AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತವನ್ನು ದ್ವೇಷಿಸುತ್ತೇನೆ’: ಮಂಗಳೂರು ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್

ಜಮ್ಮು ಮತ್ತು ಕಾಶ್ಮೀರದ ಪಾಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ. ಇದೇ ಸಂದರ್ಭದಲ್ಲಿ, ಮಂಗಳೂರಿನ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬಳು ಸಾಮಾಜಿಕ ಮಾಧ್ಯಮದಲ್ಲಿ ದೇಶ ಮತ್ತು ಧರ್ಮ ವಿರೋಧಿ ಪೋಸ್ಟ್ ಪ್ರಕಟಿಸಿದ್ದಾಳೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

‘ಭಾರತವನ್ನು ದ್ವೇಷಿಸುತ್ತೇನೆ’: ಮಂಗಳೂರು ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್
ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್ ಹಾಗೂ ಅದಕ್ಕೆ ವ್ಯಕ್ತವಾಗಿರುವ ವಿರೋಧ
ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma|

Updated on:Apr 29, 2025 | 8:33 AM

Share

ಮಂಗಳೂರು, ಏಪ್ರಿಲ್ 29: ‘ಕಾಪಾಡಿ, ಕೊಳಕು ಹಿಂದೂಗಳು (Hindu) ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು (India) ದ್ವೇಷಿಸುತ್ತೇನೆ’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ (Mangalore) ವೈದ್ಯೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿದ್ದು ಇದೀಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ವೈದ್ಯೆ ಈ ರೀತಿ ಪೋಸ್ಟ್ ಮಾಡಿರುವುದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ಎಂಬಾಕೆ ದೇಶ ವಿರೋಧಿ ಸಂದೇಶ ಪ್ರಕಟಿಸಿದ್ದು, ಸದ್ಯ ಆಕೆಯ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಹೈಲ್ಯಾಂಡ್ ಆಸ್ಪತ್ರೆ ಹೆಚ್​ಆರ್​ ಮೊಹಮ್ಮದ್ ಅಸ್ಲಾಂ ದೂರು ಆಧರಿಸಿ ಬಿಎನ್​ಎಸ್​​ ಕಲಂ 196(1)(a), 353(2) ಅಡಿಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.

ಅಫೀಫ ಫಾತಿಮಾ ಹೈಲ್ಯಾಂಡ್ ಆಸ್ಪತ್ರೆಯಿಂದ ವಜಾ

ಅಫೀಫ ಫಾತಿಮಾ ಪೋಸ್ಟ್​ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಆಕೆಯನ್ನು ಹೈಲ್ಯಾಂಡ್ ಆಸ್ಪತ್ರೆ ಆಡಳಿತ ಮಂಡಳಿ ವಜಾಗೊಳಿಸಿದೆ. ನಂತರ ಆಸ್ಪತ್ರೆಯ ಹೆಚ್​ಆರ್ ಆಕೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ
Image
ವಾಲಿಬಾಲ್ ಆಟಗಾರನ ಕಾಮಕಾಂಡ ಬಯಲು, ಮೊಬೈಲ್​ನಲ್ಲಿತ್ತು ಸರಸ ಸಲ್ಲಾಪದ ವಿಡಿಯೋ
Image
ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಸಚಿವ ಸೋಮಣ್ಣ ಸೂಚನೆ
Image
ಮಂಗಳೂರಿನಲ್ಲಿ ತೇರು ಬಿದ್ದ ವಿಚಾರ: ಅವಘಡದ ಬಗ್ಗೆ ದೈವಗಳು ಆಕ್ರೋಶ
Image
ಮಂಗಳೂರು: ಪಹಲ್ಗಾಮ್​ ಉಗ್ರರ ದಾಳಿ ಸಮರ್ಥಿಸಿಕೊಂಡು ಫೇಸ್​ಬುಕ್​ನಲ್ಲಿ ಪೋಸ್

ಮಂಗಳೂರಿನ ಹೈಲ್ಯಾಂಡ್ ನ ಖಾಸಗಿ ಆಸ್ಪತ್ರೆಯ ವೈದ್ಯೆಯ ದೇಶ ಹಾಗೂ ಹಿಂದೂ ವಿರೋಧಿ ಬರವಣಿಗೆಯ ಬಗ್ಗೆ ಮಂಗಳೂರು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ವೈದ್ಯೆಯ ಮೇಲೆ ಕಾನೂನು ಕ್ರಮ ಕೈಗೊಳ್ಳಿ ಎಂದು ವಿಹೆಚ್​​ಪಿ ಮುಖಂಡ ಶರಣ್ ಕುಮಾರ್ ಪಂಪ್ವೆಲ್ ಆಗ್ರಹಿಸಿದ್ದರು.

ಇದನ್ನೂ ಓದಿ: ಮಂಗಳೂರು: ಪಹಲ್ಗಾಮ್​ ಉಗ್ರರ ದಾಳಿ ಸಮರ್ಥಿಸಿಕೊಂಡು ಫೇಸ್ ​ಬುಕ್​ನಲ್ಲಿ ಪೋಸ್ಟ್​

ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಕೆಲವೇ ದಿನ ಹಿಂದಷ್ಟೇ ವ್ಯಕ್ತಿಯೊಬ್ಬ ಫೇಸ್​​​ಬುಕ್​​ನಲ್ಲಿ ಸಂದೇಶ ಪ್ರಕಟಿಸಿದ್ದ. “2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್​ನಲ್ಲಿ ಮೂವರು ಮುಸ್ಲಿಮರನ್ನು‌ ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್​ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ” ಎಂದು ನಿಚ್ಚು ಮಂಗಳೂರು ಎಂಬ‌ ಫೇಸ್​ಬುಕ್​ ಪೇಜ್​ನಲ್ಲಿ ಪೋಸ್ಟ್ ಮಾಡಲಾಗಿತ್ತು. ಆ ಪೋಸ್ಟ್ ವಿರುದ್ಧ ಪ್ರಕರಣದ ದಾಖಲಿಸಿದ್ದ ಮಂಗಳೂರು ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇ ಸಂದರ್ಭದಲ್ಲಿ ಈಗ ವೈದ್ಯೆ ದೇಶ ವಿರೋಧಿ ಪೋಸ್ಟ್ ಮಾಡಿದ್ದಾಳೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:32 am, Tue, 29 April 25

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್