ಮಂಗಳೂರು: ಆಳ್ವಾಸ್ ಕಾಲೇಜಿನ ​​ಹಾಸ್ಟೆಲ್​ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ

ಇತ್ತೀಚೆಗಷ್ಟೇ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದ ಮಲ್ಲಪ್ಪನವರ ಎಂಬುವವರ ಪುತ್ರ ಮನೋಜ್ ಎಂಬಾತ ಜಿಲ್ಲೆಯ ಮೂಡಬಿದ್ರೆಯಲ್ಲಿರುವ(Mudbidri)ಆಳ್ವಾಸ್​ ಶಿಕ್ಷಣ ಸಂಸ್ಥೆಯ ಹಾಸ್ಟೇಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ವಿದ್ಯಾರ್ಥಿ ಕೋಲಾರ ಮೂಲದ ಸಂಜಯ್ ಭುವನ್ (16) ಎಂಬುವವರು ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರು: ಆಳ್ವಾಸ್ ಕಾಲೇಜಿನ ​​ಹಾಸ್ಟೆಲ್​ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ
ಆಳ್ವಾಸ್​ ಕಾಲೇಜು ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
Edited By:

Updated on: Mar 14, 2024 | 5:05 PM

ದಕ್ಷಿಣ ಕನ್ನಡ, ಮಾ.14: ಕಳೆದ 2023 ಡಿಸೆಂಬರ್ 24 ರಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದ ಮಲ್ಲಪ್ಪನವರ ಎಂಬುವವರ ಪುತ್ರ ಮನೋಜ್ ಎಂಬಾತ ಜಿಲ್ಲೆಯ ಮೂಡಬಿದ್ರೆಯಲ್ಲಿರುವ(Mudbidri)ಆಳ್ವಾಸ್​ ಶಿಕ್ಷಣ ಸಂಸ್ಥೆಯ ಹಾಸ್ಟೇಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ವಿದ್ಯಾರ್ಥಿ ಕೋಲಾರ ಮೂಲದ ಸಂಜಯ್ ಭುವನ್ (16) ಎಂಬುವವರು ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾ.12 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ‌ ಬಂದಿದೆ.

NSUI ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಮುತ್ತಿಗೆ‌

ಈ ಕುರಿತು ವಿಷಯ ತಿಳಿಯುತ್ತಿದ್ದಂತೆ ಕಾಲೇಜಿಗೆ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ ಮುತ್ತಿಗೆ ಹಾಕಿದೆ. ಹೌದು, NSUI ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಮುತ್ತಿಗೆ‌ ಹಾಕಲಾಗಿದೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರಿಂದ ಕಾಲೇಜು ಬಳಿ ಭದ್ರತೆ ಒದಗಿಸಲಾಗಿದೆ. ಇನ್ನು ವಿದ್ಯಾರ್ಥಿ ಆತ್ಮಹತ್ಯೆ ಕುರಿತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಿಷ್ಪಕ್ಷಪಾತ ತನಿಖೆಗೆ ವಿದ್ಯಾರ್ಥಿ ಸಂಘಟನೆ ಪೊಲೀಸರಿಗೆ ಆಗ್ರಹ ಮಾಡಿದೆ.

ಇದನ್ನೂ ಓದಿ:ಯುಪಿಎಸ್​ಸಿ ಪರೀಕ್ಷೆಗೆ ಹೆದರಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ, ಊರಿಗೆ ಹೋಗಿ ಬರುವಷ್ಟರಲ್ಲಿ ಮಗನ ಸಾವು

ಇತ್ತೀಚೆಗೆ ನಡೆದಿತ್ತು ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

2023 ಡಿಸೆಂಬರ್​ 24 ರಂದು ಮೂಡಬಿದ್ರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಸ್ಟೆಲ್​ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್(18) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ತಾವು ಬರುವವರೆಗೆ ಶವ ಸ್ಥಳಾಂತರಿಸದಂತೆ ಪೋಷಕರು ಆಗ್ರಹಿಸಿದ್ದರು. ಜೊತೆಗೆ ಮನೋಜ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ಈ ಕುರಿತು ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಆತ್ಮಹತ್ಯೆಗೂ ಮುನ್ನ ಏನಾಗಿತ್ತೆಂದು ತಿಳಿಯಲು ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ  ಇದೀಗ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:58 pm, Thu, 14 March 24