ಮಂಗಳೂರು, ಮಾ.11: ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುತ್ತಾರೆ. ಅದೇ ರೀತಿ, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ (Bantwal) ಬಿಸಿ ರೋಡ್ನಲ್ಲಿ (BC Road) ಆಟೋ ಚಾಲಕನಿಗೆ ದಂಡ ವಿಧಿಸಲಾಗಿದೆ. ಆದರೆ ದಂಡ ವಿಧಿಸಿದ್ದಕ್ಕೆ ಕೋಪಗೊಂಡ ಆಟೋ ಚಾಲಕ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ.
ಬಿಸಿ ರೋಡ್ನಲ್ಲಿ ಸಮವಸ್ತ್ರ ಧರಿಸದೆ ಮೊಬೈಲ್ನಲ್ಲಿ ಮಾತಾಡುತ್ತ ಆಟೋ ಚಲಾಯಿಸುತ್ತಿರುವುದನ್ನು ಗಮನಿಸಿದ ಟ್ರಾಫಿಕ್ ಪಿಎಸ್ಐ ಸುತೇಶ್ ಮತ್ತು ಸಿಬ್ಬಂದಿ ಆಟೋ ತಡೆದಿದ್ದಾರೆ. ಅಲ್ಲದೆ, ಸಂಚಾರಿ ನಿಯಮ ಉಲ್ಲಂಘಿಸಿದ ಹಿನ್ನೆಲೆ 2,000 ರೂಪಾಯಿ ದಂಡ ವಿಧಿಸಿದ್ದಾರೆ. ಇದರಿಂದ ಕೋಪಗೊಂಡ ಗೂಡಿನ ಬಳಿ ನಿವಾಸಿ ಆಟೋ ಚಾಲಕ ಮೊಹಮ್ಮದ್ ಅನ್ಸಾರ್, ಸಾರ್ವಜನಿಕವಾಗಿ ರಂಪಾಟ ನಡೆಸಿದ್ದಾನೆ.
ಇದನ್ನೂ ಓದಿ: ಮಂಗಳೂರಿನಲ್ಲೊಂದು ಅಮಾನವೀಯ ಘಟನೆ: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್ನಿಂದ ಹೊಡೆದ ಸೊಸೆ, ಬಂಧನ
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾಹನ ಸುಟ್ಟುಹಾಕುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಆಟೋ ಹಾಗೂ ಪೊಲೀಸ್ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಘಟನೆ ದೃಶ್ಯ ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ. ಪ್ರಕರಣ ಸಂಬಂಧ ಅನ್ಸಾರ್ ವಿರುದ್ಧ ಬಂಟ್ವಾಳ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ