ಕೆರಗೋಡು ಹನುಮ ಧ್ವಜ ತೆರವು ವಿವಾದ: ರಾಜ್ಯಾದ್ಯಂತ ಹನುಮ ಧ್ವಜ ಅಭಿಯಾನ ನಡೆಸಲು ಬಜರಂಗದಳ ಕರೆ

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರು ಗ್ರಾಮದ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಜರಂಗದಳ ರಾಜ್ಯಾದ್ಯಂತ ಹನುಮ ಧ್ವಜ ಅಭಿಯಾನ ನಡೆಸಲು ನಿರ್ಧರಿಸಿದೆ. ಇಂದಿನಿಂದ (ಫೆ.02) ರಿಂದ ಫೆಬ್ರವರಿ 9ರ ವರೆಗೆ ಅಭಿಯಾನ ನಡೆಯಲಿದೆ.

ಕೆರಗೋಡು ಹನುಮ ಧ್ವಜ ತೆರವು ವಿವಾದ: ರಾಜ್ಯಾದ್ಯಂತ ಹನುಮ ಧ್ವಜ ಅಭಿಯಾನ ನಡೆಸಲು ಬಜರಂಗದಳ ಕರೆ
ಬಜರಂಗದಳ ಮುಖಂಡ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ವಿವೇಕ ಬಿರಾದಾರ

Updated on: Feb 02, 2024 | 12:46 PM

ಮಂಗಳೂರು, ಫೆಬ್ರವರಿ 02: ಮಂಡ್ಯ (Mandya) ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜವನ್ನು (Hanuman Flag) ಸರ್ಕಾರ ತೆರವುಗೊಳಿಸಿದನ್ನು ವಿರೋಧಿಸಿ ಬಜರಂಗದಳ (Bajarangdal) ರಾಜ್ಯಾದ್ಯಂತ ಹನುಮ ಧ್ವಜ ಅಭಿಯಾನ ನಡೆಸಲು ನಿರ್ಧರಿಸಿದೆ. ಇಂದಿನಿಂದ (ಫೆ.02) ರಿಂದ ಫೆಬ್ರವರಿ 9ರ ವರೆಗೆ ಅಭಿಯಾನ ನಡೆಯಲಿದೆ. ಫೆಬ್ರವರಿ 9 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿ ಎದುರು ಹನುಮಾನ್ ಚಾಲೀಸಾ (Hanuman Chalisa) ಪಠಿಸುವಂತೆ ಕರೆ ನೀಡಿದೆ.

ಅಭಿಯಾನದ ಕುರಿತು ಟಿ.ವಿ9 ಡಿಜಿಟಲ್​ನೊಂದಿಗೆ ಮಾತನಾಡಿದ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್, ಮಂಡ್ಯದ ಘಟನೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ನೋವಾಗಿದೆ. ಸಮಾಜಕ್ಕೆ ವಿಶ್ವಾಸ ತುಂಬಿಸಲು ಧಾರ್ಮಿಕ ಕೇಂದ್ರಗಳಲ್ಲಿ ಹನುಮಧ್ವಜ ಅಭಿಯಾನ ನಡೆಯಲಿದೆ. ಇಂದಿನಿಂದ ಆರಂಭವಾಗಿ ಫೆಬ್ರವರಿ 9ರ ವರೆಗೆ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.

ಕರ್ನಾಟಕದ ಎಲ್ಲಾ ಮನೆ-ಮನೆಗಳಲ್ಲಿ, ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ಹನುಮ ಧ್ವಜ ಹಾಕುವಂತೆ ವಿನಂತಿಸುತ್ತೇವೆ. ಫೆಬ್ರವರಿ 9 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ, ಧರಣಿ ಸತ್ಯಾಗ್ರಹ ನಡೆಯಲಿದೆ. ಕೆರಗೋಡು ಗ್ರಾಮದಲ್ಲಿ ಮತ್ತೆ ಅದೇ ಜಾಗದಲ್ಲಿ ಹನುಮ ಧ್ವಜ ಹಾಕಲು ಆಗ್ರಹಿಸಿ ಈ ಧರಣಿ ನಡೆಯಲಿದೆ. ಅದೇ ಜಾಗದಲ್ಲಿ ಹನುಮ ಧ್ವಜ ಹಾಕದಿದ್ದರೆ ಅಭಿಯಾನ ಮುಂದುವರೆಯುತ್ತೆ ಎಂದು ಎಚ್ಚರಿಕೆ ಕೊಟ್ಟರು.

ಇದನ್ನೂ ಓದಿ: ಕೆರಗೋಡುವಿನ ಎಲ್ಲ ಮನೆಗಳ ಮೇಲೆ ಹನುಮ ಧ್ವಜ ಹಾರುತ್ತೆ, ಸರ್ಕಾರಕ್ಕೆ ತಾಕತ್ತಿದ್ದರೆ ತಡೆಯಲಿ: ಮಂಡ್ಯ ಬಿಜೆಪಿ ಘಟಕ ಅಧ್ಯಕ್ಷ

ಏನಿದು ಹನುಮ ಧ್ವಜ ವಿವಾದ

ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನಪಿಗಾಗಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರು 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಿದ್ದರು. ಧ್ವಜ ಹಾರಿಸಿದ್ದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದಾಗಿದೆ. ಅಲ್ಲದೇ ಧ್ವಜ ಹಾರಿಸಿದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿ ತಾಲೂಕು ಪಂಚಾಯಿತಿಗೆ ದೂರು ನೀಡಿದ್ದರು. ದೂರಿನ್ವಯ ತಾಲೂಕು ಪಂಚಾಯಿತಿ ಅಧಿಕಾರಿಗಳು ಧ್ವಜವನ್ನು ತೆರವುಗೊಳಿಸಲು ಬಂದಿದ್ದರು. ಇದಿಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು.

ಬಳಿಕ ಪೊಲೀಸರು ಗ್ರಾಮಕ್ಕೆ ಆಗಮಿಸಿ ಧ್ವಜ ತೆರವುಗೊಳಿಸಲು ಮುಂದಾದರು. ಆಗ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಲು ಪೊಲೀಸರು 144 ಸೆಕ್ಷನ್​ ಜಾರಿ ಮಾಡಿದ್ದರು. 144 ಸೆಕ್ಷನ್​ ಜಾರಿಯಾದ ಬಳಿಕವೂ ಪ್ರತಿಭಟನಾಕಾರರು ಸ್ಥಳದಿಂದ ತೆರಳದ ಹಿನ್ನೆಲೆಯಲ್ಲಿ ಲಾಠಿ ಜಾರ್ಜ್​ ಮಾಡಲಾಯಿತು. ಕೊನೆಗೂ ಪೊಲೀಸರು ಧ್ವಜ ತೆರವುಗೊಳಿಸಿದರು.

ಇದಾದ ಬಳಿಕ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಜನವರಿ 29 ರಂದು ಹನುಮ ಧ್ವಜ ಇಳಿಸಿದ್ದನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್​ ನಾಯಕರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಕೆರಗೋಡಿನಿಂದ ಮಂಡ್ಯದವರೆಗು ಪಾದಯಾತ್ರೆ ನಡೆಸಿದರು. ಈ ಹಿನ್ನೆಲೆಯಲ್ಲಿ ಬಜರಂಗದಳ ರಾಜ್ಯಾದ್ಯಂತ ಹನುಮ ಧ್ವಜ ಅಭಿಯಾನ ನಡೆಸಲು ನಿರ್ಧರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್