Kukke Subramanya ChampaShashti: ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಚಂಪಾಷಷ್ಠಿಯ ಈ ದಿನದಂದು ಮಾತ್ರ ಎಡೆಸ್ನಾನಕ್ಕೆ ಅವಕಾಶ

ChampaShashti: ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲಾಗಿದೆ. ಕೊರೊನಾ ಸಮಯದಲ್ಲಿ ಈ ಆಚರಣೆಗೆ ನಿರ್ಬಂಧಿಸಲಾಗಿತ್ತು. ನವೆಂಬರ್ 21ರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದೆ.

Kukke Subramanya ChampaShashti: ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಚಂಪಾಷಷ್ಠಿಯ ಈ ದಿನದಂದು ಮಾತ್ರ ಎಡೆಸ್ನಾನಕ್ಕೆ ಅವಕಾಶ
Kukke Subramanya ChampaShashti
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 16, 2022 | 3:01 PM

ದಕ್ಷಿಣ ಕನ್ನಡ:  ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ (Kukke Subramanya) ಚಂಪಾ ಷಷ್ಠಿಯ (ChampaShashti) ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲಾಗಿದೆ. ಕೊರೊನಾ ಸಮಯದಲ್ಲಿ ಈ ಆಚರಣೆಗೆ ನಿರ್ಬಂಧಿಸಲಾಗಿತ್ತು. ನವೆಂಬರ್ 21ರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದೆ. ಈಗಾಗಲೇ ಆಡಳಿತ ಮಂಡಳಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಸುವ ಬಗ್ಗೆ ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದೆ. ಲಕ್ಷ ದೀಪೋತ್ಸವ ದಿನದಂದು ರಾತ್ರಿ ರಥೋತ್ಸವದ ಇಲ್ಲಿನ ಬೀದಿಯಲ್ಲಿ ಉರುಳು ಸೇವೆ ಮಾಡುವವರಿಗೆ ಸಂಜೆ 5ರಿಂದ ಬೆಳಗ್ಗೆ 6 ಗಂಟೆವರೆಗೆ ಅವಕಾಶ ನೀಡಲಾಗುವುದು ಎಂದು ಮಹತ್ವದ ಸಭೆಯಲ್ಲಿ  ತಿಳಿಸಿದ್ದಾರೆ.

ಸಭೆಯಲ್ಲಿ ತಿಳಿಸಿರುವಂತೆ ಈ ಬಾರಿ ಮೂರು ದಿನ ಎಡೆಸ್ನಾನಕ್ಕೆ ಅವಕಾಶ ನೀಡಲಾಗಿದೆ. ಚೌತಿ, ಪಂಚಮಿ ಮತ್ತು ಷಷ್ಠಿಯಂದು ಎಡೆಸ್ನಾನ ಮಾಡಬಹುದು. ಅಂದರೆ, ನ.27, 28 ಮತ್ತು 29ರಂದು ಇದಕ್ಕೆ ಅವಕಾಶ ಸಿಗಲಿದೆ. ಮಧ್ಯಾಹ್ನ ಮಹಾಪೂಜೆಯ ಬಳಿಕ ಭಕ್ತರು ಸ್ವ-ಇಚ್ಛೆಯಲ್ಲಿ ಎಡೆಸ್ನಾನದಲ್ಲಿ ಭಾಗವಹಿಸಬಹುದು.

ಅಂಗಳದ ಸುತ್ತಲೂ ಎಲೆಗಳನ್ನ ಹಾಕಿ ಅದ್ರಲ್ಲಿ ನೈವೇದ್ಯ ಬಡಿಸಲಾಗುತ್ತೆ. ಅದ‌ನ್ನ ಹಸುಗಳು ತಿಂದ ಬಳಿಕ ಭಕ್ತರು ಎಲೆಯ ಮೇಲೆ ಉರುಳೋದು ಎಡೆಸ್ನಾನ. ಧಾರ್ಮಿಕ ದತ್ತಿ ಇಲಾಖೆಯ ಇಬ್ಬರು ಆಗಮಶಾಸ್ತ್ರ ಪಂಡಿತರು ಉಪಸ್ಥಿತಿಯಲ್ಲಿ ಈ ಎಡೆಸ್ನಾನ ನಡೆಯಲಿದೆ ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ ಅಂದರೆ ಅವರ ನೇತೃತ್ವದಲ್ಲೇ ಈ ಕಾರ್ಯ ನಡೆಯುತ್ತದೆ.

ಇದನ್ನು ಓದಿ: Kukke Subramanya temple town: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇನ್ನು ಜಿಯೋ 4G ಡಿಜಿಟಲ್ ಲೈಫ್ ಸಂಪರ್ಕ ಸಂಭ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಕುಣಿತ ಭಜನೆ ನಡೆಸಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಅನೇಕ ತಂಡಗಳಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ಇಲ್ಲಿನ ಆಡಳಿತ ಮಂಡಳಿ ತಿಳಿಸಿರುವಂತೆ 1 ಸಾವಿರಕ್ಕೂ ಹೆಚ್ಚು ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. ಪ್ರತಿಕಾ ಪ್ರಕಟನೆಯಲ್ಲಿ ತಿಳಿಸಿರುವಂತೆ ಕುಣಿತ ಭಜನೆಗೆ ಹೆಸರನ್ನು ನೋಂದಾಯಿಸಿಕೊಳ್ಳಬಹು ಎಂದು ಹೇಳಿದೆ.

ಒಂದು ಸಾವಿರ ತಂಡಗಳು ಭಾಗವಹಿಸುವ ಕಾರಣದಿಂದ ಕ್ಷೇತ್ರದ ರಾಜಗೋಪುರದ ಬಳಿಯಿಂದ ರಥಬೀದಿ, ಅಡ್ಡಬೀದಿ ಕಾಶಿಕಟ್ಟೆಯಾಗಿ ಕುಮಾರಧಾರದವರೆಗೆ ಭಜನೆ ನಡೆಸಲು ಅವಕಾಶವನ್ನು ನೀಡಿದೆ. ನವೆಂಬರ್ 23 ರ ಲಕ್ಷದೀಪೋತ್ಸವದ ದಿನ ಸಂಜೆ 7ರಿಂದ ನಡೆಯಲಿದೆ. ಪ್ರತಿ ತಂಡದಲ್ಲೂ 10 ಜನ ಇರಬೇಕು. ನವೆಂಬರ್ 20ರೊಳಗೆ ಕ್ಷೇತ್ರದ ಕಚೇರಿಗೆ ಬಂದು ಹೆಸರು ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಹೇಳಲಾಗಿದೆ.

Published On - 2:58 pm, Wed, 16 November 22

‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ