AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ಧರ್ಮಸ್ಥಳದ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ

ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷಾ ಎಸ್ ನಾಯರ್ ಪಂಜಾಬ್​ನಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಪಂಜಾಬ್​ನ ವಿಶ್ವವಿದ್ಯಾಲಯವೊಂದರಲ್ಲಿ ಓದಿದ್ದ ಆಕಾಂಕ್ಷಾ ಅವರಿಗೆ ಜಪಾನ್​ನಲ್ಲಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಈ ಹಿನ್ನೆಲೆಯಲ್ಲಿ ಶನಿವಾರ (ಮೇ.17) ರಂದು ಸರ್ಟಿಫಿಕೇಟ್​​ಗಳನ್ನು ತರಲು ಪಂಜಾಬ್​ಗೆ ತೆರಳಿದ್ದರು. ಆದರೆ, ಅಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಆಕಾಂಕ್ಷಾ ಸಾವಿಗೆ ಕಾರಣವೇನು ಎಂಬುವುದು ಬಹಿರಂಗವಾಗಿದೆ.

ಪಂಜಾಬ್​ನಲ್ಲಿ ಧರ್ಮಸ್ಥಳದ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ
ಮೃತ ಆಕಾಂಕ್ಷ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ವಿವೇಕ ಬಿರಾದಾರ|

Updated on:May 19, 2025 | 7:55 AM

Share

ಮಂಗಳೂರು, ಮೇ 19: ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಧರ್ಮಸ್ಥಳ (Dharmasthala) ಮೂಲದ ಏರೋನಾಟಿಕ್ಸ್ ಇಂಜಿನಿಯರ್ ನಿಗೂಢ ಸಾವು ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಯುವತಿ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆಕಾಂಕ್ಷಾ ಎಸ್ ನಾಯರ್ (22) ಮೃತ ದುರ್ದೈವಿ.

ಧರ್ಮಸ್ಥಳದ ಬೊಳಿಯೂರು ನಿವಾಸಿಯಾಗಿರುವ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಪುತ್ರಿ ಆಕಾಂಕ್ಷಾ ಎಸ್ ನಾಯರ್ ಅವರು, ಶನಿವಾರ (ಮೇ.17) ರಂದು ಪಂಜಾಬ್​ನ ಪಗ್ವಾರದ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಆಕಾಂಕ್ಷಾ ಅವರು ಇದೇ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ ಎಂಬುವರನ್ನು ಪ್ರೀತಿಸುತ್ತಿದ್ದರು. ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ ಕೇರಳದ ಕೊಟ್ಟಾಯಂ ನಿವಾಸಿಯಾಗಿದ್ದು, ಎರಡು ಮಕ್ಕಳ ತಂದೆಯಾಗಿದ್ದಾರೆ. ಆಕಾಂಕ್ಷಾ ಪ್ರಾಧ್ಯಾಪಕ ಮ್ಯಾಥ್ಯೂ ಜೊತೆ ಅವರ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಜಗಳ ಮಾಡಿದ್ದರು.

ಇದನ್ನೂ ಓದಿ
Image
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ
Image
ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷ ಗಾದಿಗೆ ಮಾಜಿ ರೌಡಿಶೀಟರ್​ ಆಯ್ಕೆ
Image
ಮಹಿಳೆಗೆ ಗುಪ್ತಾಂಗ ತೋರಿಸಿದ ಉಪಾಧ್ಯಕ್ಷ: ಬಿಜೆಪಿಯಿಂದ ಉಚ್ಛಾಟನೆ
Image
ಮಂಗಳೂರು: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್

ಬಳಿಕ ಆಕಾಂಕ್ಷಾ ಕಾಲೇಜಿನಲ್ಲೂ‌ ಬಿಜಿಲ್ ಮ್ಯಾಥ್ಯೂ ಅವರ ಜೊತೆ ಜಗಳವಾಡಿದ್ದಾರೆ. ನಂತರ, ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದ ಹಿನ್ನೆಲೆಯಲ್ಲಿ ಮ್ಯಾಥ್ಯೂ ವಿರುದ್ಧ ಪಂಜಾಬ್​ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ (ಮೇ.19) ಸಂಜೆ ವೇಳೆಗೆ ಧರ್ಮಸ್ಥಳ ಬೊಳಿಯೂರು ಮನೆಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

ಇದನ್ನೂ ಓದಿ: ಪಂಜಾಬ್​​ನಲ್ಲಿ ಧರ್ಮಸ್ಥಳ ಯುವತಿ ನಿಗೂಢ ಸಾವು: ಸರ್ಟಿಫಿಕೇಟ್ ತರಲು ಹೋಗಿ ದುರಂತ ಅಂತ್ಯ

ಜಪಾನ್​ನಲ್ಲಿ ಕೆಲಸ ಮಾಡುವ ಆಸೆ ಹೊಂದಿದ್ದ ಆಕಾಂಕ್ಷಾ

ಆಕಾಂಕ್ಷಾ, 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್​​ ಆಗಿ ಕೆಲಸ ಮಾಡುತ್ತಿದ್ದರು. ಉದ್ಯೋಗಕ್ಕಾಗಿ ಜಪಾನ್​ಗೆ ಹೋಗಲು ಯೋಚಿಸಿದ್ದರು. ಈ ಹಿನ್ನೆಲೆಯಲ್ಲಿ, ಶನಿವಾರ (ಮೇ.19) ಕಾಲೇಜಿಗೆ ತೆರಳಿ ಸರ್ಟಿಫಿಕೇಟ್​ಗಳನ್ನು ತೆಗೆದುಕೊಂಡು ಬರಲು ಹೋಗಿದ್ದರು. ಅಲ್ಲದೆ, ಸರ್ಟಿಫಿಕೇಟ್​ಗಳನ್ನು ತೆಗೆದುಕೊಂಡಿರುವುದಾಗಿ ಪೋಷಕರಿಗೆ ಕರೆ ಮಾಡಿ ಆಕಾಂಕ್ಷಾ ತಿಳಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 am, Mon, 19 May 25