ಕೊರೊನಾ, ಬ್ಲ್ಯಾಕ್ ಫಂಗಸ್​ಗೆ ಹೆದರಿದ ಮಂಗಳೂರು ದಂಪತಿ; ಪೊಲೀಸ್ ಕಮಿಷನರ್​ಗೆ ಕರೆ ಮಾಡಿ ಆತ್ಮಹತ್ಯೆಗೆ ಶರಣು

ಆತ್ಮಹತ್ಯೆಗೆ ಮುನ್ನ ಮಂಗಳೂರು ಪೊಲೀಸ್ ಆಯುಕ್ತರಿಗೆ ಪತಿ ರಮೇಶ್ ಕರೆ ಮಾಡಿದ್ದರು. ಪತ್ನಿ ಗುಣ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಾನೂ ಕೂಡಾ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ರಮೇಶ್ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್​ಗೆ ಇಂದು (ಆಗಸ್ಟ್ 17) ಬೆಳಗ್ಗೆ ಕರೆ ಮಾಡಿದ್ದರು

ಕೊರೊನಾ, ಬ್ಲ್ಯಾಕ್ ಫಂಗಸ್​ಗೆ ಹೆದರಿದ ಮಂಗಳೂರು ದಂಪತಿ; ಪೊಲೀಸ್ ಕಮಿಷನರ್​ಗೆ ಕರೆ ಮಾಡಿ ಆತ್ಮಹತ್ಯೆಗೆ ಶರಣು
ಆತ್ನಹತ್ಯೆಗೆ ಶರಣಾಗಿರುವ ರಮೇಶ್ ಮತ್ತು ಗುಣ
Follow us
TV9 Web
| Updated By: sandhya thejappa

Updated on:Aug 17, 2021 | 9:52 AM

ಮಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಆತಂಕ ಹೆಚ್ಚಾಗುತ್ತಿದೆ. ಈಗಾಗಲೇ ಎರಡನೇ ಅಲೆಗೆ ಅದೆಷ್ಟೋ ಕುಟುಂಬಗಳು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ತಂದೆ-ತಾಯಿ ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಮಹಾಮಾರಿ ಕೊರೊನಾದಿಂದಾದ ನಷ್ಟ ಅಷ್ಟಿಷ್ಟಲ್ಲ. ಈ ನಡುವೆ ಮಂಗಳೂರಿನಲ್ಲಿ ಕೊರೊನಾ ಮತ್ತು ಬ್ಲ್ಯಾಕ್ ಫಂಗಸ್ಗೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳೂರು ಹೊರವಲಯದ ಚಿತ್ರಾಪುರದ ರಹೆಜಾ ಅಪಾರ್ಟ್​ಮೆಂಟ್​ನಲ್ಲಿ ರಮೇಶ್ ಕುಮಾರ್ ಮತ್ತು ಗುಣ ದಂಪತಿ ಆತ್ನಹತ್ಯಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ಮುನ್ನ ಮಂಗಳೂರು ಪೊಲೀಸ್ ಆಯುಕ್ತರಿಗೆ ಪತಿ ರಮೇಶ್ ಕರೆ ಮಾಡಿದ್ದರು. ಪತ್ನಿ ಗುಣ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಾನೂ ಕೂಡಾ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ರಮೇಶ್ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್​ಗೆ ಇಂದು (ಆಗಸ್ಟ್ 17) ಬೆಳಗ್ಗೆ ಕರೆ ಮಾಡಿದ್ದರು. ಬಳಿಕ ಲೊಕೇಷನ್ ಟ್ರೇಸ್ ಮಾಡಿ ಪೊಲೀಸ್ ಆಯುಕ್ತರು ಸಿಬ್ಬಂದಿಯನ್ನು ಕಳುಹಿಸಿದ್ದರು.

ಲಾಕ್ ಆಗಿದ್ದ ಫ್ಲ್ಯಾಟ್ ಬಾಗಿಲು ಒಡೆದು ಸಿಬ್ಬಂದಿ ಒಳಗೆ ಹೋಗುತ್ತಾರೆ. ಅಷ್ಟರಲ್ಲೇ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದರು. ಒಂದು ವಾರದಿಂದ ರಮೇಶ್ ದಂಪತಿ ಕೊವಿಡ್ ಸೋಂಕಿನಿಂದ ಬಳಲುತ್ತಿದ್ದರು. ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ತೀರ್ಮಾನಿಸಿದ್ದಾರೆ. ಪೊಲೀಸ್ ಆಯುಕ್ತ ಮತ್ತು ಹಿಂದೂ ಸಂಘಟನೆ ಮುಖಂಡರಿಗೆ ಅಂತ್ಯಕ್ರಿಯೆಗೆ 1 ಲಕ್ಷ ರೂ. ಹಣ ಇಟ್ಟಿರುವುದಾಗಿ ವಾಯ್ಸ್ ಮೆಸೇಜ್ ಮಾಡಿದ್ದಾರೆ. ಅಲ್ಲದೇ ಮನೆಯಲ್ಲಿರುವ ವಸ್ತು ಮಾರಿ ಬರುವ ಹಣವನ್ನು ಬಡವರಿಗೆ ನೀಡಬೇಕು ಅಂತ ಮನವಿ ಮಾಡಿದ್ದಾರೆ. ಸದ್ಯ ಈ ಪ್ರಕರಣ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಸ್ಥಳ ಪರಿಶೀಲನೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿಸಿಪಿ ಹರಿರಾಂ ಶಂಕರ್, ಬೆಳಗ್ಗೆ 6.40ರ ಹೊತ್ತಿಗೆ ಕಮಿಷನರ್​ಗೆ ವಾಟ್ಸಾಪ್ ಮೆಸೇಜ್ ಮತ್ತು ಕಾಲ್ ಬಂದಿದೆ. ಕೊರೊನಾ ಭಯದಿಂದ ನಾನು ಮತ್ತು ನನ್ನ ಹೆಂಡತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಅಂತ ಕಾಲ್ ಬಂದಿತ್ತು. ತಕ್ಷಣ ಕಮಿಷನರ್ ಕಾಲ್ ಮಾಡಿದ್ರೂ ಅವರು ಎತ್ತಲಿಲ್ಲ. ವಾಯ್ಸ್ ಮೆಸೇಜ್ ಮಾಡಿ ಧೈರ್ಯ ತುಂಬಿದ್ರೂ ರಿಪ್ಲೈ ಮಾಡಿಲ್ಲ. ನಂತರ ಲೊಕೇಶನ್ ಟ್ರೇಸ್ ಮಾಡಿ ನಮ್ಮ ತಂಡ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿಸಿದ್ದಾರೆ.

ಡೆತ್​ ನೋಟಲ್ಲಿ ನಮಗೆ ಕೊರೊನಾ ಇದೆ. ಬ್ಲಾಕ್ ಫಂಗಸ್ ಬಂದ್ರೆ ಸಮಸ್ಯೆ ಅಂತೆಲ್ಲಾ ಬರೆದಿದ್ದಾರೆ. ಆದರೆ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ಪ್ರಕಾರ ಅವರಿಗೆ ಕೊರೊನಾ ಇರುವ ಬಗ್ಗೆ ಮಾಹಿತಿಯಿಲ್ಲ. ಅವರೇ ಸ್ವಂತ ನಿರ್ಧಾರಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಸಲ ಮಗು ಪಡೆಯಲು ಯತ್ನಿಸಿ ವಿಫಲರಾಗಿದ್ದು, ಇದರ ಖಿನ್ನತೆ ಇರಬಹುದು. ಆದರೆ ಇವರು ಯಾರ ಜೊತೆಗೂ ಹೆಚ್ಚಾಗಿ ಬೆರೆತಿರುವ ಬಗ್ಗೆ ಮಾಹಿತಿಯಿಲ್ಲ ಎಂದು ಡಿಸಿಪಿ ಹೇಳಿದ್ದಾರೆ.

ಇದನ್ನೂ ಓದಿ

Afghanistan: ಅಫ್ಘಾನಿಸ್ತಾನದಲ್ಲಿ ಭೂಕಂಪ, ಕಾಬೂಲ್​ ಹಿಂದಿನ ಸರ್ಕಾರಕ್ಕಿಂತ ತಾಲೀಬಾನಿಗಳ ಕೈಯಲ್ಲಿ ಸುರಕ್ಷಿತವಾಗಿದೆ ಎಂದ ರಷ್ಯಾ!

ಅಮೆರಿಕ ಈ ಹಿಂದೆ ತಪ್ಪು ಹೆಜ್ಜೆಗಳನ್ನಿಟ್ಟಿದೆ; ನಾನೂ ಮತ್ತೆ ತಪ್ಪು ಮಾಡೊಲ್ಲ, ಅಫ್ಗಾನ್ ಆಂತರಿಕ ವಿಚಾರಕ್ಕೂ ನಮಗೂ ಸಂಬಂಧವಿಲ್ಲ: ಬೈಡನ್ ಪ್ರತಿಕ್ರಿಯೆ

(Mangalore couple commit suicide in fear of black fungus and coronavirus)

Published On - 8:50 am, Tue, 17 August 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ