AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leopard Attack: ತೋಟಕ್ಕೆ ಹೋದವರ ಮೇಲೆ ಚಿರತೆ ದಾಳಿ; ನಾಯಿಯೊಂದಿಗೆ ಲಾಕ್ ಆಗಿದ್ದ ಚಿರತೆಯೇ ಇರಬಹುದೆಂಬ ಅನುಮಾನ

Leopard Attack: ಕಳೆದ ಕೆಲ ದಿನಗಳ ಹಿಂದೆ ಚಿರತೆ ಮನೆಗೆ ನುಗ್ಗಿತ್ತು. ಆದರೆ ಅದನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವಿಫಲರಾಗಿದ್ದರು.

Leopard Attack: ತೋಟಕ್ಕೆ ಹೋದವರ ಮೇಲೆ ಚಿರತೆ ದಾಳಿ; ನಾಯಿಯೊಂದಿಗೆ ಲಾಕ್ ಆಗಿದ್ದ ಚಿರತೆಯೇ ಇರಬಹುದೆಂಬ ಅನುಮಾನ
ಚಿರತೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ
sandhya thejappa
| Edited By: |

Updated on: Feb 12, 2021 | 4:11 PM

Share

ಮಂಗಳೂರು: ತೋಟಕ್ಕೆ ಹೋದವರ ಮೇಲೆ ಚಿರತೆ ದಾಳಿ ನಡೆದ ಘಟನೆ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ನಡೆದಿದೆ. ಗಾಯಾಳುಗಳು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಕಡಬ ತಾಲೂಕಿನ ಕೈಕಂಬ ಗ್ರಾಮದ ಮನೆಯೊಂದರಲ್ಲಿ ನಾಯಿಯೊಂದಿಗೆ ಶೌಚಾಲಯ ಪ್ರವೇಶಿಸಿದ್ದ ಚಿರತೆಯನ್ನು ಮನೆ ಮಾಲೀಕರು ಅಲ್ಲಿಯೇ ಚಿಲಕ ಹಾಕಿ ಕೂಡಿಟ್ಟಿದ್ದರು. ಅರಣ್ಯ ಇಲಾಖೆಯ ಬಲೆಗೆ ಸಿಗದ ಚಿರತೆ ತಪ್ಪಿಸಿಕೊಂಡು ಕಾಡು ಸೇರಿತ್ತು.

ಇದೇ ಚಿರತೆ ತೋಟದಲ್ಲಿ ಇದೀಗ ಇಬ್ಬರ ಮೇಲೆ ದಾಳಿ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಸದ್ಯ ಅರಣ್ಯ ಇಲಾಖೆಯು ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ನಡೆಸುತ್ತಿದೆ.

ಕಾರ್ಯಚರಣೆಯಲ್ಲಿ ತೊಡಗಿರುವ ಅರಣ್ಯ ಇಲಾಖೆ.

ಕಳೆದ ಕೆಲ ದಿನಗಳ ಹಿಂದೆ ಚಿರತೆ ಮನೆಗೆ ನುಗ್ಗಿತ್ತು. ಆದರೆ ಅದನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವಿಫಲರಾಗಿದ್ದರು. ಇದೀಗ ಮತ್ತೆ ಅದೇ ಚಿರತೆಯಿಂದ ನಸುಕಿನ ಜಾವ ಅಡಿಕೆ ತೋಟಕ್ಕೆ ನೀರು ಬಿಡಲು ಹೋಗಿದ್ದ ಇಬ್ಬರ ಮೇಲೆ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಶೇಖರ್ ಕಾಮತ್ ಮತ್ತು ಸೌಮ್ಯಾ ಕಾಮತ್ ಚಿರತೆ ದಾಳಿಗೊಳದವರು ಎಂದು ತಿಳಿದುಬಂದಿದೆ. ಚಿರತೆ ದಾಳಿಯಿಂದ ಇಬ್ಬರಿಗೂ ತರಚಿದ ಗಾಯಗಳಾಗಿದ್ದು, ಸದ್ಯ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಅರಣ್ಯ ಇಲಾಖೆ ಸಿಬ್ಬಂದಿ ಕೈಗೆ ಸಿಗದೆ ಪರಾರಿಯಾಯ್ತು ನಾಯಿ ಜೊತೆ ಬಂಧಿಯಾಗಿದ್ದ ಚಿರತೆ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ