ಮಂಗಳೂರು: ಸ್ನೇಹಿತರ ಜೊತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದಿದ್ದ ವ್ಯಕ್ತಿ ಸಾವು

ಸ್ನೇಹಿತರ ಜೊತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದಿದ್ದ ಕೇರಳ ಮೂಲದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ತಲಪಾಡಿ ಪ್ರದೇಶದಲ್ಲಿ ನಡೆದಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ, ಮೃತದೇಹವನ್ನು ಹೊರತೆಗೆದಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು: ಸ್ನೇಹಿತರ ಜೊತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದಿದ್ದ ವ್ಯಕ್ತಿ ಸಾವು
ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಹರಿಪ್ರಸಾದ್ ಆಚಾರ್ಯ
Edited By:

Updated on: Aug 28, 2023 | 8:09 PM

ಮಂಗಳೂರು, ಆಗಸ್ಟ್ 28: ಸ್ನೇಹಿತರ ಜೊತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದಿದ್ದ ಕೇರಳ ಮೂಲದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ಬಳಿಯ ತಲಪಾಡಿ ಪ್ರದೇಶದಲ್ಲಿ ನಡೆದಿದೆ. ಹರಿಪ್ರಸಾದ್ ಆಚಾರ್ಯ (36) ಮೃತ ವ್ಯಕ್ತಿ.

ಕೇರಳದ ಹೊಸಂಗಡಿ ದುರ್ಗಿಪಳ್ಳದ ನಿವಾಸಿಯಾಗಿರುವ ಹರಿಪ್ರಸಾದ್ ಆಚಾರ್ಯ ಸ್ನೇಹಿತರ ಜೊತೆ ಸೇರಿಕೊಂಡು ಸ್ನೇನ ಮಾಡಲೆಂದು ತಲಪಾಡಿಯ ಖಾಸಗಿ ಸ್ಥಳದಲ್ಲಿರುವ ಕೊಳಕ್ಕೆ ಇಳಿದಿದ್ದಾರೆ. ಈ ವೇಳೆ ಕೆಸರಿನಲ್ಲಿ ಸಿಲುಕಿದ ಹರಿಪ್ರಸಾದ್ ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಡ್ರಗ್ ಪೆಡ್ಲರ್​​ಗಳ ಬಂಧನ

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ಹರಿಪ್ರಸಾದ್ ಮೃತದೇಹ ಹೊರತೆಗೆದಿದ್ದಾರೆ. ಪ್ರಕರಣ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ