Lunar eclipse 2023: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶನಿವಾರ ದೇವರ ದರ್ಶನ ಸಮಯ ಬದಲು, ಚಂದ್ರ ಗ್ರಹಣ ಪ್ರಯುಕ್ತ ಅನ್ನದಾನ ಸೇವೆಯೂ ಬಂದ್

Kukke Shree Subrahmanya Temple: ಶನಿವಾರ ಸಂಜೆಯ ಆಶ್ಲೇಷಾ ಬಲಿ ಹಾಗೂ ರಾತ್ರಿಯ ಅನ್ನದಾನ (Annadana) ಸೇವೆಯೂ ಬಂದ್ ಆಗಿರುತ್ತದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಶನಿವಾರ ರಾತ್ರಿ 01.04 ಗಂಟೆಗೆ ಗ್ರಹಣ ಸ್ಪರ್ಶವಾಗಿ ರಾತ್ರಿ 02.24 ಗಂಟೆಗೆ ಗ್ರಹಣ ಮೋಕ್ಷ ಪ್ರಾಪ್ತಿಯಾಗಲಿದೆ.

Lunar eclipse 2023: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶನಿವಾರ ದೇವರ ದರ್ಶನ ಸಮಯ ಬದಲು, ಚಂದ್ರ ಗ್ರಹಣ ಪ್ರಯುಕ್ತ ಅನ್ನದಾನ ಸೇವೆಯೂ ಬಂದ್
ಚಂದ್ರಗ್ರಹಣ -ಕುಕ್ಕೆ ಶ್ರೀಕ್ಷೇತ್ರದಲ್ಲಿ ಶನಿವಾರ ದೇವರ ದರ್ಶನ ಸಮಯ ಬದಲು
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಸಾಧು ಶ್ರೀನಾಥ್​

Updated on:Oct 26, 2023 | 3:01 PM

ಮಂಗಳೂರು, ಅಕ್ಟೋಬರ್ 26: ನಾಳಿದ್ದು ಶನಿವಾರ ಅಕ್ಟೋಬರ್​ 28 ರಂದು ಈ ವರ್ಷದ ಕೊನೆಯ ಚಂದ್ರಗ್ರಹಣ (Lunar eclipse 2023). ಹಾಗಾಗಿ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ (Kukke Shree Subrahmanya Temple) ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸವಿರುತ್ತದೆ. ಶನಿವಾರದಂದು ಸುಬ್ರಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ರಾತ್ರಿಯ ಮಹಾಪೂಜೆ ಸಂಜೆ 6.30 ಕ್ಕೇ ಮುಕ್ತಾಯವಾಗಲಿದೆ. ಅಕ್ಟೋಬರ್​ 28ರ ಸಂಜೆ ಶನಿವಾರ ಸಂಜೆ 6.30ರ ಬಳಿಕ ದೇವರ ದರ್ಶನ ಬಂದ್ ಮಾಡಲಾಗಿದೆ.

ಗ್ರಹಣ ಪ್ರಯುಕ್ತ ಅನ್ನದಾನ ಸೇವೆಯೂ ಬಂದ್:

ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಆದಾಯ ಗಳಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ

ಶನಿವಾರ ಸಂಜೆಯ ಆಶ್ಲೇಷಾ ಬಲಿ ಹಾಗೂ ರಾತ್ರಿಯ ಅನ್ನದಾನ (Annadana) ಸೇವೆಯೂ ಬಂದ್ ಆಗಿರುತ್ತದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಶನಿವಾರ ರಾತ್ರಿ 01.04 ಗಂಟೆಗೆ ಗ್ರಹಣ ಸ್ಪರ್ಶವಾಗಿ ರಾತ್ರಿ 02.24 ಗಂಟೆಗೆ ಗ್ರಹಣ ಮೋಕ್ಷ ಪ್ರಾಪ್ತಿಯಾಗಲಿದೆ.

ಉಡುಪಿಯ ಕೃಷ್ಣಮಠದಲ್ಲಿಯೂ ದೈನಂದಿನ ಪೂಜೆಯಲ್ಲಿ ವ್ಯತ್ಯಾಸ

ಶನಿವಾರ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಉಡುಪಿಯ ಕೃಷ್ಣಮಠದಲ್ಲಿ ಶ್ರೀ ಕೃಷ್ಣನ ದರ್ಶನಕ್ಕೆ ಸಮಯ ಬದಲಾವಣೆ ಮಾಡಲಾಗಿದೆ. ಅ. 28 (ಶನಿವಾರ) ಸಂಜೆ 4 ಗಂಟೆಯ ನಂತರ ಊಟದ ವ್ಯವಸ್ಥೆ ಸ್ಥಗಿತಗೊಳಿಸಲಾಗಿದೆ. ರಾತ್ರಿ ಮಠಕ್ಕೆ ಬಂದ ಭಕ್ತರಿಗೆ ನೀಡುತ್ತಿದ್ದ ಅನ್ನ ಪ್ರಸಾದ ರದ್ದಿಗೆ ಸಹ ಆದೇಶ ನೀಡಲಾಗಿದೆ. ಮಠಾಧೀಶರು ಉಪವಾಸ ಕೈಗೊಳ್ಳುವ ಮೂಲಕ ವ್ರತ ಆಚರಿಸಲಿದ್ದಾರೆ. ಇನ್ನು, ಮಠದ ಒಳಗಿರುವ ಮುಖ್ಯಪ್ರಾಣ ದೇವರಿಗೆ ರಂಗ ಪೂಜೆ ಇರುವುದಿಲ್ಲ. ಆದರೆ ಭೋಜನಾಲಯದ ಮುಖ್ಯಪ್ರಾಣ ದೇವರಿಗೆ ಶನಿವಾರ ಸಂಜೆ ರಂಗ ಪೂಜೆ ಇರುತ್ತದೆ. ಭಾನುವಾರ ಬೆಳಗ್ಗೆ ಒಂದು ಗಂಟೆ ಮುಂಚಿತವಾಗಿ ಪರ್ಯಾಯ ಕೃಷ್ಣಾಪುರ ಮಠಾಧೀಶರಿಂದ ದೈನಂದಿನ ಮಹಾಪೂಜೆ ಆರಂಭವಾಗುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:53 am, Thu, 26 October 23

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್