ರಾಜೇಶ್ ಭಟ್ ಪ್ರತಿಕ್ರಿಯೆ ಇಲ್ಲಿದೆ:
ತನಿಖೆಯ ನಂತರ ಸಮಗ್ರ ವರದಿ ಸಲ್ಲಿಸಲಾಗುವುದು; ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯೆ
ಮಂಗಳೂರು: ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ FIR ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಇಂಟರ್ನ್‌ಶಿಪ್ ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತನೆ ಹಾಗೂ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ದೂರು ನೀಡಿದ್ದಾರೆ. ಹೀಗಾಗಿ ವಕೀಲ ರಾಜೇಶ್ ಭಟ್ ವಿರುದ್ಧ ಒಟ್ಟು 2 ಪ್ರಕರಣ ದಾಖಲಿಸಲಾಗಿದ್ದು, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು ಹಾಗೂ ಸಂತ್ರಸ್ತೆಗೆ ಬೆದರಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.
ಸಂತ್ರಸ್ತೆಗೆ ಸಹಾಯ ಮಾಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆದರಿಸಿದ ಹಿನ್ನೆಲೆ ಕೇಸ್ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಸದ್ಯಕ್ಕೆ ಆರೋಪಿ ಇನ್ನೂ ಪತ್ತೆಯಾಗಿಲ್ಲ. ಪ್ರಕರಣದ ಸಮಗ್ರ ತನಿಖೆಯ ಬಳಿಕ ಕೋರ್ಟ್‌ಗೆ ವರದಿ ಸಲ್ಲಿಸುತ್ತೇವೆ ಎಂದು ಟಿವಿ9ಗೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.
ಪ್ರಕರಣವೇನು?
ಇಂಟರ್ನ್‌ಶಿಪ್ ವಿದ್ಯಾರ್ಥಿನಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವಕೀಲ ರಾಜೇಶ್ ಭಟ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸಂತ್ರಸ್ತ ಯುವತಿ ನಿನ್ನೆ (ಅಕ್ಟೋಬರ್ 18) ದೂರು ನೀಡಿದ್ದಾರೆ. ಕಳೆದ ಕೆಲವು ಸಮಯದಿಂದ ರಾಜೇಶ್ ಭಟ್ ಹಾಗೂ ಸಂತ್ರಸ್ತ ಯುವತಿ ಮಾತನಾಡಿದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗಿತ್ತು.
ಇದನ್ನೂ ಓದಿ:
ಲೈಂಗಿಕ ದೌರ್ಜನ್ಯದ ಆರೋಪ; ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಎಫ್ಐಆರ್ ದಾಖಲು
BBMP: ಘೋಷಣೆಗೆ ಸೀಮಿತವಾದ ಮಳೆ ಹಾನಿ ಪರಿಹಾರ; ಕೇವಲ ಪ್ರಮಾಣ ಪತ್ರ ಕೊಟ್ಟು ಸುಮ್ಮನಾದ ಬಿಬಿಎಂಪಿ