ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಗಳ ಕಾಲ ಗಡಿಪಾರು ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಆದೇಶ ನೀಡಿದ್ದು, 2026ರ ಡಿಸೆಂಬರ್ 17ರವರೆಗೆ ತಿಮರೋಡಿ ರಾಯಚೂರು ಜಿಲ್ಲೆಯಲ್ಲಿ ಇರಬೇಕಿದೆ. ಈ ಹಿಂದೆ ಹೈಕೋರ್ಟ್ ಸೂಚನೆ ಮೇರೆಗೆ ಕಾನೂನಾತ್ಮಕವಾಗಿ ಹೊಸ ಗಡಿಪಾರು ಆದೇಶವನ್ನು ಜಾರಿಗೊಳಿಸಲಾಗಿದೆ.

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್
ಸಾಂದರ್ಭಿಕ ಚಿತ್ರ
Edited By:

Updated on: Dec 18, 2025 | 11:06 AM

ಧರ್ಮಸ್ಥಳ, ಡಿ.18: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರನ್ನು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಇದೀಗ ಅವರು 1 ಲಕ್ಷ ಬಾಂಡ್​​ ನೀಡಿ. ಜೈಲಿನಿಂದ ಹೊರ ಬಂದಿದ್ದಾರೆ. ಇದರ ಬೆನ್ನಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಅವರಿಗೆ ಮತ್ತೆ ಗಡಿಪಾರಿ ನೋಟಿಸ್​​ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ಗಡಿಪಾರು ಮಾಡಲು ಆದೇಶ ನೀಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಆದೇಶವನ್ನು ನೀಡಿದ್ದಾರೆ. ಮೊನ್ನೆಯಷ್ಟೇ ತಿಮರೋಡಿಗೆ ಗಡಿಪಾರು ನೋಟೀಸ್ ನೀಡಿದ್ದ ಸ್ಟೆಲ್ಲಾ ವರ್ಗೀಸ್ ಇದೀಗ ಮತ್ತೆ ಆದೇಶ ನೀಡಿದ್ದಾರೆ.

ಯಾಕೆ ಗಡಿಪಾರು ಮಾಡಬಾರದು ಅಂತ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಡಿ.7ರಂದು ಸಹಾಯಕ ಆಯುಕ್ತರ ಗಡಿಪಾರು ನೊಟೀಸ್ ಗೆ ಆಕ್ಷೇಪಣೆ ಸಲ್ಲಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ. ಇದೀಗ ಸಹಾಯಕ ಆಯುಕ್ತರು ಇದಕ್ಕೆ ಉತ್ತರ ಎಂಬಂತೆ ಮತ್ತೊಂದು ನೋಟಿಸ್​​​ ಜಾರಿ ಮಾಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಪುತ್ತೂರು ಸಹಾಯಕ ಆಯುಕ್ತರ ಎದುರು ವಕೀಲರ ಮೂಲಕ ಆಕ್ಷೇಪಣೆ ಸಲ್ಲಿಸಿದ್ದರು. ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ವಕೀಲರು ಮತ್ತು ಆಯುಕ್ತರ ನಡುವೆ ವಾದ-ವಿವಾದ ನಡೆದು ಆಯುಕ್ತರು ತಿಮರೋಡಿ ವಿರುದ್ದ ಮತ್ತೆ ಗಡೀಪಾರು ಆದೇಶ ನೀಡಿದ್ದಾರೆ.

ತಿಮರೋಡಿ ವಿರುದ್ದದ ಈ ಹಿಂದಿನ ಕೇಸ್​​​ಗಳ ಜೊತೆಗೆ ಹಾಲಿ ಕೆಲ ಕೇಸು ಸೇರಿಸಿಕೊಂಡು ಗಡಿಪಾರು ಆದೇಶ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇಂದಿನಿಂದ (ಡಿ.18) 2026 ಡಿ.17ರವರೆಗೆ ಅಂದರೆ ಒಂದು ವರ್ಷಗಳ ಕಾಲ ಗಡಿಪಾರಿಗೆ ಆದೇಶ ನೀಡಲಾಗಿದೆ. ಇನ್ನು ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಮಾಡಲಾಗಿದೆ. ಈ ಹಿಂದೆ ತಿಮರೋಡಿ ಆಯುಕ್ತರ ಗಡಿಪಾರು ಆದೇಶವನ್ನು ಪ್ರಶ್ನಿಸಿ ಹಾಗೂ ಈ ಗಡೀಪಾರು ಆದೇಶವನ್ನು ರದ್ದು ಮಾಡವಂತೆ ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವ ಯುವಕ

ಹೊಸ ಆದೇಶಕ್ಕೆ ಹೈಕೋರ್ಟ್​​​ ಸೂಚನೆ:

ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್, ಗಡಿಪಾರು ಆದೇಶ ರದ್ದು ಮಾಡಿ. ಸೆಕ್ಷನ್ ಸರಿಪಡಿಸಿ ಹೊಸ ಆದೇಶ ನೀಡುವಂತೆ ಪುತ್ತೂರು ಎಸಿಗೆ ಸೂಚನೆ ನೀಡಿದೆ. ಇದೀಗ ಅದರಂತೆ ಕೆಲ ಕಾನೂನಾತ್ಮಕ ಪ್ರಕ್ರಿಯೆ ಅಡಿಯಲ್ಲಿ ತಿಮರೋಡಿ ಗಡಿಪಾರು ಪ್ರಕ್ರಿಯೆ ಆರಂಭಿಸಿದ್ದೇವೆ ಎಂದು ಪುತ್ತೂರಿನ ಸಹಾಯಕ ಆಯುಕ್ತೆ ಹೇಳಿದ್ದಾರೆ. ಸದ್ಯ ಎರಡನೇ ಬಾರಿಗೆ ಮತ್ತೆ ಮಹೇಶ್ ಶೆಟ್ಟಿ ತಿಮರೋಡಿ ಜಿಲ್ಲೆಯಿಂದ ಗಡಿಪಾರು ಆದೇಶ ನೀಡಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 am, Thu, 18 December 25