AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಈ ಎರಡು ದಿನ ಆಶ್ಲೇಷಬಲಿ, ಸರ್ಪಸಂಸ್ಕಾರ ಸೇವೆಗಳು ರದ್ದು: ಕಾರಣ ಇಲ್ಲಿದೆ ನೋಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆಪ್ಟೆಂಬರ್ 3, 4, 6 ಮತ್ತು 7 ರಂದು ಕೆಲವು ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ, ದಶಮಿ ಮತ್ತು ಏಕಾದಶಿ ಹಿನ್ನೆಲೆಯಲ್ಲಿ ಆಶ್ಲೇಷಬಲಿ, ನಾಗಪ್ರತಿಷ್ಠೆ ಸೇವೆಗಳು ಲಭ್ಯವಿರುವುದಿಲ್ಲ. ಆದಾಗ್ಯೂ, ಭಕ್ತರಿಗೆ ದೇವರ ದರ್ಶನ ಹಾಗೂ ನಿತ್ಯಪೂಜೆಗಳು ಎಂದಿನಂತೆ ನಡೆಯಲಿವೆ. ವಿಶೇಷ ಸೇವೆಗಳನ್ನು ಯೋಜಿಸಿರುವವರು ಈ ದಿನಾಂಕಗಳನ್ನು ಗಮನಿಸಿ ಪ್ರಯಾಣಿಸಿ.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಈ ಎರಡು ದಿನ ಆಶ್ಲೇಷಬಲಿ, ಸರ್ಪಸಂಸ್ಕಾರ ಸೇವೆಗಳು ರದ್ದು: ಕಾರಣ ಇಲ್ಲಿದೆ ನೋಡಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 31, 2026 | 6:02 PM

Share

ಸುಬ್ರಹ್ಮಣ್ಯ, ಆ.31: ನಾಗಕ್ಷೇತ್ರ ಎಂದೇ ಪ್ರಸಿದ್ಧ ಪಡೆದಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಶಮಿ-ಏಕಾದಶಿ ವ್ರತಗಳ ಹಿನ್ನೆಲೆಯಲ್ಲಿ ಬರುವ ಸೆಪ್ಟಂಬರ್ ತಿಂಗಳ ಕೆಲವು ನಿರ್ದಿಷ್ಟ ದಿನಗಳಂದು ಧಾರ್ಮಿಕ ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಜಂಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ, ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ದೇವರ ದರ್ಶನ ಹಾಗೂ ದಿನನಿತ್ಯದ ಪೂಜಾ ಕಾರ್ಯಕ್ರಮಗಳಲ್ಲಿ ಯಾವುದೇ ಅಡಚಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸೆಪ್ಟಂಬರ್ 3 ಮತ್ತು 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಇರುವ ಕಾರಣ ಹಾಗೂ ದಶಮಿ ಮತ್ತು ಏಕಾದಶಿ ಹಿನ್ನೆಲೆಯಲ್ಲಿ 6,7ರಂದು ವಿಶೇಷ ಸೇವೆಗಳು ಲಭ್ಯವಿಲ್ಲ ಎಂದು ಆಡಳಿತ ಮಂಡಳಿ ಹೇಳಿದೆ. ಇನ್ನು ಸೆಪ್ಟಂಬರ್ 4 ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ.7ರಂದು ಏಕಾದಶಿ ಇರುವ ಕಾರಣದಿಂದ ಆಶ್ಲೇಷಬಲಿ, ನಾಗಪ್ರತಿಷ್ಠೆ ಹಾಗೂ ಮಹಾಭಿಷೇಕಸೇವೆಗಳು ನಡೆಯುವುದಿಲ್ಲ. ಹಾಗಾಗಿ ಈ ದಿನದಂದು ಭಕ್ತರಿಗೆ ದರ್ಶನಕ್ಕೆ ಮಾತ್ರ ಅವಕಾಶ ಇದೆ ಎಂದು ಹೇಳಲಾಗಿದೆ.

ಇಲ್ಲಿದೆ ನೋಡಿ ಪ್ರಕಟಣೆ:

Kundapra Kannada Utsava Bengaluru (3)

Kundapra Kannada Utsava Bengaluru (3)

ವಿಶೇಷ ಸೇವೆಗಳು ರದ್ದಾಗಿದ್ದರೂ ದೇವಸ್ಥಾನದ ದೈನಂದಿನ ಧಾರ್ಮಿಕ ಕೈಂಕರ್ಯಗಳು ತಡೆರಹಿತವಾಗಿ ನಡೆಯಲಿವೆ. ಮಹಾಪೂಜೆ, ಶೇಷಸೇವೆ, ಅಭಿಷೇಕ ಹಾಗೂ ಅರ್ಚನೆ ಸೇರಿದಂತೆ ದಿನನಿತ್ಯದ ಎಲ್ಲಾ ಸೇವೆಗಳು ಯಥಾವತ್ತಾಗಿ ನೆರವೇರುತ್ತವೆ. ಶ್ರೀದೇವರ ದರ್ಶನ ಪಡೆಯಲು ಆಗಮಿಸುವ ಭಕ್ತಾದಿಗಳಿಗೆ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ.

ಇದನ್ನೂ ಓದಿ: ಮಧ್ಯರಾತ್ರಿಯಲ್ಲೇ ಜನ್ಮಾಷ್ಟಮಿ ಆಚರಣೆ ಏಕೆ? ಗೋಕುಲದಲ್ಲಿ ನಡೆದಿತ್ತು ಅದೊಂದು ಪವಾಡ

ಕ್ಷೇತ್ರಕ್ಕೆ ಆಗಮಿಸಿ ಸರ್ಪಸಂಸ್ಕಾರ, ಆಶ್ಲೇಷಬಲಿ, ನಾಗಪ್ರತಿಷ್ಠೆ ಹಾಗೂ ಮಹಾಭಿಷೇಕ ಮುಂತಾದ ವಿಶೇಷ ಪೂಜೆಗಳನ್ನು ನೆರವೇರಿಸಲು ಯೋಜಿಸಿರುವ ಭಕ್ತಾದಿಗಳು ಈ ಮೇಲ್ಕಂಡ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣ ಹಾಗೂ ಸೇವಾ ಮುಂಗಡ ಕಾಯ್ದಿರಿಸುವಿಕೆಯನ್ನು ಯೋಜಿಸಿಕೊಳ್ಳಬೇಕು. ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು ಜಂಟಿಯಾಗಿ ಈ ಪ್ರಕಟಣೆ ಹೊರಡಿಸಿದ್ದು, ದೇವಸ್ಥಾನದ ಸುಗಮ ನಿರ್ವಹಣೆಗೆ ಭಕ್ತಾದಿಗಳು ಸಂಪೂರ್ಣ ಸಹಕಾರ ನೀಡಬೇಕಾಗಿ ವಿನಂತಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು