ದಕ್ಷಿಣ ಕನ್ನಡ: ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ 14 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಬ್ರಾಂತಿಕಟ್ಟೆ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯ ಧರ್ಮಸ್ಥಳ ನಡುವೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್, ಮರ್ಧಾಳ ಗ್ರಾಮದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು, ಮತ್ತೊಂದು ಕಾರು ಓವರ್ಟೇಕ್ ಮಾಡುವ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಕಾರಿನಲ್ಲಿದ್ದ ಇನ್ನುಳಿದ ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯುತ್ ಸ್ಪರ್ಶಿದಿಂದ ಅಡಿಕೆ ತೆಂಗು ಬೆಳೆಗೆ ಬೆಂಕಿ
ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಬಿಕ್ಕಿನಕುರಿಕೆ ಗ್ರಾಮದ ರೈತ ಹನುಮಂತರಾಯಪ್ಪ ಅವರ 4 ಎಕರೆ ಜಮೀನಿನಲ್ಲಿ ಬೆಳೆದಿದ್ದ 150 ಅಡಿಕೆ ಹಾಗೂ 400 ತೆಂಗಿನ ಮರಗಳು ಸುಟ್ಟು ಕರಕಲಾದ ಘಟನೆ ನಡೆದಿದೆ. ಸುಮಾರು 25 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಬೆಳೆ ಬೆಂಕಿಗಾಹುತಿಯಾಗಿದ್ದು, ರೈತ ಹನುಮಂತರಾಯಪ್ಪ ಬೆಳೆಹಾನಿಯಿಂದ ಕಂಗಾಲಾಗಿದ್ದಾರೆ. ಅಗ್ನಿಶಾಮಕ ದಳದಿಂದ ಬೆಂಕಿನಂದಿಸುವ ಕಾರ್ಯ ನಡೆಯುತ್ತಿದ್ದು, ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ರೈತ ಹನುಮಂತರಾಯಪ್ಪ ಆರೋಪಿಸಿದ್ದಾರೆ. ಸ್ಥಳಕ್ಕೆ ಕಂದಾಯ ಅಧಿಕಾರಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಬಡವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:57 pm, Mon, 13 February 23