AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಚಿಕನ್​ ಸಾಂಬಾರ್​ಗಾಗಿ ತಂದೆ-ಮಗನ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಕೋಳಿ ಸಾಂಬಾರ್​​​ಗಾಗಿ ಆರಂಭವಾದ ಅಪ್ಪ ಮತ್ತು ಮಗನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಕರ್ನಾಟಕದಲ್ಲಿ ನಡೆದಿದ್ದು, ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

Mangaluru: ಚಿಕನ್​ ಸಾಂಬಾರ್​ಗಾಗಿ ತಂದೆ-ಮಗನ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on:Apr 06, 2023 | 9:37 AM

Share

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ಮನಸ್ಥಾಪಗಳು ಮೂಡಿ, ಅಂತಹ ಕಲಹಗಳು ತಾರಕಕ್ಕೇರಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ಆಹಾರದಲ್ಲಿ ಉಪ್ಪು ಕಡಿಮೆಯಾತ್ತು, ಹೆಚ್ಚಾಯ್ತು ಎಂದು ಗಂಡ, ಹೆಂಡ್ತಿಯನ್ನು ಕೊಲೆ ಮಾಡಿರುವ ಪ್ರಕರಣಗಳು ಉಂಟು. ಇಂತಹದ್ದೇ ಪ್ರಕರಣವೊಂದು ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada District) ನಡೆದಿದೆ. ಚಿಕನ್ ಸಾಂಬರ್​ಗಾಗಿ(Chicken Curry) ತಂದೆ ಮಗನನ್ನೇ ಕೊಲೆ ಮಾಡಿರುವ ಘಟನೆ ಮಂಗಳೂರಿನ(Mangaluru) ಸುಳ್ಯ ತಾಲೂಕಿನ ಮೊಗ್ರದಲ್ಲಿ ನಡೆದಿದೆ.

ಇದನ್ನೂ ಓದಿ: ಬೀದರ್: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬದ ನಡುವೆ ಗಲಾಟೆ, ಕೊಲೆಯಲ್ಲಿ ಅಂತ್ಯ

ಗುತ್ತಿಗಾರಿನ ಮೊಗ್ರದ ಶಿವರಾಮ್ (33) ಕೊಲೆಯಾದ ಮಗ. ಮಂಗಳವಾರ ರಾತ್ರಿ ಶಿವರಾಮನ ಮನೆಯಲ್ಲಿ ಚಿಕನ್​ ಮಾಡಲಾಗಿತ್ತು. ಆದ್ರೆ, ಮಗ ಶಿವರಾಮ ಕೂಲಿ ಕೆಲಸ ಮುಗಿಸಿ, ರಾತ್ರಿ ಮನೆಗೆ ಬರುವಾಗ ಅದು ಖಾಲಿಯಾಗಿತ್ತು. ಮೊದಲೇ ಮದ್ಯದ ಅಮಲಿನಲ್ಲಿದ್ದ ಮಗ ಶಿವರಾಮ ಜಗಳ ಪ್ರಾರಂಭಿಸಿದ್ದ, ನನಗೆ ಈಗಲೇ ಚಿಕನ್  ಮಾಡಿಕೊಡಬೇಕೆಂದು ಮನೆಯಲ್ಲಿ ಸಾಕಿದ್ದ ಕೋಳಿಯನ್ನು ಹಿಡಿಯಲು ಮುಂದಾಗಿದ್ದಾನೆ. ಈ ವೇಳೆ ತಂದೆ ಹಾಗೂ ಮಗನ ನಡುವಿನ ಜಗಳ ಶುರುವಾಗಿದ್ದು, ಅದು ವಿಕೋಪಕ್ಕೆ ತಿರುಗಿ ಕೋಪಗೊಂಡ ತಂದೆ ಶೀನ ಮಗ ಶಿವರಾಮನ ತಲೆಗೆ ದೊಣ್ಣೆಯಿಂದ ಹೊಡೆದಿದ್ದಾನೆ. ಬಲವಾದ ಏಟಿನಿಂದ ತಲೆ ಒಡೆದು ಪುತ್ರ ಶಿವರಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಶಿವರಾಮ, ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನ ಅಗಲಿದ್ದಾನೆ. ಇನ್ನು ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕೊಲೆ ಆರೋಪಿ ಶೀನನನ್ನ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ದಕ್ಷಿಣ ಕನ್ನಡ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:32 am, Thu, 6 April 23

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​