ಮಂಗಳೂರು ಬೆಂಗಳೂರು ಮಧ್ಯೆ 2 ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ

ಭಾರಿ ಮಳೆಯಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರ ಬಳಿ ಶಿರಾಡಿ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ್ದು ಸಂಚಾರ ಬಂದ್ ಆಗಿದೆ. ಅತ್ತ ಸಂಪಾಜೆ ಘಾಟಿಯಲ್ಲಿಯೂ ರಾತ್ರಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಬೆಂಗಳೂರು ಮತ್ತು ಮಂಗಳೂರು ಮಧ್ಯ ಸಂಪರ್ಕ ಕಲ್ಪಿಸಲು ಎರಡು ವಿಶೇಷ ರೈಲುಗಳನ್ನು ರೈಲ್ವೆ ಇಲಾಖೆ ಘೋಷಿಸಿದೆ. ವಿಶೇಷ ರೈಲುಗಳ ವೇಳಾಪಟ್ಟಿ ಇಲ್ಲಿದೆ.

ಮಂಗಳೂರು ಬೆಂಗಳೂರು ಮಧ್ಯೆ 2 ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ
ಮಂಗಳೂರು ಬೆಂಗಳೂರು ಮಧ್ಯೆ ವಿಶೇಷ ರೈಲು (ಸಾಂದರ್ಭಿಕ ಚಿತ್ರ)Image Credit source: PTI
Follow us
Ganapathi Sharma
|

Updated on: Jul 19, 2024 | 3:31 PM

ಮಂಗಳೂರು, ಜುಲೈ 19: ಭಾರೀ ಮಳೆಯಿಂದಾಗಿ ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೂಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ಮಂಗಳೂರು ಮತ್ತು ಬೆಂಗಳೂರು ಸಂಪರ್ಕಿಸುವ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರು ಮತ್ತು ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ (ಡಿಆರ್‌ಎಂ) ಪತ್ರ ಬರೆದು ಮಂಗಳೂರು-ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಗಳನ್ನು ತುರ್ತಾಗಿ ಒದಗಿಸುವಂತೆ ಮನವಿ ಮಾಡಿದ್ದಾರೆ. ಮನವಿಗೆ ಸ್ಪಂದಿಸಿರುವ ರೈಲ್ವೆ ಅಧಿಕಾರಿಗಳು ಮಂಗಳೂರು ಬೆಂಗಳೂರು ಮಧ್ಯೆ ಎರಡು ವಿಶೇಷ ರೈಲಿನ ಘೋಷಣೆ ಮಾಡಿದ್ದಾರೆ.

ಮಂಗಳೂರು ಬೆಂಗಳೂರು ನಡುವೆ ಪ್ರತಿದಿನ ಪ್ರಯಾಣಿಸುವ ಜನರ ಸಂಖ್ಯೆ ಮತ್ತು ಪರ್ಯಾಯ ಸಾರಿಗೆ ಆಯ್ಕೆಗಳ ಕೊರತೆಯನ್ನು ಪರಿಗಣಿಸಿ, ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸುವ ಅಗತ್ಯವನ್ನು ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರದಲ್ಲಿ ಉಲ್ಲೇಖಿಸಿದ್ದರು. ಈ ಹೆಚ್ಚುವರಿ ಸೇವೆಗಳನ್ನು ಆದಷ್ಟು ಬೇಗ ಜಾರಿಗೊಳಿಸಲು ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಮಂಗಳೂರು ಬೆಂಗಳೂರು ವಿಶೇಷ ರೈಲು ಸಮಯ

ರೈಲು ಸಂಖ್ಯೆ 06547 / 06548 ಮಂಗಳೂರು ಜಂಕ್ಷನ್ ಹಾಗೂ ಯಶವಂತಪುರ ಮಧ್ಯೆ ಸಂಚರಿಸಲಿದೆ. ರೈಲು ಸಂಖ್ಯೆ 06547 ಜುಲೈ 19 ರಂದು ಬೆಂಗಳೂರಿನಿಂದ ಮಂಗಳೂರಿಗೆ, ರೈಲು ಸಂಖ್ಯೆ 06548 ಜುಲೈ 20 ರಂದು ಮಂಗಳೂರಿನಿಂದ ಯಶವಂತಪುರಕ್ಕೆ ತೆರಳಲಿದೆ.

ಇದನ್ನೂ ಓದಿ: ಕರ್ನಾಟಕದ ಯಾವೆಲ್ಲ ಹೆದ್ದಾರಿಗಳಲ್ಲಿ ಸಂಚಾರ ಬಂದ್? ಇಲ್ಲಿದೆ ವಿವರ

ರೈಲು ಸಂಖ್ಯೆ 06549 / 06550 ಯಶವಂತಪುರ ಹಾಗೂ ಮಂಗಳೂರು ಜಂಕ್ಷನ್ ಮಧ್ಯೆ ಜುಲೈ 21 ಮತ್ತು 22 ರಂದು ಸಂಚರಿಸಲಿದೆ. ರೈಲು ಸಂಖ್ಯೆ 06549 ಜುಲೈ 21 ಮತ್ತು 22 ರಂದು ಯಶವಂತಪುರ ಹಾಗೂ ಮಂಗಳೂರು ಜಂಕ್ಷನ್ ಮಧ್ಯೆ ಸಂಚರಿಸಲಿದ್ದು, ರೈಲು ಸಂಖ್ಯೆ 06550 ಯಶವಂತಪುರ ಹಾಗೂ ಮಂಗಳೂರು ಜಂಕ್ಷನ್ ಮಧ್ಯೆ ಜುಲೈ 21 ಮತ್ತು 22 ರಂದು ಸಂಚರಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ