ಮಂಗಳೂರು: ದಂಡ ವಿಧಿಸಿದ್ದಕ್ಕೆ ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ

ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುತ್ತಾರೆ. ಅದೇ ರೀತಿ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್​ನಲ್ಲಿ ಆಟೋ ಚಾಲಕನಿಗೆ ದಂಡ ವಿಧಿಸಲಾಗಿದೆ. ಆದರೆ ದಂಡ ವಿಧಿಸಿದ್ದಕ್ಕೆ ಕೋಪಗೊಂಡ ಆಟೋ ಚಾಲಕ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ್ದಾನೆ.

Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi

Updated on: Mar 11, 2024 | 5:40 PM

ಮಂಗಳೂರು, ಮಾ.11: ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುತ್ತಾರೆ. ಅದೇ ರೀತಿ, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ (Bantwal) ಬಿಸಿ ರೋಡ್​ನಲ್ಲಿ (BC Road) ಆಟೋ ಚಾಲಕನಿಗೆ ದಂಡ ವಿಧಿಸಲಾಗಿದೆ. ಆದರೆ ದಂಡ ವಿಧಿಸಿದ್ದಕ್ಕೆ ಕೋಪಗೊಂಡ ಆಟೋ ಚಾಲಕ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ.

ಬಿಸಿ ರೋಡ್​ನಲ್ಲಿ ಸಮವಸ್ತ್ರ ಧರಿಸದೆ ಮೊಬೈಲ್​ನಲ್ಲಿ ಮಾತಾಡುತ್ತ ಆಟೋ ಚಲಾಯಿಸುತ್ತಿರುವುದನ್ನು ಗಮನಿಸಿದ ಟ್ರಾಫಿಕ್ ಪಿಎಸ್​ಐ ಸುತೇಶ್ ಮತ್ತು ಸಿಬ್ಬಂದಿ ಆಟೋ ತಡೆದಿದ್ದಾರೆ. ಅಲ್ಲದೆ, ಸಂಚಾರಿ ನಿಯಮ ಉಲ್ಲಂಘಿಸಿದ ಹಿನ್ನೆಲೆ 2,000 ರೂಪಾಯಿ ದಂಡ ವಿಧಿಸಿದ್ದಾರೆ. ಇದರಿಂದ ಕೋಪಗೊಂಡ ಗೂಡಿನ ಬಳಿ‌ ನಿವಾಸಿ ಆಟೋ ಚಾಲಕ ಮೊಹಮ್ಮದ್ ಅನ್ಸಾರ್, ಸಾರ್ವಜನಿಕವಾಗಿ ರಂಪಾಟ ನಡೆಸಿದ್ದಾನೆ.

ಇದನ್ನೂ ಓದಿ: ಮಂಗಳೂರಿನಲ್ಲೊಂದು ಅಮಾನವೀಯ ಘಟನೆ: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಿಂದ ಹೊಡೆದ ಸೊಸೆ, ಬಂಧನ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾಹನ ಸುಟ್ಟುಹಾಕುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಆಟೋ ಹಾಗೂ ಪೊಲೀಸ್ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಘಟನೆ ದೃಶ್ಯ ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದೆ. ಪ್ರಕರಣ ಸಂಬಂಧ ಅನ್ಸಾರ್ ವಿರುದ್ಧ ಬಂಟ್ವಾಳ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ