ಮಂಗಳೂರು: ಪ್ರತ್ಯೇಕ ಎರಡು ಪ್ರಕರಣಗಳಲ್ಲಿ 70 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ವಿದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆಜಿಗೂ ಅಧಿಕ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಳೆದ 10 ದಿನಗಳಲ್ಲಿ ಪತ್ತೆಯಾದ ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆಯಲಾಗಿದೆ.

ಮಂಗಳೂರು: ಪ್ರತ್ಯೇಕ ಎರಡು ಪ್ರಕರಣಗಳಲ್ಲಿ 70 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು
ದುಬೈನಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 1 ಕೆಜಿಗೂ ಅಧಿಕ ಚಿನ್ನ ವಶಪಡಿಸಿಕೊಂಡ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳುImage Credit source: FILE PHOTO
Follow us
|

Updated on: Nov 19, 2023 | 4:05 PM

ಮಂಗಳೂರು, ನ.19: ಕಳೆದ 10 ದಿನಗಳಲ್ಲಿ ವಿದೇಶದಿಂದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆಜಿಗೂ ಅಧಿಕ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Mangaluru International Airport) ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಜಪ್ತಿ ಮಾಡಿದ ಬಂಗಾರದ ಒಟ್ಟು ಮೌಲ್ಯ 70,02,568 ರೂಪಾಯಿ ಆಗಿದೆ.

ಅಧಿಕಾರಿಗಳ ಪ್ರಕಾರ, ನವೆಂಬರ್ 9 ರಿಂದ 13 ರ ನಡುವೆ ಇಂಡಿಗೋ ವಿಮಾನ 6E1163 ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ IX814 ಮೂಲಕ ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ.

ತಪಾಸಣೆ ವೇಳೆ 21.6/24 ಕ್ಯಾರೆಟ್ ಚಿನ್ನವನ್ನು ಟ್ರಾಲಿ ಬ್ಯಾಗ್‌ನಲ್ಲಿ ಮಣಿ ಹಾಕುವ ರಾಡ್‌ಗಳ ರೂಪದಲ್ಲಿ ಮತ್ತು ರಿಸ್ಟ್ ವಾಚ್, ಬಾಲ್-ಪಾಯಿಂಟ್ ಪೆನ್, ಹೇರ್ ಟ್ರಿಮ್ಮರ್, ಒಂದು ರೋಢಿಯಮ್ ಲೇಪಿತ ನಾಣ್ಯ, ಸ್ಟೇನ್‌ಲೆಸ್ ಸ್ಟೀಲ್ ವೂಲ್ ಸ್ಕೌರ್‌ನಲ್ಲಿ ಬಚ್ಚಿಟ್ಟಿದ್ದ ರೋಢಿಯಮ್ ಉಲ್ಲೇಖಿತ ಚಿನ್ನದ ವಸ್ತುಗಳು ಪತ್ತೆಯಾಗಿವೆ. ಇದರ ಒಟ್ಟು ಮೌಲ್ಯ 18,17,718 ರೂ. ಆಗಿದೆ.

ಇದನ್ನೂ ಓದಿ: ಬೆಂಗಳೂರು: 3 ಪ್ರತ್ಯೇಕ ಪ್ರಕರಣಗಳಲ್ಲಿ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ನವೆಂಬರ್ 18 ರಂದು, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ IX 814 ಮೂಲಕ ದುಬೈನಿಂದ ಮಂಗಳೂರಿಗೆ ಬಂದ ಪ್ರಯಾಣಿಕರಿಂದ 857 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಯಾಣಿಕರ ಚೆಕ್-ಇನ್ ಬ್ಯಾಗೇಜ್ ಅನ್ನು ಸ್ಕ್ಯಾನ್ ಮಾಡಿದಾಗ, ಭಾರೀ ಲೋಹದ ವಸ್ತು ಪತ್ತೆಯಾಗಿದೆ.

ಹೆಚ್ಚಿನ ತಪಾಸಣೆ ನಡೆಸಿದಾಗ, ಎರಡು ಕಾರ್ ಸ್ಪೀಕರ್‌ಗಳಲ್ಲಿ ಬಚ್ಚಿಟ್ಟಿದ್ದ 24 ಕ್ಯಾರೆಟ್ ಶುದ್ಧತೆಯ ಎರಡು ವೃತ್ತಾಕಾರದ ತುಂಡುಗಳು, ಏರ್‌ಪಾಡ್‌ನಲ್ಲಿ ಎರಡು ಆಯತಾಕಾರದ ಕಟ್ ಪೀಸ್ ಮತ್ತು ಪವರ್ ಅಡಾಪ್ಟರ್‌ನಲ್ಲಿ ಒಂದು ಆಯತಾಕಾರದ ತುಂಡು ಚಿನ್ನ ಪತ್ತೆಯಾಗಿದೆ. ಇದರ ಒಟ್ಟು ಮೌಲ್ಯ 51,84,850 ರೂ. ಆಗಿದೆ. ಆರೋಪಿಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ