ಇಂಟರ್ನ್​ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ; ಈವರೆಗೂ ಪತ್ತೆಯಾಗದ ವಕೀಲ ರಾಜೇಶ್ ಭಟ್

ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಈ ಮಧ್ಯೆ ಅರೋಪಿಯನ್ನು ಪೊಲೀಸರು ಬಂಧಿಸಲು ನಿರಂತರ ಹುಡುಕಾಟ ನಡೆಸುತ್ತಿದ್ದಾರೆ.

ಇಂಟರ್ನ್​ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ; ಈವರೆಗೂ ಪತ್ತೆಯಾಗದ ವಕೀಲ ರಾಜೇಶ್ ಭಟ್
ವಕೀಲ ರಾಜೇಶ್ ಭಟ್

ಮಂಗಳೂರು: ಇಂಟರ್ನ್ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಈವರೆಗೂ ಪತ್ತೆಯಾಗಿಲ್ಲ. ರಾಜೇಶ್ ಭಟ್ಗಾಗಿ ಮಂಗಳೂರು ಪೊಲೀಸರು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ. ವಕೀಲ ರಾಜೇಶ್ ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಆದರೆ ನ್ಯಾಯಾಲಯ ಮಧ್ಯಂತರ ಜಾಮೀನನ್ನು ತಿರಸ್ಕರಿಸಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಈ ಮಧ್ಯೆ ಅರೋಪಿಯನ್ನು ಪೊಲೀಸರು ಬಂಧಿಸಲು ನಿರಂತರ ಹುಡುಕಾಟ ನಡೆಸುತ್ತಿದ್ದಾರೆ.

ರಾಜೇಶ್ ಭಟ್ ಅಮಾನತು

ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಾರ್ ಅಸೋಸಿಯೇಷನ್​ನಿಂದ ರಾಜೇಶ್ ಭಟ್ ಅಮಾನತು ಆಗಿದ್ದಾರೆ. ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್ನಿಂದ ಅಮಾನತು ಆಗಿದ್ದಾರೆ. ಮುಂದಿನ ಆದೇಶದವರೆಗೂ ಪ್ರಾಕ್ಟೀಸ್ ಮಾಡದಂತೆ ಸೂಚನೆ ನೀಡಲಾಗಿದೆ.

ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿ ಎಸ್ಪಿಪಿಯಾಗಿ ಕಾರ್ಯನಿರ್ವಹಿಸದಿರಲು ಸೂಚನೆ ಕೊಡಲಾಗಿದೆ. ಎಸಿಬಿ ಪೊಲೀಸ್ ಅಧೀಕ್ಷಕರಿಂದ ಸೂಚನಾ ಪತ್ರ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಎಸಿಬಿ ಪ್ರಕರಣಗಳಲ್ಲಿ ಅಭಿಯೋಜನೆ ಮಾಡದಂತೆ ಸೂಚನೆ ಕೊಡಲಾಗಿದೆ. ರಾಜೇಶ್ ಭಟ್ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಎಸಿಬಿ ಎಸ್ಪಿಪಿ ಆಗಿ ನಿಯೋಜನೆಗೊಂಡಿದ್ದ ರಾಜೇಶ್ ಭಟ್​ಗೆ ಕಾರ್ಯನಿರ್ವಹಿಸದಿರಲು ಸೂಚಿಸಲಾಗಿದೆ.

ಇದನ್ನೂ ಓದಿ

ಬೆಳಗಾವಿ: ಇಂದು ಚನ್ನಮ್ಮನ ಕಿತ್ತೂರು ಉತ್ಸವಕ್ಕೆ ಬೆಳ್ಳಿಹಬ್ಬದ ಸಂಭ್ರಮ; ಸಂಜೆ 7 ಗಂಟೆಗೆ ಉತ್ಸವಕ್ಕೆ ಚಾಲನೆ ನೀಡಲಿರುವ ಸಿಎಂ

West Indies vs England: ಇಂದಿನಿಂದ ಸೂಪರ್ 12 ಹಂತ: ಚಾಂಪಿಯನ್ ವೆಸ್ಟ್​ ಇಂಡೀಸ್​ ಹಾಗೂ ಇಂಗ್ಲೆಂಡ್ ಮುಖಾಮುಖಿ

Click on your DTH Provider to Add TV9 Kannada