಶಕ್ತಿ ಯೋಜನೆ ಪರಿಣಾಮ ಕುಕ್ಕೆ ದೇವಸ್ಥಾನದ ಆದಾಯದಲ್ಲಿ ಹೆಚ್ಚಳ ಸಾಧ್ಯತೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Mangaluru Kukke Subrahmanya Train: ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ಮಧ್ಯೆ ಹೊಸ ರೈಲು: ಸಚಿವ ಸೋಮಣ್ಣ ಘೋಷಣೆ

ಇದನ್ನೂ ಓದಿ
ವಿಜಯಪುರ-ಬೆಂಗಳೂರು ಪ್ರಯಾಣ 10 ಗಂಟೆಗೆ ತಗ್ಗಿಸಲು ಸಚಿವ ಎಂಬಿ ಪಾಟೀಲ್ ಸೂಚನೆ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಗುಡ್ ಫ್ರೈಡೇ, ವಾರಾಂತ್ಯ ರಜೆ ಹಿನ್ನೆಲೆ ಗಗನಕ್ಕೇರಿದ ಖಾಸಗಿ ಬಸ್ ಟಿಕೆಟ್ ದರ
ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ಮಧ್ಯೆ ಹೊಸ ರೈಲು: ಸಚಿವ ಸೋಮಣ್ಣ ಘೋಷಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿ ಇಲಾಖೆಯಡಿ ಬರುತ್ತದೆ. ಇನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ನಾಗಾರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಸರ್ಪ ಸಂಸ್ಕಾರ ಸೇರಿದಂತೆ ವಿವಿಧ ಸೇವೆ ಹಾಗೂ ಇತರ ಮೂಲಗಳಿಂದ ಒಟ್ಟು 155.95 ಕೋಟಿ ರೂ ಆದಾಯವಾಗಿದೆ. ದೇವಸ್ಥಾನದ ಒಟ್ಟು ಖರ್ಚು 79.82 ಕೋಟಿ ರೂ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕ್ಷೇತ್ರವಾರು ಆದಾಯ 

  • 2011-12 ರಲ್ಲಿ 56.24 ಕೋಟಿ ರೂ.
  • 2020-21ರಲ್ಲಿ 68.94 ಕೋಟಿ ರೂ.
  • 2021-22 ರಲ್ಲಿ 72.73 ಕೋಟಿ ರೂ.
  • 2022-23ರಲ್ಲಿ 123 ಕೋಟಿ ರೂ.
  • 2023-24 146.01 ಕೋಟಿ ರೂ.

ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: 35 ದಿನಗಳಲ್ಲಿ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ

ಅತೀ ಹೆಚ್ಚು ಆದಾಯ ಗಳಿಸುವ ದೇವಾಲಯಗಳ ಪಟ್ಟಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಪ್ರಥಮ ಸ್ಥಾನದಲ್ಲಿದ್ದರೆ, ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಸ್ಥಾನ ಎರಡನೇ ಸ್ಥಾನದಲ್ಲಿದೆ. ಈ ದೇವಸ್ಥಾನದ ಆದಾಯ 31 ಕೋಟಿ ರೂ. ಅದೇ ರೀತಿಯಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು 20 ಕೋಟಿ ರೂ.ಗಳ ಅಂದಾಜು ಆದಾಯದೊಂದಿಗೆ ಮೂರನೇ ಸ್ಥಾನದಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:48 am, Thu, 17 April 25