Breaking News: ಮಂಗಳೂರು ಮಳಲಿ ಮಸೀದಿ ವಿವಾದ: ವಿಎಚ್​ಪಿ ಅರ್ಜಿ ವಿಚಾರಣೆಗೆ ಅಂಗೀಕಾರ, ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ

ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಮತ್ತು ವಿಎಚ್​ಪಿ ಅರ್ಜಿ ವಜಾ ಮಾಡಬೇಕು ಎನ್ನುವ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

Breaking News: ಮಂಗಳೂರು ಮಳಲಿ ಮಸೀದಿ ವಿವಾದ: ವಿಎಚ್​ಪಿ ಅರ್ಜಿ ವಿಚಾರಣೆಗೆ ಅಂಗೀಕಾರ, ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ
ಮಂಗಳೂರಿನ ಮಳಲಿ ಮಸೀದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 09, 2022 | 12:10 PM

ಮಂಗಳೂರು: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಮತ್ತು ವಿಎಚ್​ಪಿ ಅರ್ಜಿ ವಜಾ ಮಾಡಬೇಕು ಎನ್ನುವ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿಯೇ ಅರ್ಜಿಯ ವಿಚಾರಣೆ ನಡೆಯಲಿದೆ. ಕೋರ್ಟ್ ಕಮಿಷನರ್ ನೇಮಿಸಿ, ಮಸೀದಿ ಸರ್ವೇ ನಡೆಸಬೇಕು ಎಂದು ವಿಎಚ್​ಪಿ ತನ್ನ ಅರ್ಜಿಯಲ್ಲಿ ಮನವಿ ಮಾಡಿತ್ತು. ವಿಎಚ್​ಪಿ ಅರ್ಜಿಯನ್ನು ಅಂಗೀಕರಿಸಿರುವ ನ್ಯಾಯಾಲಯವು ವಿಚಾರಣೆಯನ್ನು ಜನವರಿ 8, 2023ಕ್ಕೆ ಮುಂದೂಡಿದೆ.

ಮಸೀದಿ ವಿವಾದದ ಬಗ್ಗೆ ಕಳೆದ ಅ 17ರಂದು ನ್ಯಾಯಾಲಯವು ವಿಚಾರಣೆ ನಡೆಸಿತ್ತು. ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿ ರಚನೆ ಇದೆ. ವಿಚಾರಣೆಗಾಗಿ ಕೋರ್ಟ್​ ಕಮಿಷನರ್ ನೇಮಿಸಬೇಕು ಎಂದು ಹಿಂದುತ್ವ ಪರ ಸಂಘಟನೆಗಳು ಕೋರಿದ್ದವು. ಕಳೆದ ಬಾರಿಯ ವಿಚಾರಣೆಯ ವೇಳೆ ನ್ಯಾಯಾಲಯವು ‘ಸದ್ಯದ ಮಟ್ಟಿಗೆ ಮಳಲಿ ಮಸೀದಿ ಕಟ್ಟಡವನ್ನು ಯಥಾಸ್ಥಿತಿ ಕಾಯ್ದುಕೊಳ್ಳಬೇಕು’ ಎಂದು ಹೇಳಿತ್ತು. ಇಂದು ನೀಡಿದ ತೀರ್ಪಿನಲ್ಲಿ ಈ ಬಗ್ಗೆ ಉಲ್ಲೇಖ ಇರುವ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ.

ಮಳಲಿ ಮಸೀದಿಯಲ್ಲಿ ಹಿಂದೂ ದೇಗುಲ ಆಕೃತಿಯ ಕಟ್ಟಡ ಇದೆ. ಮಸೀದಿ ಸಮುಚ್ಚಯದ ಸರ್ವೇಕ್ಷಣೆಗೆ ಆದೇಶ ಮಾಡಬೇಕು ಎಂದು ಹಿಂದುತ್ವ ಪರ ಸಂಘಟನೆಗಳು ಮನವಿ ಮಾಡಿದ್ದವು. ಇನ್ನು ವಿರೋಧಿಸಿದ್ದ ಮಸೀದಿ ಆಡಳಿತ ಮಂಡಳಿ ಮತ್ತು ಮುಸ್ಲಿಂ ಸಂಘಟನೆಗಳು ಈ ದಾವೆಯ ವಿಚಾರಣೆ ನಡೆಸುವ ಅಧಿಕಾರವು ನ್ಯಾಯಾಯಕ್ಕೆ ಇಲ್ಲ ಎಂದು ಹೇಳಿದ್ದವು.

ಮಳಲಿ ಮಸೀದಿ ಜಾಗದಲ್ಲಿ ಕೋರ್ಟ್​ ಕಮಿಷನರ್ ಮೂಲಕ ಸರ್ವೆ ನಡೆಸಲು ಆದೇಶ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಆಕ್ಷೇಪಿಸಿದ್ದ ಮಸೀದಿ ಮಂಡಳಿ, ಇಂಥ ಆದೇಶ ಮಾಡಲು ವಿಚಾರಣಾ ನ್ಯಾಯಾಲಯಕ್ಕೆ ಅಧಿಕಾರವಿಲ್ಲ. ವಿಶ್ವ ಹಿಂದೂ ಪರಿಷತ್ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಎಂದು ಕೋರಿತ್ತು. ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯವು ಆಗಸ್ಟ್ 27 ರಂದೇ ತೀರ್ಪು ಪ್ರಕಟಿಸಲಿದೆ ಎಂದು ಹೇಳಲಾಗಿತ್ತು. ಆದರೆ ಅ 17ಕ್ಕೆ ತೀರ್ಪನ್ನು ನ್ಯಾಯಾಲಯವು ಕಾಯ್ದಿರಿಸಿತ್ತು. ನಂತರ ಮತ್ತೊಮ್ಮೆ ತೀರ್ಪು ಕಾಯ್ದಿರಿಸಿದ್ದು, ನ 9ಕ್ಕೆ ಕಲಾಪವನ್ನು ಮುಂದೂಡಲಾಗಿತ್ತು. ಇಂದು ತೀರ್ಪು ನೀಡಿರುವ ನ್ಯಾಯಾಲಯವು ವಿಎಚ್​ಪಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದೆ. ಮುಂದಿನ ವಿಚಾರಣೆಯನ್ನು ಜ 8ಕ್ಕೆ ಮುಂದೂಡಿದೆ.

ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು. ನಂತರದ ದಿನಗಳಲ್ಲಿ ಅಷ್ಟಮಂಗಲ ಪ್ರಶ್ನೆಗೆ ವಿಶ್ವ ಹಿಂದೂ ಪರಿಷತ್ ಮುಂದಾಗಿತ್ತು. ಆದರೆ ಇದು ಸಾಧ್ಯವಾಗದ ಹಿನ್ನೆಲೆಯಲ್ಲಿ ತಾಂಬೂಲ ಪ್ರಶ್ನೆ ವಿಧಾನದಿಂದ ಪರಿಶೀಲಿಸಿದಾಗ ದೈವ ಸಾನ್ನಿಧ್ಯ ಇರುವುದು ಗೋಚರಿಸಿತು ಎಂದು ಜ್ಯೋತಿಷಿ ಗೋಪಾಲಕೃಷ್ಣ ಫಣಿಕ್ಕರ್ ಪ್ರತಿಕ್ರಿಯಿಸಿದ್ದರು.

ಮಸೀದಿಯೆಂದು ಮತ್ತೆ ಸಾಬೀತುಪಡಿಸುವುದು ಅನಗತ್ಯ

ಮಳಲಿಯಲ್ಲಿರುವುದು ಮಸೀದಿ ಎಂದು ಮತ್ತೊಮ್ಮೆ ಸಾಬೀತುಪಡಿಸುವ ಅಗತ್ಯವಿಲ್ಲ. ಸರ್ಕಾರಿ ವಕ್ಫ್ ದಾಖಲೆ ಪ್ರಕಾರವೇ ಅಲ್ಲಿ ಮಸೀದಿ ಇರುವುದು ದಾಖಲಾಗಿದೆ. ಮಸೀದಿ ಎಂದರೆ ವಕ್ಫ್ ಕಾನೂನಿನ ಪ್ರಕಾರ ಪ್ರಾರ್ಥನಾ ಸ್ಥಳ ಎಂದು ಅರ್ಥ. ಅಂಥ ಸ್ಥಳವನ್ನು ನಿಯಮಗಳ ಪ್ರಕಾರ ವಕ್ಫ್ ಆಸ್ತಿಯೆಂದು ಕರೆಯುತ್ತಾರೆ ಎಂದು ಮಸೀದಿ ಪರ ವಕೀಲ ಎಂ.ಪಿ.ಶೆಣೈ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು ಹೇಳಲು ಕೇಂದ್ರ ಸರ್ಕಾರದ ಅಧಿಸೂಚನೆ ಇರಬೇಕು. ಆದರೆ ಮಳಲಿ ಮಸೀದಿಯ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಇರಲಿಲ್ಲ. ಹೀಗಿರುವಾಗ ಇದನ್ನು ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಅಲ್ಲದೇ ಇದನ್ನ ಸ್ಮಾರಕವೋ ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್​ಗೆ ಅಧಿಕಾರ ಇಲ್ಲ. ಹೀಗಾಗಿ ವಿಎಚ್​ಪಿ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಅವರು ಕೋರಿದ್ದರು.

ಸರ್ವೆ ಅಗತ್ಯ: ವಿಪಿಎಚ್​ ವಾದ

ವಿಶ್ವ ಹಿಂದೂ ಪರಿಷತ್ ಪರವಾಗಿ ವಾದ ಮಂಡಿಸಿದ್ದ ವಕೀಲ ಚಿದಾನಂದ ಕೆದಿಲಾಯ, ‘ನಮ್ಮ ಅರ್ಜಿದಾರರು ಸಲ್ಲಿಸಿರುವ ಅರ್ಜಿಯು ವಕ್ಫ್ ಟ್ರಿಬ್ಯುನಲ್​ಗೆ ಬರುವುದಿಲ್ಲ. ನಾವು ಎಲ್ಲಿಯೂ ಇದನ್ನು ವಕ್ಫ್​ ಆಸ್ತಿಯೋ ಅಲ್ಲವೋ ಎಂದು ಪ್ರಶ್ನೆ ಮಾಡಿಲ್ಲ. ಅದೊಂದು ಐತಿಹಾಸಿಕ ಸ್ಮಾರಕ ಅಥವಾ ದೇಗುಲ ಎಂದೇ ಹೇಳಿದ್ದೇವೆ. ಹೀಗಾಗಿ ಅದರ ಸಂರಕ್ಷಣೆ ಮಾಡುವಂತೆ ಅರ್ಜಿಯಲ್ಲಿ ಕೇಳಿದ್ದೇವೆ. ಇದು ಸ್ಮಾರಕವೋ ಮಸೀದಿಯೋ ಎನ್ನುವುದನ್ನು ವಕ್ಫ್ ಟ್ರಿಬ್ಯುನಲ್​ ನಿರ್ಧರಿಸಲು ಆಗುವುದಿಲ್ಲ. ಮಳಲಿ ಮಸೀದಿ ಸ್ಥಳದ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೆಗೆ ಆದೇಶಿಸಿದರೆ ಅಲ್ಲಿನ ಸ್ಮಾರಕದ ಯಾವುದೆಂದು ತಿಳಿಯುತ್ತದೆ’ ಎಂದು ಕೋರಿದ್ದರು.

Published On - 11:56 am, Wed, 9 November 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್