ಮಂಗಳೂರು: ಕದ್ದ ಗೋಣಿ ಚಿನ್ನದ ಸಹಿತ 700 ಕಿ.ಮೀ. ಕಾರಿನಲ್ಲೇ ಪ್ರಯಾಣಿಸಿದ್ದ ದರೋಡೆಕೋರರು!

ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ ಸಂಬಂಧ ತಮಿಳುನಾಡಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ದರೋಡೆ ನಂತರ 700 ಕಿ.ಮೀ ದೂರ ಕಾರಿನಲ್ಲಿ ಪರಾರಿಯಾಗಿದ್ದ ಆರೋಪಿಗಳು ತಮಿಳುನಾಡಿನಲ್ಲಿ ಪತ್ತೆಯಾಗಿದ್ದರು. ಆರೋಪಿಗಳ ಬಂಧನದ ನಂತರ ಘಟನೆ ಸಂಬಂಧ ಒಂದೊಂದೇ ಆಘಾತಕಾರಿ ಸಂಗತಿಗಳು ಬೆಳಕಿಗೆ ಬರುತ್ತಿವೆ. ದರೋಡೆಕೋರರು ಪರಾರಿಯಾದ್ಹೇಗೆ? ಪೊಲೀಸರು ಅವರನ್ನು ಬಂಧಿಸಿದ್ದೇಗೆ ಎಂಬ ವಿವರ ಇಲ್ಲಿದೆ.

ಮಂಗಳೂರು: ಕದ್ದ ಗೋಣಿ ಚಿನ್ನದ ಸಹಿತ 700 ಕಿ.ಮೀ. ಕಾರಿನಲ್ಲೇ ಪ್ರಯಾಣಿಸಿದ್ದ ದರೋಡೆಕೋರರು!
ದರೋಡೆಕೋರರು ಪಲಾಯನ ಮಾಡಲು ಬಳಸಿದ್ದ ಫೇಕ್ ನಂಬರ್​​ಪ್ಲೇಟ್ ಅಳವಡಿಸಿದ್ದ ಕಾರು
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma

Updated on:Jan 21, 2025 | 9:48 AM

ಮಂಗಳೂರು, ಜನವರಿ 21: ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್​ನಲ್ಲಿ ದರೋಡೆ ಮಾಡಿದ ನಂತರ ದುಷ್ಕರ್ಮಿಗಳು ಕದ್ದ ಗೋಣಿ ಚಿನ್ನದ ಸಹಿತ 700 ಕಿ.ಮೀ ಕಾರಿನಲ್ಲೇ ಪ್ರಯಾಣಿಸಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಮಂಗಳೂರಿನಿಂದ ಫಿಯೇಟ್ ಕಾರಿನಲ್ಲಿ ಪರಾರಿಯಾಗಿದ್ದ ದರೋಡೆಕೋರರು ತಮಿಳುನಾಡಿನ ತಿರುನಲ್ವೇಲಿಗೆ ಪ್ರಯಾಣಿಸಿದ್ದರು. ತಮಿಳುನಾಡು ತಲುಪಿದ ಬಳಿಕ ಅಜ್ಞಾತ ಸ್ಥಳದಲ್ಲಿ ಕಾರು ಬಿಟ್ಟು ಚಿನ್ನದ ಜೊತೆ ಪರಾರಿಯಾಗಿದ್ದರು.

ದರೋಡೆಕೋರರ ಜಾಡು ಹಿಡಿದು ಹೊರಟಿದ್ದ ಮಂಗಳೂರು ಪೊಲೀಸರಿಗೆ ತಮಿಳುನಾಡಿನಲ್ಲಿ ಕಾರು ಪತ್ತೆಯಾಗಿದೆ. ನಂತರ ಕಾರಿನ ಚೇಸಿಸ್ ನಂಬರ್ ಆಧಾರದಲ್ಲಿ ಕಾರಿನ ನೈಜ ಮಾಲೀಕನ ಮಾಹಿತಿ ಸಂಗ್ರಹಿಸಿದ್ದಾರೆ. ಆ ಬಳಿಕ ತಮಿಳುನಾಡಿನಲ್ಲಿ ಜಾಲಾಡಿದ ಮಂಗಳೂರು ಪೊಲೀಸರಿಗೆ ಮೂವರು ಆಗಂತುಕರ ಜಾಡು ಪತ್ತೆಯಾಗಿದೆ. ತಮಿಳುನಾಡಿನ ತಿರುನಲ್ವೇಲಿ ಬಳಿ ಮೂವರು ದರೋಡೆಕೋರರನ್ನು ಬಂಧಿಸಲಾಗಿದೆ.

ತಿರುನಲ್ವೇಲಿ ತನಕ ಕಾರು ಚಲಾಯಿಸಿದ್ದ ಮುರುಗಂಡಿ ದೇವರ್

ಪ್ರಮುಖ ಅರೋಪಿ ಮುರುಗಂಡಿ ದೇವರ್ ತಿರುನಲ್ವೇಲಿ ತನಕ ಕಾರು ಚಲಾಯಿಸಿದ್ದ. ದರೋಡೆಕೋರರು ಪರಾರಿಯಾಗಲು ಬಳಸಿದ್ದು ಮಹಾರಾಷ್ಟ್ರ ಮೂಲದ ಫಿಯೇಟ್ ಕಾರು ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಮುಂಬೈ ಹಾಗೂ ತಮಿಳುನಾಡು ಮೂಲದ ನಟೋರಿಯಸ್ ಗ್ಯಾಂಗ್ ದರೋಡೆ ಮಾಡಿದೆ.

ಎರಡು ತಿಂಗಳ ಹಿಂದೆಯೇ ಮಂಗಳೂರಿಗೆ ಬಂದಿದ್ದ ಆರೋಪಿ

ಕೋಟೆಕಾರು ಬ್ಯಾಂಕ್ ದರೋಡೆಯ ಕಿಂಗ್​ಪಿನ್ ಮುರುಗಂಡಿ ದೇವರ್ ಎರಡು ತಿಂಗಳ ಹಿಂದೆಯೇ ಮಂಗಳೂರಿಗೆ ಬಂದಿದ್ದ. ಕೋಟೆಕಾರು ಬ್ಯಾಂಕ್ ಪರಿಸರದಲ್ಲಿ ಸುತ್ತಾಡಿ ಮಾಹಿತಿ ಕಲೆ ಹಾಕಿದ್ದ. ಆ ಬಳಿಕ ನಿಖರವಾದ ಸ್ಕೆಚ್ ತಯಾರಿಸಿ ಮತ್ತೆ ತಮಿಳುನಾಡಿಗೆ ತೆರಳಿದ್ದ. ಆ ಬಳಿಕ ದರೋಡೆಗೆ ಪಕ್ಕಾ ಪ್ಲಾನ್ ಮಾಡಿಕೊಂಡು ತಂಡದ ಜೊತೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಮಿಳುನಾಡಿನಿಂದ ಬಂದಿತ್ತು ಆರು ಮಂದಿಯ ತಂಡ

ದರೋಡೆ ಮಾಡುವುದಕ್ಕೆಂದು ರಾಜೇಂದ್ರನ್, ಕಣ್ಣನ್ ಮಣಿ ಹಾಗೂ ಇತರೆ ಅರು ಜನರ ಜೊತೆ ಮುರುಗಂಡಿ ದೇವರ್ ಬಂದಿದ್ದ. ಆದರೆ, ಐದು ಜನರಷ್ಟೇ ಫಿಯೇಟ್ ಕಾರಿನಲ್ಲಿ ಬಂದು ದರೋಡೆ ಮಾಡಿದ್ದರು. ಓರ್ವ ಬೇರೆ ಜಾಗದಲ್ಲಿ ನಿಂತು ದರೋಡೆಗೆ ನೆರವು ನೀಡಿದ್ದ.

ಇದನ್ನೂ ಓದಿ: ಬ್ಯಾಂಕ್ ದರೋಡೆ ತನಿಖೆ ವೇಳೆ ನಕಲಿ ನಂಬರ್ ವಾಹನಗಳ ಹಾವಳಿ ಬಯಲಿಗೆ: ರಾಜ್ಯದೆಲ್ಲೆಡೆ ಇವುಗಳದ್ದೇ ಕಾರುಬಾರು

ದರೋಡೆಕೋರರ ಬಂಧನದ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಸೋಮವಾರವೇ ಮಾಹಿತಿ ನೀಡಿದ್ದು, ದರೋಡೆಕೋರರನ್ನು ಹೇಗೆ ಟ್ರ್ಯಾಕ್ ಮಾಡಿ ಬಂಧಿಸಲಾಯ್ತು ಎಂಬುದನ್ನು ವಿವರಿಸಿದ್ದಾರೆ. ಕರ್ನಾಟಕ ಗುಪ್ತಚರ ಇಲಾಖೆ ಕೂಡ ಬ್ಯಾಂಕ್ ದರೋಡೆ ಪ್ರಕರಣ ಭೇದಿಸಲು ಸಹಾಯ ಮಾಡಿತ್ತು. ಬಂಧಿತರಿಂದ ಚಿನ್ನದ ಜತೆಗೆ ತಲ್ವಾರ್ ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 am, Tue, 21 January 25

Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ