ಮಂಗಳೂರು: ಹೊಸ ವರ್ಷಾಚರಣೆ ಪಾರ್ಟಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಬಂಧನ
ಹೊಸ ವರ್ಷಾಚರಣೆ ಪಾರ್ಟಿ(New Year Party) ಹಿನ್ನಲೆ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ನನ್ನು ಮಂಗಳೂರು(Mangalore) ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಬಳಿ ನಡೆದಿದೆ.
ದಕ್ಷಿಣ ಕನ್ನಡ, ಡಿ.30: ಹೊಸ ವರ್ಷಾಚರಣೆ ಪಾರ್ಟಿ(New Year Party) ಹಿನ್ನಲೆ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ನನ್ನು ಮಂಗಳೂರು(Mangalore) ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಬಳಿ ನಡೆದಿದೆ. ಮೊಹಮ್ಮದ್ ರಮೀಜ್(33) ಅಲಿಯಾಸ್ ಲೆಮನ್ ಟೀ ರಮೀಜ್ ಬಂಧಿತ ಆರೋಪಿ. ಇತ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ನಿವಾಸಿಯಾಗಿದ್ದು, ಡ್ರಗ್ಸ್ ಮಾರಾಟ ಮಾಡುತ್ತಿದ್ದಾಗ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇತನಿಂದ 5 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಆನೇಕಲ್: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಆನೇಕಲ್ ಪೊಲೀಸರು ಬಂಧಿಸಿದ್ದಾರೆ. ಆನೇಕಲ್ ತಾಲ್ಲೂಕಿನ ಹಾಲ್ದೇನಹಳ್ಳಿ ನಿವಾಸಿಯಾಗಿರುವ ಆರೋಪಿ ಪೃಥ್ವಿ(23) ಬಂಧಿತ ಆರೋಪಿ. ಇತನಿಂದ 550 ಗ್ರಾಂ ಗಾಂಜಾವ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆನೇಕಲ್ ಪುರಸಭೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಇತ, ಕರ್ಪೂರು ಗೇಟ್ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ಕಾಲೇಜು ವಿಧ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಈ ಹಿಂದೆ ಗಾಂಜಾ ಪ್ರಕರಣದಲ್ಲಿ ಬಂಧಿಯಾಗಿ ಜೈಲಿಗೆ ಹೋಗಿದ್ದರೂ ಬುದ್ದಿ ಕಲಿಯದೆ, ಪುನಃ ಗಾಂಜಾ ಮಾರಾಟವನ್ನೇ ಕಾಯಕ ಮಾಡಿಕೊಂಡಿದ್ದ. ಇಂದು ಖಚಿತ ಮಾಹಿತಿ ಮೇರೆಗೆ ಆನೇಕಲ್ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ನೆಲಮಂಗಲ: ಹೊಸ ವರ್ಷಾಚರಣೆಗೆ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರು ಪೊಲೀಸ್ ಬಲೆಗೆ
ಗಾಂಜಾ ಮಾರಾಟ ಜಾಲದ ಮೇಲೆ ಹದ್ದಿನ ಕಣ್ಣಿಟ್ಟ ಪೊಲೀಸರು
ಧಾರವಾಡ: ನಾಳೆ ನ್ಯೂ ಇಯರ್ ಪಾರ್ಟಿ ಹಿನ್ನೆಲೆ ಗಾಂಜಾ ಮಾರಾಟ ಜಾಲದ ಮೇಲೆ ಧಾರವಾಡ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಅದರಂತೆ ಇಂದು ಇಬ್ಬರು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಧಾರವಾಡದ ಸಿಎಸ್‌ಐ ಕಾಲೇಜ್ ರಸ್ತೆ ಬಳಿ ನಿಂತು ಗಾಂಜಾ ಮಾರಾಟ ಮಾಡಲು ಯತ್ನಿಸಿದಾಗ ದಾಳಿ ಮಾಡಿದ ನಗರ ಠಾಣೆ ಪೊಲೀಸರು, 3500 ರೂ. ಮೌಲ್ಯದ 377 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ನಾಜೀಮ್ ಶೇಖ್ ಮತ್ತು ಮಹಮ್ಮದ್ ಸಾದಿಕ್ ಕಬಾಡಿ ಬಂಧಿತರು. ಬಂಧಿತ ಆರೋಪಿಗಳಿಬ್ಬರೂ ಧಾರವಾಡ ಮೂಲದವರಾಗಿದ್ದು, ಸದ್ಯ ಬೇರೆ ಬೇರೆ ಕಡೆಯೂ ಗಾಂಜಾ ಮಾರಾಟ ನಡೆದಿರುವ ಶಂಕೆ ವ್ಯಕ್ತವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ