ಮಂಗಳೂರು: ಅತಿದೊಡ್ಡ ಡ್ರಗ್ಸ್​ ಜಾಲ ಪತ್ತೆ; 6 ಕೋಟಿ ರೂ. ಮೌಲ್ಯದ ಮಾದಕ ವಸ್ತು ​ವಶ

ಕರ್ನಾಟಕದ ವಿವಿಧಡೆ ಡಗ್ಸ್​ ಸರಬರಾಜು ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಬರೊಬ್ಬರಿ 6 ಕೋಟಿ ರೂ. ಮೌಲ್ಯದ ಡ್ರಗ್ಸ್​ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Follow us
| Updated By: ವಿವೇಕ ಬಿರಾದಾರ

Updated on:Oct 08, 2024 | 10:37 AM

ಮಂಗಳೂರು, ಅಕ್ಟೋಬರ್​ 08: ಮಂಗಳೂರು ಕೇಂದ್ರ ಅಪರಾಧ ವಿಭಾಗ (CCB)ದ ಪೊಲೀಸರು ಅತಿದೊಡ್ಡ ಡ್ರಗ್ (Drug)​ ಜಾಲ ಪತ್ತೆ ಹಚ್ಚಿದ್ದಾರೆ. ರಾಜ್ಯದ ವಿವಿಧಡೆ ಡ್ರಗ್​​ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು (Nigeria) ಮಂಗಳೂರು (Mangaluru) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಬರೋಬ್ಬರಿ ಆರು ಕೆ.ಜಿಯ ಆರು ಕೋಟಿ ರೂ. ಮೌಲ್ಯದ ಎಂಡಿಎಂ ಡ್ರಗ್ ವಶಪಡಿಸಿಕೊಂಡಿದ್ದಾರೆ. ಇದು ಮಂಗಳೂರು ನಗರ ಇತಿಹಾಸದಲ್ಲೇ ಅತೀ ದೊಡ್ಡ ಕಾರ್ಯಾಚರಣೆಯಾಗಿದೆ.

ಸಿಸಿಬಿ ಪೊಲೀಸರು ವಾರದ ಹಿಂದೆ ಹೈದರ್ ಅಲಿ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ನೈಜೀರಿಯಾ ಪ್ರಜೆಯ ಕೈವಾಡ ಇರುವುದು ತಿಳಿದುಬಂದಿದೆ. ನೈಜೀರಿಯಾ ಪ್ರಜೆಯ ಮಾಹಿತಿ ಕಲೆ ಹಾಕಿದ ಸಿಸಿಬಿ ಪೊಲೀಸರು ಆತ ಬೆಂಗಳೂರಿನಲ್ಲಿ ವಾಸವಿರುವುದು ತಿಳಿದಿದೆ. ಕೂಡಲೆ ಕಾರ್ಯಪ್ರವೃತರಾದ ಸಿಸಿಬಿ ಪೊಲೀಸರು ಬೆಂಗಳೂರಿಗೆ ತೆರಳಿ ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ.

ನೈಜೀರಿಯಾ ಪ್ರಜೆ ಬಳಿ ಇದ್ದ 17 ಸಿಮ್ ಕಾರ್ಡ್​, ​ಆತನ ಪಾಸ್‌ಪೋರ್ಟ್ ಸಹಿತ ಎಲ್ಲ ದಾಖಲೆಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ​ ಸ್ನೇಹಿತರು ಅರೆಸ್ಟ್​, 1 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ವಶ

ಚಿಪ್ಸ್​​ ಪ್ಯಾಕೆಟ್​ಗಳಲ್ಲಿ ಡ್ರಗ್ಸ್​ ಪೂರೈಕೆ

ಆರೋಪಿ ಸಣ್ಣ ಸಣ್ಣ ಪ್ಯಾಕೆಟ್​ಗಳ ಮೂಲಕ ರಾಜ್ಯದ ಹಲವಡೆ ಡ್ರಗ್ಸ್​ ಪೂರೈಕೆ ಮಾಡುತ್ತಿದ್ದನು. ಚಿಪ್ಸ್, ಬಿಸ್ಕೆಟ್ ಮತ್ತು ಗುಟ್ಕಾ ಪ್ಯಾಕೆಟ್​ಗಳಲ್ಲಿ ಡ್ರಗ್ಸ್​ ಹಾಕುತ್ತಿದ್ದನು. ಬಳಿಕ ಈ ಪ್ಯಾಕೆಟ್​​ಗಳನ್ನು ಕಸ ಎಸೆಯುವ ಜಾಗದಲ್ಲಿ ಎಸೆಯುತ್ತಿದ್ದನು. ಬಳಿಕ ಪೆಡ್ಲರ್ ಅದರ ಫೋಟೊ ತೆಗೆದು ಪೂರೈಕೆದಾರನಿಗೆ ಕಳುಹಿಸುತ್ತಿದ್ದನು. ಅವರು ಅಲ್ಲಿಂದ ಪ್ಯಾಕೆಟ್​​ ಅನ್ನು ತೆಗೆದುಕೊಂಡು ಹೋಗುತ್ತಿದ್ದರು. ಮಂಗಳೂರು ನಗರದಲ್ಲಿದ್ದ 50ಕ್ಕೂ ಅಧಿಕ ಡ್ರಗ್ಸ್​​ ಪ್ಯಾಕೆಟ್​ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:31 am, Tue, 8 October 24

ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್