ಮಂಗಳೂರಿನಲ್ಲಿ ಸಾರ್ವಜನಿಕರೊಂದಿಗೆ ಮಂಗಳಮುಖಿಯರ ಕಿರಿಕಿರಿ: ವಶಕ್ಕೆ ಪಡೆದ ಪೊಲೀಸರು
ಮಂಗಳೂರು ನಗರದಲ್ಲಿ ನಿನ್ನೆ(ಜು.29) ತಡರಾತ್ರಿ ಮಂಗಳಮುಖಿಯರು ಸಾರ್ವಜನಿಕರಿಗೆ ಕಿರಿಕಿರಿ ನೀಡಿದ್ದಾರೆಂದು ಆರೋಪ ಕೇಳಿಬಂದಿದ್ದು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು 10 ಕ್ಕೂ ಹೆಚ್ಚು ಮಂಗಳ ಮುಖಿಯರನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರು, ಜು.30: ನಗರದಲ್ಲಿ ನಿನ್ನೆ(ಜು.29) ತಡರಾತ್ರಿ ಮಂಗಳಮುಖಿಯರು ಸಾರ್ವಜನಿಕರಿಗೆ ಕಿರಿಕಿರಿ ನೀಡಿದ್ದಾರೆಂದು ಆರೋಪ ಕೇಳಿಬಂದಿದ್ದು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು 10 ಕ್ಕೂ ಹೆಚ್ಚು ಮಂಗಳ ಮುಖಿಯರನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಂಗಳೂರು(Mangalore) ಊರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ ಮಂಗಳೂರು ನಗರದ ಆಸ್ಪತ್ರೆಯೊಂದರ ಬಳಿ ದಾರಿಯಲ್ಲಿ ಹೋಗುವವರ ಜೊತೆ ಅಸಭ್ಯ ವರ್ತನೆ ತೋರಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಇನ್ಸ್ಪೆಕ್ಟರ್ ಭಾರತಿಯವರ ಜೊತೆ ಮಂಗಳಮುಖಿಯರು ವಾಗ್ವಾದ ನಡೆಸಿದ್ದಾರೆ. ಘಟನೆ ಹಿನ್ನಲೆ ಇದೀಗ ಹತ್ತಕ್ಕೂ ಹೆಚ್ಚು ಮಂಗಳಮುಖಿಯರನ್ನು ವಶಕ್ಕೆ ಪಡೆದಿದ್ದು, ಸಾರ್ವಜನಿಕ ಶಾಂತಿ ಭಂಗದ ಅಡಿಯಲ್ಲಿ ಕೇಸು ದಾಖಲು ಮಾಡಲಾಗಿದೆ.
ಕುಣಿಗಲ್ನಲ್ಲಿ ದೊಣ್ಣೆಯಿಂದ ಪರಸ್ಪರ ಬಡಿದಾಡಿಕೊಂಡ ಯುವಕರ ಗುಂಪು
ತುಮಕೂರು: ನಿನ್ನೆ(ಜು.30) ರಾತ್ರಿ ಜಿಲ್ಲೆಯ ಕುಣಿಗಲ್ ತಾಲೂಕಿನ ಯಡಿಯೂರಿನಲ್ಲಿ ಯುವಕರ ಗುಂಪುಗಳು ಪರಸ್ಪರ ಬಡಿದಾಡಿಕೊಂಡ ಘಟನೆ ನಡೆದಿದೆ. ನಿನ್ನೆ ಬೆಂಗಳೂರು- ಹಾಸನ ರಸ್ತೆಯಲ್ಲಿರುವ ಡಾಬಾವೊಂದರಲ್ಲಿ ಪಾರ್ಟಿಮಾಡಿಕೊಂಡಿದ್ದ ಗುಂಪು, ಅತಿಯಾಗಿ ಮದ್ಯ ಸೇವನೆ ಮಾಡಿದ್ದರು. ಬಳಿಕ ನಡುರಸ್ತೆಯಲ್ಲೇ ಎಣ್ಣೆ ಗುಂಗಿನಲ್ಲಿ ಹೊಡೆದಾಟ ಮಾಡಿಕೊಂಡಿದ್ದಾರೆ. ಈ ಕುರಿತು ಅಮೃತ್ತೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್ಗಾಗಿ ಹೊಡೆದಾಟ; ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ
ಮನೆ ಮುಂದೆ ನಿಲ್ಲಿಸಿದ ವಾಹನಗಳಿಗೆ ಕಿಡಿಗೇಡಿಗಳಿಂದ ಕಲ್ಲೇಟು
ಕೊಪ್ಪಳ: ಮನೆ ಮುಂದೆ ನಿಲ್ಲಿಸಿದ ವಾಹನಗಳಿಗೆ ಕಿಡಿಗೇಡಿಗಳು ಕಲ್ಲೇಟು ನಡೆಸಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ. ಗಂಗಾವತಿ ನಗರದ ವಿವಿಧ ವಾರ್ಡುಗಳಿಗೆ ನುಗ್ಗಿ ದಾಂಧಲೆ ಮಾಡಿದ್ದ ದುಷ್ಕರ್ಮಿಗಳು, 8 ಬೈಕ್, 4 ಕಾರಿನ ಗ್ಲಾಸ್ ಪುಡಿಯಾಗಿದ್ದು, ನಗರದ ಜನತೆ ಬೆಚ್ಚಿ ಬಿಳಿಸಿದೆ. ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಕುರಿತು ಗಂಗಾವತಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:09 pm, Sun, 30 July 23