ದಕ್ಷಿಣ ಕನ್ನಡ, ಮೇ.15: ಮಾದಕ ವಸ್ತು ಸಾಗಾಟ ಮಾಡ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು(Mangalore CCB police) ಬಂಧಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇಧಿತ ಎಂಡಿಎಂಎ(MDMA) ಮಾದಕ ವಸ್ತುವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಹಿನ್ನಲೆ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಬಳಿಕ ನಗರದ ಹೊರವಲಯದ ದೇರಳಕಟ್ಟೆಯ ಪರಿಸರದಲ್ಲಿ ಎಂಡಿಎಂಎ ಮಾರಾಟದ ಬಗ್ಗೆ ಖಚಿತ ಮಾಹಿತಿ ಹಿನ್ನಲೆ ದಾಳಿ ಮಾಡಿ, ನಾಲ್ವರನ್ನು ಬಂಧಿಸಿದ್ದಾರೆ.
ಬಿಜೈ ನಿವಾಸಿ ಮೊಹಮ್ಮದ್ ಅಮೀನ್ ರಾಫಿ (23), ಅಡ್ಡೂರು ನಿವಾಸಿ ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಬಂದರು ನಿವಾಸಿ ಮೊಹಮ್ಮದ್ ನೌಮಾನ್(22), ಉಳ್ಳಾಲ ಬೋಳಿಯಾರ ನಿವಾಸಿ ಮೊಹಮ್ಮದ್ ಸಫೀಲ್(23) ಬಂಧಿತರು. ಇನ್ನು ಬಂಧಿತರಿಂದ 6.5 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಸೇರಿದಂತೆ ಮೊಬೈಲ್ ಫೋನ್, ಟೊಯೊಟಾ ಕೊರೊಲ್ಲಾ ಕಾರು ಹಾಗೂ ಡಿಜಿಟಲ್ ತೂಕ ಮಾಪಕವನ್ನು ಜಪ್ತಿ ಮಾಡಲಾಗಿದೆ. ಈ ಆರೋಪಿಗಳು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದಾಗ ಬಾಯ್ಬಿಟ್ಟಿದ್ದಾರೆ.
ಇದನ್ನೂ ಓದಿ:ಬೆಳಗಾವಿಯಲ್ಲಿ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಿಷೇಧಿತ MDMA ಮಾದಕ ವಸ್ತು ವಶಕ್ಕೆ
ಮಂಗಳೂರು: ವಾಮಂಜೂರು ಮೈದಾನ ಬಳಿಯ ಅಂಗಡಿಯಲ್ಲಿ ಮಾದಕವಸ್ತು ಮಾರುತ್ತಿದ್ದ ದಾವೂದ್ ಪರ್ವೇಜ್(37) ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನ ಬಳಿ ಇದ್ದ 10 ಗ್ರಾಂ ತೂಕದ MDMA ಜಪ್ತಿ ಮಾಡಿದ್ದು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ