ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ, ದಂಪತಿ ಮಧ್ಯೆ ಜಗಳ: ಸಾವು

ಲೈವ್ ವಿಡಿಯೋದಲ್ಲಿ ವಿಷ ಕುಡಿದು ಯುವಕ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ತಮಿಳುನಾಡು ಮೂಲದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಸುಳ್ಯದಲ್ಲಿ ಆಗಸ್ಟ್ 22ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ, ದಂಪತಿ ಮಧ್ಯೆ ಜಗಳ: ಸಾವು
ಪ್ರಾತಿನಿಧಿಕ ಚಿತ್ರ
Edited By:

Updated on: Aug 23, 2023 | 4:16 PM

ಮಂಗಳೂರು, ಆಗಸ್ಟ್​ 23: ಲೈವ್ ವಿಡಿಯೋದಲ್ಲಿ ವಿಷ ಕುಡಿದು ಯುವಕ ಆತ್ಮಹತ್ಯೆಗೆ (suicide) ಯತ್ನಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿರುವ ಯುವಕ. ಸದ್ಯ ಅಬ್ದುಲ್ ನಾಸಿರ್​ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿದ್ದು, ಸ್ಥಿತಿ ಗಂಭೀರವಾಗಿದೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಬ್ಯಾರಿ ಭಾಷೆಯಲ್ಲಿ ಯುವಕ ವಿಡಿಯೋ ಮಾಡಿದ್ದು,  ಅದ್ರಾಮ ಮತ್ತು ಅವನ ಕುಟುಂಬಸ್ಥರೇ ಸಾವಿಗೆ ಕಾರಣವೆಂದು ಹೇಳಿದ್ದಾನೆ.

ಆತ್ಮಹತ್ಯೆಗೆ ಯತ್ನಿಸಿದ ಅಬ್ದುಲ್ ನಾಸಿರ್​​, ಅದ್ರಾಮ ಎನ್ನುವವರ ಮನೆಯಲ್ಲಿ ಕಾರು ಚಾಲಕನಾಗಿದ್ದ. ಅವರ ಮನೆಯ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಹಲ್ಲೆ ನಡೆಸಿದ್ದಾಗಿ ಆತ ಆರೋಪ ಮಾಡಿದ್ದಾನೆ. ನನಗೆ ಯಾವುದೇ ಹುಡುಗಿಯ ಸಂಬಂಧ ಇಲ್ಲ ಎಂದು ಹೇಳಿದ್ದು, ಜೊತೆಗಿದ್ದ ನಾಲ್ವರನ್ನು ತೋರಿಸಿ ನೇಣಿಗೆ ಶರಣಾಗುತ್ತೇನೆಂದು ಹೇಳಿ ವಿಡಿಯೋ ಬಂದ ಮಾಡಲಾಗಿದೆ.

ದಂಪತಿ ಮಧ್ಯೆ ಜಗಳ: ಸಾವು

ಸುಳ್ಯ: ತಮಿಳುನಾಡು ಮೂಲದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಸುಳ್ಯ ತಾಲೂಕಿನ ಎಲಿಮಲೆ ತೋಟದಲ್ಲಿ ಆಗಸ್ಟ್ 22ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಿವಕುಮಾರ ಅಲಿಯಾಸ್​ ರಾಜನ್​ (54), ಮುತ್ತುಲಕ್ಷ್ಮೀ (47) ಮೃತ ದಂಪತಿಗಳು. ಕಳೆದ ಕೆಲವು ವರ್ಷಗಳಿಂದ ದಂಪತಿ ದೇವಚಳ್ಳ ಗ್ರಾಮದ ಗುಡ್ಡದಲ್ಲಿ ರಬ್ಬರ್ ಟ್ಯಾಪಿಂಗ್​ ಕಾರ್ಯದಲ್ಲಿ ತೊಡಗಿದ್ದರು.  ಅಲ್ಲಿಯೇ ಭೂಮಿಯನ್ನು ಸಹ ಖರೀದಿಸಿದ್ದರು.

ಇದನ್ನೂ ಓದಿ: ಬೆಂಗಳೂರು: ಸಿಸಿಬಿ ಎಚ್ಚರಿಕೆ ನೀಡಿದ ಮೇಲೂ ಬಾಲ ಬಿಚ್ಚಿದ ರೌಡಿಶೀಟರ್ಸ್​​​​​​​ ಸೈಕಲ್​ ರವಿ, ಬೇಕರಿ ರಘು; ಪ್ರಕರಣ ದಾಖಲು

ಸೋಮವಾರ ರಾತ್ರಿ ದಂಪತಿ ಮಧ್ಯೆ ಜಗಳ ನಡೆದಿದೆ. ಸುಳ್ಯದಲ್ಲಿ ವಾಸವಿದ್ದ ತಮ್ಮ ಮಗಳಿಗೆ ಈ ಕುರಿತಾಗಿ ತಾಯಿ ಮುತ್ತುಲಕ್ಷ್ಮೀ ಹೇಳಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಮನನೊಂದ ರಾಜನ್ ಮೊದಲು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಕಂಡ ಪತ್ನಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಂಡ್ಯ: ಸ್ನೇಹಿತರ ದಿನವೇ ಕುಚಿಕು ಗೆಳಯನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಗಳ ಬಂಧನ

ದಂಪತಿಗೆ ಒಟ್ಟು ಮೂವರು ಮಕ್ಕಳಿದ್ದು, ಮಗ ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾನೆ. ಇಬ್ಬರೂ ಹೆಣ್ಣುಮಕ್ಕಳಿ ಮದುವೆ ಆಗಿದೆ. ದಂಪತಿಗಳು ಸುಳ್ಯದಲ್ಲಿ ವಾಸವಾಗಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us