ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಸಂಪರ್ಕಿಸುವ ರೈಲುಗಳು ರದ್ದು, ಸಮಯ ಬದಲಾವಣೆ: ಇಲ್ಲಿದೆ ಮಾಹಿತಿ

ನವೆಂಬರ್ 24 ಮತ್ತು 25 ರಂದು ಎರಡು ದಿನಗಳ ಕಾಲ ರೈಲು ಸೇವೆ ಸ್ಥಗಿತಗೊಳ್ಳಲಿದೆ. ನವೆಂಬರ್ 24ರ ರೈಲು ಸಂಖ್ಯೆ 06487 ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 06486 ಕಬಕ ಪುತ್ತೂರು- ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಸಂಪರ್ಕಿಸುವ ರೈಲುಗಳು ರದ್ದು, ಸಮಯ ಬದಲಾವಣೆ: ಇಲ್ಲಿದೆ ಮಾಹಿತಿ
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ
Follow us
ವಿವೇಕ ಬಿರಾದಾರ
|

Updated on: Nov 21, 2023 | 11:16 AM

ಮಂಗಳೂರು ನ.21: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ (Mangalore Central Railway Station) ಹೆಚ್ಚುವರಿ ಪ್ಲಾಟ್‌ಫಾರ್ಮ್ ನಿರ್ಮಾಣ ಕಾಮಗಾರಿ ಆರಂಭವಾದ ಹಿನ್ನೆಲ್ಲೆಯಲ್ಲಿ ನವೆಂಬರ್ 24 ಮತ್ತು 25 ರಂದು ಎರಡು ದಿನಗಳ ಕಾಲ ರೈಲು (Train) ಸೇವೆ ಸ್ಥಗಿತಗೊಳ್ಳಲಿದೆ. ನವೆಂಬರ್ 24ರ ರೈಲು ಸಂಖ್ಯೆ 06487 ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 06486 ಕಬಕ ಪುತ್ತೂರು- ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

ರದ್ದಾಗುವ ರೈಲುಗಳು

  1. ರೈಲು ಸಂಖ್ಯೆ 06485 ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 06484 ಕಬಕ ಪುತ್ತೂರು-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ಅನ್ನು ನವೆಂಬರ್ 25ರಂದು ಸಂಪೂರ್ಣ ರದ್ದುಗೊಳಿಸಲಾಗಿದೆ. ನವೆಂಬರ್ 24 ರಂದು ಮಡಗಾಂವ್ ಜಂಕ್ಷನ್‌ನಿಂದ ಹೊರಡುವ ರೈಲು ಸಂಖ್ಯೆ 10107 ಮಡಗಾಂವ್ ಜಂಕ್ಷನ್-ಮಂಗಳೂರು ಸೆಂಟ್ರಲ್ ಮೆಮು ಎಕ್ಸ್‌ಪ್ರೆಸ್ ಠೋಕೂರಿನಲ್ಲೇ ಕೊನೆಗೊಳ್ಳುತ್ತದೆ. ತೋಕೂರು ಮತ್ತು ಮಂಗಳೂರು ಸೆಂಟ್ರಲ್ ನಡುವೆ ರೈಲು ಭಾಗಶಃ ರದ್ದಾಗಲಿದೆ.
  2. ನವೆಂಬರ್ 24 ರಂದು ಮಡಗಾಂವ್ ಜಂಕ್ಷನ್‌ನಿಂದ ಹೊರಡುವ ರೈಲು ಸಂಖ್ಯೆ 06601 ಮಡಗಾಂವ್ ಜಂಕ್ಷನ್-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು, ಮಂಗಳೂರು ಜಂಕ್ಷನ್‌ನಲ್ಲೇ ಕೊನೆಗೊಳ್ಳುತ್ತದೆ. ರೈಲು ಮಂಗಳೂರು ಜಂಕ್ಷನ್ ಮತ್ತು ಮಂಗಳೂರು ಸೆಂಟ್ರಲ್ ನಡುವಿನ ರೈಲುಗಳು ಭಾಗಶಃ ರದ್ದುಗಲಿವೆ.

ರೈಲು ಕಾರ್ಯಾಚರಣೆಯಲ್ಲಿ ಬದಲಾವಣೆ

  1. ರೈಲು ಸಂಖ್ಯೆ 10108 ಮಂಗಳೂರು ಸೆಂಟ್ರಲ್-ಮಡ್ಗಾಂವ್ ಜಂಕ್ಷನ್ ಮೆಮು ಎಕ್ಸ್‌ಪ್ರೆಸ್ ನವೆಂಬರ್ 24 ರಂದು ಮಂಗಳೂರು ಸೆಂಟ್ರಲ್ ಬದಲಿಗೆ ತೋಕೂರು ನಿಲ್ದಾಣದಿಂದ ಹೊರಡಲಿದೆ. ಮಂಗಳೂರು ಸೆಂಟ್ರಲ್ ಮತ್ತು ತೋಕೂರ್ ನಡುವೆ ಸೇವೆಯನ್ನು ಭಾಗಶಃ ರದ್ದುಗೊಳಿಸಲಾಗುವುದು (ತೋಕೂರಿನಲ್ಲಿ ನಿರ್ಗಮನ ಸಮಯ ಸಂಜೆ 4.25)
  2. ರೈಲು ಸಂಖ್ಯೆ 22638 ಮಂಗಳೂರು ಸೆಂಟ್ರಲ್-ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ವೆಸ್ಟ್ ಕೋಸ್ಟ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ನವೆಂಬರ್ 24 ರಂದು ಮಂಗಳೂರು ಸೆಂಟ್ರಲ್ ಬದಲಿಗೆ ಮಂಗಳೂರು ಜಂಕ್ಷನ್‌ನಿಂದ ಹೊರಡಲಿದೆ. (ಮಂಗಳೂರು ಜಂಕ್ಷನ್‌ನಲ್ಲಿ ನಿಗದಿತ ನಿರ್ಗಮನ ಸಮಯ ರಾತ್ರಿ 11.45)
  3. ರೈಲು ಸಂಖ್ಯೆ 16610 ಮಂಗಳೂರು ಸೆಂಟ್ರಲ್-ಕೋಜಿಕೋಡ್ ಎಕ್ಸ್‌ಪ್ರೆಸ್ ನವೆಂಬರ್ 25 ರಂದು ಮಂಗಳೂರು ಸೆಂಟ್ರಲ್ ಬದಲಿಗೆ ಮಂಗಳೂರು ಜಂಕ್ಷನ್‌ನಿಂದ ಹೊರಡಲಿದೆ. (ಮಂಗಳೂರು ಜಂಕ್ಷನ್‌ನಲ್ಲಿ ನಿಗದಿತ ನಿರ್ಗಮನ ಸಮಯ ಬೆಳಗ್ಗೆ 5.15)

ಇದನ್ನೂ ಓದಿ: ಬೆಂಗಳೂರು-ಧಾರವಾಡ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಬೆಳಗಾವಿವರೆಗೂ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

ಸಮಯ ಬದಲಾವಣೆ

  1. ರೈಲು ಸಂಖ್ಯೆ 06602 ಮಂಗಳೂರು ಸೆಂಟ್ರಲ್-ಮಡ್ಗಾಂವ್ ಜಂಕ್ಷನ್ ಎಕ್ಸ್‌ಪ್ರೆಸ್ ರೈಲು ನವೆಂಬರ್ 21, 22, 24 ಮತ್ತು 25 ರಂದು ಮಂಗಳೂರು ಸೆಂಟ್ರಲ್‌ನಿಂದ ಬೆಳಿಗ್ಗೆ 5.30ರ ಬದಲು (30 ನಿಮಿಷ ತಡವಾಗಿ) ಬೆಳಿಗ್ಗೆ 6 ಗಂಟೆಗೆ ಹೊರಡಲಿದೆ.
  2. ರೈಲು ಸಂಖ್ಯೆ 16649 ಮಂಗಳೂರು ಸೆಂಟ್ರಲ್ – ನಾಗರ್‌ಕೋಯಿಲ್ ಜಂಕ್ಷನ್ ಎಕ್ಸ್‌ಪ್ರೆಸ್ ರೈಲು ನವೆಂಬರ್ 25 ರಂದು ಮಂಗಳೂರು ಸೆಂಟ್ರಲ್‌ನಿಂದ ಬೆಳಗ್ಗೆ 5.05ರ ಬದಲಾಗಿ (30 ನಿಮಿಷಗಳ ತಡವಾಗಿ) 5.35 ಕ್ಕೆ ಹೊರಡಲುತ್ತದೆ.
  3. ರೈಲು ಸಂಖ್ಯೆ 22637 ನವೆಂಬರ್ 24 ರಂದು ಡಾ ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಹೊರಡಲಿರುವ ಮಂಗಳೂರು ಸೆಂಟ್ರಲ್ ವೆಸ್ಟ್ ಕೋಸ್ಟ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ಮಾರ್ಗದಲ್ಲಿ 30 ನಿಮಿಷಗಳ ಕಾಲ ನಿಲ್ಲಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ