ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಗಂಡನಿಂದ ದೂರು, ಉದ್ಯಮಿ ಪರಾರಿ
ಕೆಲಸ ಕೊಡಿಸುವ ನೆಪದಲ್ಲಿ 20 ವರ್ಷದ ವಿವಾಹಿತ ಮಹಿಳೆಗೆ ಉದ್ಯಮಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಘಟನೆ ನಡೆದಿದೆ.
ಮಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ 20 ವರ್ಷದ ವಿವಾಹಿತ ಮಹಿಳೆಗೆ ಉದ್ಯಮಿಯೊಬ್ಬರು ಲೈಂಗಿಕ (sexually) ಕಿರುಕುಳ ನೀಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಘಟನೆ ನಡೆದಿದೆ. ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಪ್ರಭಾಕರ ಹೆಗ್ಡೆ ವಿರುದ್ಧ ಮೈಗೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮತ್ತು ಆಕೆಯ ಗಂಡನಿಂದ ದೂರು ನೀಡಲಾಗಿದೆ. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾರೆ.
ಉದ್ಯಮಿ ತನ್ನ ಕಾರಿನಲ್ಲಿ ಕಿರುಕುಳ ನೀಡುವಾಗ ಯುವತಿ ಕಿರುಚಾಡಿ ಕಾರಿನಿಂದ ಹೊರಬಂದಿದ್ದಾರೆ. ಬೈಕ್ನಲ್ಲಿ ಬಂದ ಯುವಕರಿಂದ ಮಹಿಳೆಯ ರಕ್ಷಣೆ ಮಾಡಲಾಗಿದೆ. ತನ್ನ ಸೂಪರ್ ಮಾರ್ಕೇಟ್ನ ಬಿಲ್ಲಿಂಗ್ ತೋರಿಸೋದಾಗಿ ಕಾರಿನಲ್ಲಿ ಕರೆದೊಯ್ದು ಕಿಡ್ನಾಪ್ ಆರೋಪ ಸಹ ಮಹಿಳೆ ಮಾಡಿದ್ದಾರೆ.
ಭೀಕರ ರಸ್ತೆ ಅಪಘಾತ, 2 ಬಸ್ಗಳ ನಡುವೆ ಡಿಕ್ಕಿ: ಇಬ್ಬರು ದುರ್ಮರಣ
ಶಿವಮೊಗ್ಗ: ಎರಡು ಬಸ್ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಬಳಿಯ ಕುಮಧ್ವತಿ ಸೇತುವೆ ಮೇಲೆ ನಡೆದಿತ್ತು. ಹೊಸದುರ್ಗ ನಿವಾಸಿ ತಿಪ್ಪೇಸ್ವಾಮಿ, ಮತ್ತೊಬ್ಬ ಮಹಿಳೆ ಸಾವನ್ನಪ್ಪಿದ್ದರು. 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಪಘಾತ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದರು.
ಇದನ್ನೂ ಓದಿ: ವೋಟ್ ಹಾಕಿಲ್ಲವೆಂದು ಅಣ್ಣ ತಮ್ಮಂದಿರ ನಡುವೆ ಕಿರಿಕ್; ದೊಡ್ಡಪ್ಪನನ್ನೇ ಕೊಲೆ ಮಾಡಿದ ಮಗ
ಬಸ್ ಎಲ್ಲಿಂದ ಎಲ್ಲಿಗೆ ಹೊರಟಿತ್ತು ಎಂಬ ಮಾಹಿತಿ ದೊರೆತಿಲ್ಲ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ 5 ಆ್ಯಂಬ್ಯುಲೆನ್ಸ್ಗಳು ಮತ್ತು ಅಗ್ನಿಶಾಮಕ ದಳ ದಾವಿಸಿದ್ದರು. ಎರಡು ಬಸ್ಗಳು ಶಿಕಾರಿಪುರದ ಲೈನ್ ಬಸ್ಗಳು ಎಂದು ತಿಳಿದು ಬಂದಿದೆ.
ಅಪಘಾತದ ಬಗ್ಗೆ ಶಿವಮೊಗ್ಗದಲ್ಲಿ ಟಿವಿ9ಗೆ ಎಸ್ಪಿ ಮಿಥುನ್ಕುಮಾರ್ ಪ್ರತಿಕ್ರಿಯೆ ನೀಡಿದ್ದು, 2 ಬಸ್ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. 6 ಜನರ ಸ್ಥಿತಿ ಚಿಂತಾಜನಕ, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಸ್ನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದರು.
ಇದನ್ನೂ ಓದಿ: ಹಾಡುಹಗಲೇ ಸಾರಿಗೆ ಸಂಸ್ಥೆಯ ಚಾಲಕನ ಬರ್ಬರ ಹತ್ಯೆ; ಜನನಿಬಿಡ ಪ್ರದೇಶದಲ್ಲೆ ಚಾಲಕನನ್ನ ಅಟ್ಟಾಡಿಸಿಕೊಂಡು ಕೊಚ್ಚಿ ಕೊಂದ ಹಂತಕರು
ಡ್ರಗ್ಸ್ ಮಾರುತ್ತಿದ್ದ ಆರೋಪಿಗಳ ಬಂಧನ
ಬೆಂಗಳೂರು: ಆನ್‌ಲೈನ್ ಡೆಲಿವರಿ ಅಪ್ಲಿಕೇಶನ್‌ಗಳ ಮೂಲಕ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳು ಅಶೋಕನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು, ಡ್ರಗ್ಸ್‌ಗಳನ್ನು ಗಿಫ್ಟ್ ಬಾಕ್ಸ್‌ಗಳಲ್ಲಿ ಪ್ಯಾಕ್ ಮಾಡಿ ಗ್ರಾಹಕರಿಗೆ ತಲುಪಿಸುತ್ತಿದ್ದರು ಮತ್ತು ಪ್ರತಿಯಾಗಿ ಅದೇ ಬ್ಯಾಕ್ಸ್ಗಳಲ್ಲಿ ಹಣ ಪಡೆಯುತ್ತಿದ್ದರು. ಆರೋಪಿಗಳು ಆಫ್ರಿಕನ್ ಪ್ರಜೆಗಳಿಂದ ಡ್ರಗ್ಸ್ ಪಡೆದು ನಗರದ ದಂಧೆ ನಡೆಸುತ್ತಿದ್ದರು. ಕಳೆದ ಕೆಲವು ತಿಂಗಳ ಹಿಂದೆ, ಸಿಸಿಬಿ ಅಧಿಕಾರಿಗಳು, ಸುಳಿವು ಆಧರಿಸಿ, ಅವರನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.