AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champa Shashti 2022: ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಬ್ರಹ್ಮರಥೋತ್ಸವ, ವಿಶೇಷ ಪೂಜೆ

ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಕೊವಿಡ್ ನಿರ್ಬಂಧಗಳ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಬ್ರಹ್ಮರಥೋತ್ಸವಕ್ಕೆ ಹೆಚ್ಚಿನ ಜನರು ಸೇರಲು ಅವಕಾಶ ಸಿಕ್ಕಿರಲಿಲ್ಲ.

Champa Shashti 2022: ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಬ್ರಹ್ಮರಥೋತ್ಸವ, ವಿಶೇಷ ಪೂಜೆ
ಕುಕ್ಕೆ ಸುಬ್ರಹ್ಮಣ್ಯ ರಥೋತ್ಸವ (ಸಂಗ್ರಹ ಚಿತ್ರ)
TV9 Web
| Updated By: ಡಾ. ಭಾಸ್ಕರ ಹೆಗಡೆ|

Updated on:Nov 29, 2022 | 2:29 PM

Share

ಮಂಗಳೂರು: ಕರ್ನಾಟಕದ ಪ್ರಸಿದ್ಧ ನಾಗಕ್ಷೇತ್ರ, ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ (Kukke Subramanya) ಮಂಗಳವಾರ ಚಂಪಾ ಷಷ್ಠಿ (Champa Shashti 2022) ಪ್ರಯುಕ್ತ ಕ್ಷೇತ್ರದ ದೇವರಾದ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವವು ಸಡಗರ, ಸಂಭ್ರಮದಿಂದ ನಡೆಯಿತು. ರಥಾರೂಢರಾದ ಕುಕ್ಕೆ ಸುಬ್ರಹ್ಮಣ್ಯ ದೇವರು ರಥಬೀದಿಯಲ್ಲಿ ಸಂಚರಿಸಿದ್ದನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು. ಬೆಳಿಗ್ಗೆ 7.05ರ ವೃಶ್ಚಿಕ ಲಗ್ನದಲ್ಲಿ ದೇವರ ವಿಗ್ರಹಗಳ ಬ್ರಹ್ಮರಥಾರೋಹಣ‌ ನಡೆಯಿತು. ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದರು. ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಕೊವಿಡ್ ನಿರ್ಬಂಧಗಳ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಬ್ರಹ್ಮರಥೋತ್ಸವಕ್ಕೆ ಹೆಚ್ಚಿನ ಜನರು ಸೇರಲು ಅವಕಾಶ ಸಿಕ್ಕಿರಲಿಲ್ಲ.

ದೇವಸ್ಥಾನದಲ್ಲಿ ಬೆಳ್ಳಿ ರಥೋತ್ಸವ ಹಿನ್ನೆಲೆಯಲ್ಲಿ ಸ್ವಾಮಿಗೆ ಇಂದು ವಿಶೇಷ ಅಭಿಷೇಕ ಮತ್ತು ಪೂಜೆಗಳು ನಡೆಯಲಿವೆ. ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ಕುರಿತು ಬ್ಯಾನರ್ ಹಾಕಿದ್ದು ವಿವಾದಕ್ಕೆ ಕಾರಣವಾಗಿತ್ತು. ಉತ್ಸವದ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 626ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 49 ಪಿಎಸ್ಐ, 14 ಇನ್​ಸ್ಪೆಕ್ಟರ್, 16 ಎಸಿಪಿ, 158 ಎಎಸ್ಐ, 148 ಹೆಡ್​ಕಾಸ್ಟೇಬಲ್, 236 ಪಿಸಿ, 22 ಹೋಂಗಾರ್ಡ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ದೂರದ ಊರುಗಳಿಂದ ಭಕ್ತರ ದಂಡು

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಚಂಪಾಷಷ್ಠಿಯಲ್ಲಿ ಪಾಲ್ಗೊಳ್ಳಲೆಂದು ದೂರದ ಊರುಗಳಿಂದ ಸಾಕಷ್ಟು ಭಕ್ತರು ಬಂದಿದ್ದಾರೆ. ಭಕ್ತರ ಅನುಕೂಲಕ್ಕಾಗಿ ತಾತ್ಕಾಲಿಕ ಆಸ್ಪತ್ರೆ ಆರಂಭಿಸಲಾಗಿದೆ. ಕೃಷಿಮೇಳವೂ ಜನರ ಗಮನ ಸೆಳೆಯುತ್ತಿದೆ. ಜಾತ್ರೆಯ ಹಿನ್ನೆಲೆಯಲ್ಲಿ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ವಿವಿಧೆಡೆ ಅಳವಡಿಸಿರುವ ಪ್ರಭಾವಳಿಗಳು ಮತ್ತು ದೇವರ ಕಲಾಕೃತಿಗಳು ಜಾತ್ರೆಯ ವೈಭವವನ್ನು ಹೆಚ್ಚಿಸಿವೆ. ರಥೋತ್ಸವಕ್ಕೆ ಸೇರುವವರ ಸಂಖ್ಯೆ ದೊಡ್ಡಮಟ್ಟದಲ್ಲಿರುವ ಕಾರಣ ಕಾಲ್ತುಳಿದಂಥ ಅಪಾಯ ಉಂಟಾಗಬಾರದು ಎನ್ನುವ ಕಾರಣಕ್ಕೆ ರಥ ಎಳೆಯುವವರಿಗೆ ಮೊದಲೇ ಪಾಸ್​ಗಳನ್ನು ನೀಡಲಾಗಿತ್ತು.

ಈ ಬಾರಿ ರಥಕ್ಕೆ ಬಳಸಿದ ಬೆತ್ತವನ್ನು ದೇವಳವೇ ಉಪಯೋಗಿಸಲು ನಿರ್ಧರಿಸಿದೆ. ದೇಗುಲದಲ್ಲಿ ವಿವಿಧ ಸೇವೆ ಸಲ್ಲಿಸಿದವರಿಗೆ ಕೊಡುವ ಪ್ರಸಾದದಲ್ಲಿ ಬೆತ್ತದ ತುಂಡನ್ನು ನೀಡಲಾಗುತ್ತದೆ. ಭಕ್ತರಲ್ಲಿ ಬೆತ್ತಕ್ಕಾಗಿ ಪೈಪೋಟಿ ನಡೆಯಬಾರದು, ಭಕ್ತರಿಗೆ ಕೊಡಲು ಬೆತ್ತದ ತುಂಡು ಕಡಿಮೆಯಾಗಬಾರದು ಎನ್ನುವ ಕಾರಣಕ್ಕೆ ದೇಗುಲ ಸಮಿತಿ ಈ ನಿರ್ಧಾರಕ್ಕೆ ಬಂದಿದೆ.

ಕುಕ್ಕೆಯಲ್ಲಿ ಎಡೆಸ್ನಾನ ಪುನಾರಂಭ

ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಮಡೆಸ್ನಾನಕ್ಕೆ ಸುಪ್ರೀಂ ಕೋರ್ಟ್ ‌ತಡೆಯಾಜ್ಞೆ ಇರುವ ಹಿನ್ನೆಲೆಯಲ್ಲಿ ಈ ಬಾರಿ ಭಕ್ತರಿಗೆ ಎಡೆಸ್ನಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇತ್ತೀಚೆಗೆ ಕೊವಿಡ್ ಕಾರಣದಿಂದ ಈ ಪದ್ಧತಿ ನಿಂತಿತ್ತು. ದೇವಾಲಯದ ಅಂಗಳದ ಸುತ್ತಲೂ ಎಲೆಗಳನ್ನು ಹಾಕಿ, ಬಡಿಸಿದ್ದ ನೈವೇದ್ಯವನ್ನು ಹಸುಗಳು ತಿಂದ ಬಳಿಕ ಭಕ್ತರು ಅವುಗಳ ಮೇಲೆ ಉರುಳಿ ಎಡೆಸ್ನಾನ ಮಾಡಿದರು.

ಇದನ್ನೂ ಓದಿ: Champa Shashti: ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಉತ್ಸವದಲ್ಲಿ ಅಂಗಡಿ ಹಾಕಲು ಹಿಂದೂಗಳಿಗೆ ಮಾತ್ರ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:38 am, Tue, 29 November 22

ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?