ಮಂಗಳೂರು ನ್ಯಾಯಾಲಯದಲ್ಲಿ ಇಂದು ಮಳಲಿ ಮಸೀದಿ ವಿವಾದ ವಿಚಾರಣೆ, ತೀರ್ಪು ಸಾಧ್ಯತೆ

ಮಳಲಿ ಮಸೀದಿ ಕುರಿತು ವಿಶ್ವ ಹಿಂದೂ ಪರಿಷತ್ ಮತ್ತು ಮುಸ್ಲಿಂ ಸೆಂಟ್ರಲ್ ಕಮಿಟಿ ಅರ್ಜಿಗಳನ್ನು ಸಲ್ಲಿಸಿವೆ.

ಮಂಗಳೂರು ನ್ಯಾಯಾಲಯದಲ್ಲಿ ಇಂದು ಮಳಲಿ ಮಸೀದಿ ವಿವಾದ ವಿಚಾರಣೆ, ತೀರ್ಪು ಸಾಧ್ಯತೆ
ಮಳಲಿ ದರ್ಗಾ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 06, 2022 | 1:13 PM

ಮಂಗಳೂರು: ದೇಶದ ಗಮನ ಸೆಳೆದಿರುವ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ತೀರ್ಪು ನೀಡುವ ಸಾಧ್ಯತೆಯಿದೆ. ಮಧ್ಯಾಹ್ನದ ಬಳಿಕ ಎರಡೂ ಕಡೆಯ ಅರ್ಜಿಗಳ ವಿಚಾರಣೆ ನಡೆಸಿ, ತೀರ್ಪು ನೀಡಬಹುದು. ಮಳಲಿ ಮಸೀದಿ ಕುರಿತು ವಿಶ್ವ ಹಿಂದೂ ಪರಿಷತ್ ಮತ್ತು ಮುಸ್ಲಿಂ ಸೆಂಟ್ರಲ್ ಕಮಿಟಿ ಅರ್ಜಿಗಳನ್ನು ಸಲ್ಲಿಸಿವೆ. ಮೇ 31 ಮತ್ತು ಜೂನ್ 1ರಂದು ಪ್ರಕರಣ ಸಂಬಂಧ ನ್ಯಾಯಾಲಯವು ಸುದೀರ್ಘ ವಿಚಾರಣೆ ನಡೆಸಿತ್ತು. ವಿಎಚ್​ಪಿ ಪರ ವಕೀಲರಾದ ಚಿದಾನಂದ ಕೆದಿಲಾಯ ಹಾಗೂ ಮಸೀದಿ ಪರ ವಕೀಲರಾದ ಎಂ.ಪಿ.ಶೆಣೈ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಮಳಲಿ ಮಸೀದಿಯ ಸಮೀಕ್ಷೆಗೆ ಕೋರ್ಟ್ ಕಮಿಷನರ್ ನೇಮಿಸಬೇಕೆಂದು ವಿಎಚ್​ಪಿ ಮನವಿ ಮಾಡಿದೆ. ವಿಎಚ್​ಪಿ ಮನವಿ ತಿರಸ್ಕರಿಸಬೇಕು ಮತ್ತು ನವೀಕರಣ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವು ಮಾಡಬೇಕು ಎಂದು ಮಸೀದಿ ಸಮಿತಿ ನ್ಯಾಯಾಲಯವನ್ನು ವಿನಂತರಿಸಿದೆ.

ಏನಿದು ವಿವಾದ

ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು. ನವೀಕರಣಕಕ್ಕಾಗಿ ದರ್ಗಾದ ಮುಂಭಾಗ ಕೆಡವಲಾಗಿತ್ತು. ದರ್ಗಾದ ಹಿಂಭಾಗದಲ್ಲಿ ಕಲಶ, ತೋಮರ, ಕಂಬಗಳ ಮಾದರಿ ಪತ್ತೆಯಾಗಿತ್ತು. ಬಹುಶಃ, ಇದು ಜೈನ ಬಸದಿ ಅಥವಾ ದೇವಸ್ಥಾನದ ಅವಶೇಷ ಆಗಿರಬಹುದು ಎಂದು ಹಿಂದುತ್ವಪರ ಸಂಘಟನೆಗಳು ಶಂಕಿಸಿವೆ.

ದರ್ಗಾ ಸಮಿತಿಯ ವಾದ

ಮಳಲಿ ದರ್ಗಾ ನವೀಕರಣಕ್ಕೆ ಅವಕಾಶ ಕೊಡಬಾರದು ಎಂದು ಆದೇಶಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ನ್ಯಾಯಾಲಯಕ್ಕೆ ಮನವಿ ಮಾಡಿದೆ. ಇದನ್ನು ಆಕ್ಷೇಪಿಸಿರುವ ದರ್ಗಾ ಪರ ವಕೀಲರು, ಮಸೀದಿಗೆ ನೂರಾರು ವರ್ಷಗಳ ಇತಿಹಾಸವಿದೆ. ಹಲವು ವರ್ಷಗಳಿಂದ ಮುಸ್ಲಿಮರು ಪ್ರಾರ್ಥನೆ ಮಾಡುತ್ತಿದ್ದಾರೆ. ಇದೇ ಸ್ಥಳದಲ್ಲಿ ದಫನ್ ಭೂಮಿ ಸಹ ಇದೆ. ಎಲ್ಲದಕ್ಕೂ ದಾಖಲೆಗಳಿದ್ದು, ಸ್ಥಳೀಯ ಪಂಚಾಯಿತಿ ಒಪ್ಪಿಗೆ ಪಡೆದು ದರ್ಗಾ ನವೀಕರಿಸಲಾಗುತ್ತಿದೆ. ಇದು ವಕ್ಫ್ ಆಸ್ತಿ ಎಂಬ ಬಗ್ಗೆ ಸರ್ಕಾರದ ದಾಖಲೆಗಳಲ್ಲೂ ಉಲ್ಲೇಖವಿದೆ. ಮಳಲಿ ಮಸೀದಿ ದರ್ಗಾವನ್ನು ಜ್ಞಾನವಾಪಿ ಪ್ರಕರಣಕ್ಕೆ ಹೋಲಿಸುವುದು ಸರಿಯಲ್ಲ. ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡಬೇಕು ಎಂಬ ಮನವಿ ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದರು.

Published On - 1:13 pm, Mon, 6 June 22

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್