
ದಕ್ಷಿಣ ಕನ್ನಡ, ಮಾ.22: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಿಂದ(Pilikula Zoo) ಬೃಹತ್ ಕಾಳಿಂಗ ಸರ್ಪ (King Cobra) ತಪ್ಪಿಸಿಕೊಂಡ ಘಟನೆ ನಡೆದಿದೆ. ಜೈವಿಕ ಉದ್ಯಾನವನದ ಟಿಕೆಟ್ ಕೌಂಟರ್ ಬಳಿ ಬಂದಿದ್ದ ಕಾಳಿಂಗ ಸರ್ಪ ಕಂಡು ಜನರು ಹೌಹಾರಿದ್ದಾರೆ. ಬಳಿಕ ರಸ್ತೆ ದಾಟಿ ವಿಜ್ಞಾನ ಕೇಂದ್ರದತ್ತ ಸಾಗಿದ್ದು, ಸಧ್ಯ ಕಾಳಿಂಗ ಸರ್ಪ ಹಿಡಿಯಲು ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ. ಇನ್ನು ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಕಾಳಿಂಗ ಸರ್ಪ ತಪ್ಪಿಸಿಕೊಂಡಿದೆ ಎಂಬ ಆರೋಪಗಳು ಕೇಳಿಬಂದಿದೆ.
ಇನ್ನು 2004ರಲ್ಲಿ ಉದ್ಘಾಟನೆಗೊಂಡಿದ್ದ ಪಿಲಿಕುಳ ಉದ್ಯಾನವನಕ್ಕೆ ಇತ್ತೀಚೆಗೆ ಅಳಿವಿನಂಚಿನಲ್ಲಿರುವ ತೋಳಗಳು ಸೇರ್ಪಡೆಯಾಗಿತ್ತು. ಆಂಧ್ರದ ವಿಶಾಖಪಟ್ಟಣದ ಮೃಗಾಲಯದಿಂದ ಈ ತೋಳಗಳನ್ನು ತರಿಸಲಾಗಿತ್ತು. ಇನ್ನು ಇಲ್ಲಿ ಹೊಸ ಜಗತ್ತಿನ ಮಂಗಗಳೆಂದು ಕರೆಯುವ ನಾಲ್ಕು ಜೊತೆ ಅಳಿಲು ಮಂಗವು ಇದೆ. ಇವು ಮಧ್ಯ ಹಾಗೂ ದಕ್ಷಿಣ ಅಮೆರಿಕಾದಲ್ಲಿ ಕಂಡು ಬರುವ ಚಿಕ್ಕ ಜಾತಿಯ ಮಂಗಗಳಾಗಿವೆ. ದೇಶದ ಪ್ರಮುಖ ಮೃಗಾಲಯಗಳಲ್ಲಿ ಒಂದಾಗಿರುವ ಪಿಲಿಕುಳ ಉದ್ಯಾನವನದಲ್ಲಿ ಇಂದು ಕಾಳಿಂಗ ಸರ್ಪ ತಪ್ಪಿಸಿಕೊಂಡಿದೆ.
ಇದನ್ನೂ ಓದಿ:ಮನೆಗೆ ನುಗ್ಗಿದ 8 ಅಡಿ ಉದ್ದದ ಕಾಳಿಂಗ ಸರ್ಪ; ಬೆಚ್ಚಿಬಿದ್ದ ಕುಟುಂಬ, ಇಲ್ಲಿದೆ ವಿಡಿಯೋ
ಮಂಗಳೂರು: ತೋಟಬೇಂಗ್ರೆಯಲ್ಲಿ ಸಮುದ್ರಕ್ಕೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಮಂಗಳೂರಿನ ತೋಟಬೇಂಗ್ರೆಯ
ಸಮುದ್ರದಲ್ಲಿ ಮೀನು ಹಿಡಿಯಲೆಂದು ಹೋಗಿದ್ದ ಪ್ರಜೀತ್ ಎಂ ತಿಂಗಳಾಯ(15) ಗಾಳಿ ಹಾಗೂ ನೀರಿನ ರಭಸಕ್ಕೆ ಸಿಲುಕಿ ಕೊನೆಯುಸಿರೆಳೆದಿದ್ದಾನೆ. ಮನೆಯ ಬಡತನ ಹಾಗೂ ವಿದ್ಯಾಭ್ಯಾಸದ ಖರ್ಚಿಗೆ ತಂದೆಯೊಂದಿಗೆ ಮೀನುಗಾರಿಕೆಗೆ ಹೋಗುತ್ತಿದ್ದ ಪ್ರಜೀತ್, ಗುರುವಾರ ಸಂಜೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಇನ್ನು ಗಾಳಿ ಮತ್ತು ನೀರಿನ ರಭಸಕ್ಕೆ ಸಿಲುಕಿ ನೀರು ಪಾಲಾಗಿದ್ದ ಪ್ರಜೀತ್ಗಾಗಿ ಸ್ಥಳೀಯರು ಹುಡುಕಾಟ ನಡೆಸಿದ್ದರು. ಬಳಿಕ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಆತನನ್ನು ಆಸ್ಪತ್ರೆ ಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ