ಮಂಗಳೂರು: ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಪತ್ನಿಯ ಕತ್ತು ಹಿಸುಕಿ ಬಾವಿಗೆ ಎಸೆದ ಪತಿ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಾಚಾರೆ ಎಂಬಲ್ಲಿ ನಿನ್ನೆ ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಆದರೆ, ಗಂಡ ಸುಧಾಕರನಿಗೆ ಬೇರೊಂದು ಯುವತಿ ಜೊತೆ ಅಕ್ರಮ ಸಂಬಂಧ ಇರುವ ವಿಚಾರ ತಿಳಿದು ದಂಪತಿ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ನಡೆದ ಜಗಳದ ವೇಳೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವುದು ಇದೀಗ ತಿಳಿದುಬಂದಿದೆ.

ಮಂಗಳೂರು: ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಪತ್ನಿಯ ಕತ್ತು ಹಿಸುಕಿ ಬಾವಿಗೆ ಎಸೆದ ಪತಿ
ಬಾವಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ, ಪತಿಯೇ ಪತ್ನಿಯನ್ನು ಕೊಲೆ ಮಾಡಿದ ವಿಚಾರ ಬೆಳಕಿಗೆ
Follow us
| Updated By: Rakesh Nayak Manchi

Updated on: Nov 04, 2023 | 2:53 PM

ಮಂಗಳೂರು, ನ.4: ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಾಚಾರೆ ಎಂಬಲ್ಲಿ ನಿನ್ನೆ ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಆದರೆ, ಗಂಡ ಸುಧಾಕರನಿಗೆ ಬೇರೊಂದು ಯುವತಿ ಜೊತೆ ಅಕ್ರಮ ಸಂಬಂಧ ಇರುವ ವಿಚಾರ ತಿಳಿದು ದಂಪತಿ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ನಡೆದ ಜಗಳದ ವೇಳೆ ಪತಿಯೇ ಪತ್ನಿಯನ್ನು ಕೊಲೆ (Murder) ಮಾಡಿರುವುದು ಇದೀಗ ತಿಳಿದುಬಂದಿದೆ.

ಬೆಳಾಲು ಗ್ರಾಮದ ಮಾಚಾರಿನ ಜ್ಯೋತಿ ನಗರದಲ್ಲಿನ ಮನೆಯಲ್ಲಿರುವ ಬಾವಿಯಲ್ಲಿ ಶಶಿಕಲಾ (25) ಅವರ ಶವ ಪತ್ತೆಯಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಹಾವೇರಿ: ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ ಮೈದುನ ಪರಾರಿ

ಶಶಿಕಲಾ ಮತ್ತು ಸುಧಾಕರ್ ಕಳೆದ 7 ವರ್ಷಗಳ ಹಿಂದೆ ಪ್ರೀತಿ ಮಾಡಿ ಮದುವೆಯಗಿದ್ದರು. ದಾಂಪತ್ಯ ಜೀವನಕ್ಕೆ ಸಾಕ್ಷಿಯಾಗಿ 6 ವರ್ಷದ ಮಗಳು ಕೂಡ ಇದ್ದಾಳೆ. ಆದರೆ, ಸುಧಾಕರ್​ಗೆ ಬೇರೊಂದು ಯುವತಿಯ ಜೊತೆ ಅಕ್ರಮ ಸಂಬಂಧ ಇರುವುದು ಗೊತ್ತಾಗಿದೆ. ಇದೇ ವಿಚಾತವಾಗಿ ದಂಪತಿ ನಡುವೆ ಜಗಳ ನಡೆಯುತ್ತಿತ್ತು.

ಅಲ್ಲದೆ, ನಿನ್ನೆ ಕೂಡ ಜಗಳ ನಡೆದಿದೆ. ಇದು ತಾರಕಕ್ಕೇರಿ ಸುಧಾಕರ್, ಪತ್ನಿ ಶಶಿಕಲಾಳ ಕುತ್ತಿಗೆ ಹಿಸುಕಿದ್ದಾನೆ. ಪರಿಣಾಮ ಆಕೆ ಪ್ರಜ್ಞೆ ತಪ್ಪಿ ಕೆಳಗೆ ಬಿದಿದ್ದಾಳೆ. ಬಳಿಕ ಹೆಂಡತಿಯನ್ನು ಬಾವಿಗೆ ಎಸೆದು ಕೊಲೆ ಮಾಡಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ