Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಸಾಲ ಪಡೆದ ಭೂಪ

ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಲ್ಲಿ ನಡೆದ 2 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಕಲಿ ಚಿನ್ನದ ವಂಚನೆ ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಅಬೂಬಕ್ಕರ್ ಸಿದ್ದಿಕ್ ಎಂಬ ವ್ಯಕ್ತಿ 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ವಂಚನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಸಾಲ ಪಡೆದ ಭೂಪ
ನಕಲಿ ಚಿನ್ನ, ಬ್ಯಾಂಕ್​ ಪತ್ರ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ವಿವೇಕ ಬಿರಾದಾರ

Updated on: Dec 25, 2024 | 10:14 AM

ಮಂಗಳೂರು, ಡಿಸೆಂಬರ್​ 25: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ (Mangaluru) ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಅಬೂಬಕ್ಕರ್ ಸಿದ್ದಿಕ್ 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಅಬೂಬಕ್ಕರ್​ ಸಿದ್ದಿಕ್​, ಬ್ಯಾಂಕ್ ಆಡಳಿತ ಮಂಡಳಿ ಮತ್ತು ನೌಕರರ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಾಜ ಸೇವಾ ಸಹಕಾರಿ ಸಂಘ ಜಿಲ್ಲೆಯಲ್ಲಿ 16 ಶಾಖೆ ಹೊಂದಿದೆ. ಮಂಗಳೂರಿನ ಪಡೀಲ್​ನ ಶಾಖೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ ಎಂಬ ಆರೋಪ ಕೇಳಿಬಂದಿದೆ. ಚಿನ್ನ ಪರೀಕ್ಷೆ ನಡೆಸುವ ಸರಪ, ಬ್ಯಾಂಕ್​ನ ಅಧ್ಯಕ್ಷ, ನಿರ್ದೇಶಕರು ಮ್ಯಾನೇಜರ್, ಸಿಬ್ಬಂದಿ ಸಹಕಾರದಿಂದ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಈ ಬಗ್ಗೆ ಬ್ಯಾಂಕ್​ನ ಸದಸ್ಯರು, ಮಾಜಿ ನಿರ್ದೇಶಕ ಡಿ.ಲೋಕನಾಥ್ ದೂರಿನ ಮೇರೆಗೆ 28 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಬ್ಯಾಂಕ್​ನ ಸರಪ ವಿವೇಕ್ ಆಚಾರ್ಯನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ಅಬೂಬಕ್ಕರ್ ಸಿದ್ದಿಕ್​ಗಾಗಿ ಹುಡುಕಾಟ ಮುಂದುವರೆದಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: 4 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಲ್ಕಿ ಆರ್‌ಐ

ಪ್ರಕರಣ ಸಂಬಂಧ ದೂರುದಾರ ಲೋಕನಾಥ್.ಡಿ ಮಾತನಾಡಿ, ಅಬೂಬಕ್ಕರ್ ಸಿದ್ದಿಕ್ ಮೊದಲಿನಿಂದಲೂ ಬ್ಯಾಂಕ್​ನ ಗ್ರಾಹಕರಾಗಿದ್ದರು. 2023ರ ನವೆಂಬರ್ ತಿಂಗಳಿನಲ್ಲಿ ಒಂದೇ ರೀತಿಯ 500 ನಕಲಿ ಚಿನ್ನದ ಬಳೆ ಅಡವಿಟ್ಟು, ಸಾಲ ಪಡೆದಿದ್ದಾರೆ. ಸಾಲವನ್ನು ಮೂರು ತಿಂಗಳಲ್ಲಿ ತೀರಿಸಬೇಕಿತ್ತು ಎಂದು ಹೇಳಿದರು.

ಆದರೆ, ಸಾಲ ತೀರಸದೆ ಇದ್ದಾಗ, ಬ್ಯಾಂಕ್​ನ ಪ್ರಭಾರ ಮ್ಯಾನೇಜರ್​ ಅವರು ಅನುಮಾನಗೊಂಡು ಬೇರೆಯವರಿಂದ ಮರು ತಪಾಸಣೆ ನಡೆಸಿದಾಗ ಚಿನ್ನ ನಕಲಿ ಎಂದು ಗೊತ್ತಾಗಿದೆ. ತಕ್ಷಣ ಜನರಲ್ ಮ್ಯಾನೇಜರ್ ಸರಫ್​ ಅವರಿಗೆ ಪತ್ರ ಬರೆದಿದ್ದಾರೆ. ಸರಿಯಾಗಿ ಚಿನ್ನವನ್ನು ಪರೀಕ್ಷೆ ಮಾಡದ ಕಾರಣ ಬ್ಯಾಂಕ್​ಗೆ 2 ಕೋಟಿ ರೂಪಾಯಿಗೂ ಅಧಿಕ ನಷ್ಟ ಆಗಿದೆ. ನೀನು‌ ಅದನ್ನು ತಕ್ಷಣ ಪಾವತಿಸುವಂತೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ