ಫೆ.17 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶ, ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಿದ ಕೈ ಪಡೆ

ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಉಳಿದಿದೆ. ಈ ಹಿನ್ನಲೆ ಫುಲ್​ ಆಕ್ಟೀವ್​ ಆದ ಕಾಂಗ್ರೆಸ್​, ಫೆ.17 ಶನಿವಾರದಂದು ಮಂಗಳೂರಿನ (Mangalore) ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್​ ರಾಜ್ಯ ಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದೆ. ಈ ಮೂಲಕ ಕೈ ಪಡೆ ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಲಿದೆ.

ಫೆ.17 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶ, ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಿದ ಕೈ ಪಡೆ
ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 16, 2024 | 7:26 PM

ದಕ್ಷಿಣ ಕನ್ನಡ, ಫೆ.16: ಲೋಕಸಭೆ ಚುನಾವಣೆಗೆ (lok sabha election) ಹೇಗಾದರೂ ಮಾಡಿ ಮತದಾರರನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಕಾಂಗ್ರೆಸ್​ ಹರಸಾಹಸ ನಡೆಸಿದೆ. ಅದರಂತೆ ಎಐಸಿಸಿ(AICC) ಸೂಚನೆ ಮೇರೆಗೆ ನಾಳೆ(ಫೆ.17) ಮಂಗಳೂರಿನ (Mangalore) ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್​ ರಾಜ್ಯ ಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದ್ದು, ಲೋಕಸಭೆ ಚುನಾವಣೆಗೆ ಕಾರ್ಯಕರ್ತರ ಸಜ್ಜುಗೊಳಿಸುವ ಸಲುವಾಗಿ ಈ ಸಮಾವೇಶ ಆಯೋಜಿಸಲಾಗಿದೆ.

ಸಮಾವೇಶ ನಡೆಯುವ ಅಡ್ಯಾರ್ ಮೈದಾನದ ಬಳಿ ಟ್ರಾಫಿಕ್ ಬದಲಾವಣೆ

ಸಮಾವೇಶ ಹಿನ್ನಲೆ ಕಾರ್ಯಕ್ರಮ ನಡೆಯುವ ಅಡ್ಯಾರ್ ಮೈದಾನದ ಬಳಿ ಫೆ.17 ರ ಬೆಳಗ್ಗೆ 9 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಟ್ರಾಫಿಕ್ ಬದಲಾವಣೆ ಮಾಡಲಾಗಿದೆ. ಉಡುಪಿ ಕಡೆಯಿಂದ ಬೆಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ನಂತೂರು-ಪಂಪ್‌ವೆಲ್-ತೊಕ್ಕೊಟ್ಟು-ಡಿಪುಪು-ಮೆಲ್ಕಾರ್ ಮೂಲಕ ಸಂಚರಿಸುವುದು. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ಮೆಲ್ಲಾರ್-ಮುಡಿಪು-ತೊಕ್ಕೊಟ್ಟು-ಪಂಪ್‌ವೆಲ್ ಮೂಲಕ ಸಂಚರಿಸಬೇಕು.

ಕಾರ್ಯಕ್ರಮಕ್ಕೆ ಆಗಮಿಸುವವರ ವಾಹನ ಪಾರ್ಕಿಂಗ್ ಸ್ಥಳಗಳು ಇಂತಿವೆ

ಬಂಟ್ವಾಳದಿಂದ ಬರುವ ಗಣ್ಯರ ಕಾರುಗಳು ಹಾಗೂ ಸಾರ್ವಜನಿಕರ ಮೋಟಾರು ಸೈಕಲ್‌ಗಳನ್ನು ಕಾಮತ್ ಮೈದಾನದಲ್ಲಿ ಪಾರ್ಕಿಂಗ್​​ಗೆ ವ್ಯವಸ್ಥೆ ಮಾಡಲಾಗಿದೆ. ಬಂಟ್ವಾಳದಿಂದ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರ ಕಾರುಗಳನ್ನು ಅಡ್ಯಾರ್‌ನ ಕರ್ಮಾರ್ ಮೈದಾನದಲ್ಲಿ ಪಾರ್ಕಿಂಗ್. ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ಸುಗಳು ಕಾರ್ಯಕರ್ತರನ್ನು ಕಾಮತ್ ಪಾರ್ಕಿಂಗ್ ಬಳಿ ಇಳಿಸಿ ಮೋತಿಶ್ಯಾಮ್/ಷಾ ಮೈದಾನದಲ್ಲಿ ಪಾರ್ಕಿಂಗ್. ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಗಣ್ಯರ ಕಾರುಗಳನ್ನು ಅಡ್ಯಾರ್ ಗಾರ್ಡನ್ನಲ್ಲಿ ಪಾರ್ಕಿಂಗ್. ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ಸುಗಳು ಷಾ ಮೈದಾನದಲ್ಲಿ ಪಾರ್ಕಿಂಗ್ ಮತ್ತು ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಮೋಟಾರ್ ಸೈಕಲ್‌ಗಳನ್ನು ಅಡ್ಯಾರ್ ಗಾರ್ಡನ್ ಮೈದಾನದಲ್ಲಿ ಪಾರ್ಕಿಂಗ್ ಹಾಗೂ ಅಡ್ಯಾರ್ ಕಟ್ಟೆಯಲ್ಲಿರುವ ಜಯಶೀಲ ರವರ ಮೈದಾನದಲ್ಲಿ ಕೂಡಾ ಪಾರ್ಕಿಂಗ್ ಮಾಡಲು ಸೂಚಿಸಲಾಗಿದೆ.

ಇದನ್ನೂ ಓದಿ:ಲೋಕಸಭೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಕಟ್ಟಿಹಾಕಲು ಬಿಜೆಪಿ ತಂತ್ರ, ಮೈಸೂರಿನಲ್ಲಿ ಚುರುಕಾದ ಬಿಜೆಪಿ

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಡ್ರೋನ್ ಹಾರಾಟ ನಿಷೇಧ

ಇನ್ನು ಫೆ.17 ರ ಶನಿವಾರ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದ ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟಕ್ಕೆ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ. ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ನಿಷೇಧಿಸಲಾಗಿದೆ. ಇನ್ನು ಕಾರ್ಯಕ್ರಮದ ಬಳಿಕ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳದಲ್ಲಿ ಸಿದ್ದರಾಮಯ್ಯ ಭಾಗವಹಿಸಲಿರುವ ಹಿನ್ನಲೆ ವಾಮಂಜೂರಿನ ತಿರುವೈಲಿನಲ್ಲಿ ಕಂಬಳ ಕಾರ್ಯಕ್ರಮದ ಸುತ್ತಮುತ್ತಲೂ 5 ಕಿ.ಮೀ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ರೆಡ್‍ಜೋನ್ ಎಂದು ಪರಿಗಣಿಸಿ ಡ್ರೋನ್ ಹಾರಾಟ ನಿರ್ಬಂಧಿಸಲಾಗಿದೆ.

ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ಬಹುತೇಕ ನಾಯಕರುಗಳು ಭಾಗಿ

ಇನ್ನು ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತು ವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಲ್ಲಾ ಸಚಿವರು, ಸಂಸದರರು, ಶಾಸಕರು, ಪದಾಧಿಕಾರಿಗಳು, ವಿಧಾನಸಭೆ ಅಭ್ಯರ್ಥಿಗಳು, ಆಕಾಂಕ್ಷಿಗಳು, ಎಐಸಿಸಿ, ಕೆಪಿಸಿಸಿ ಸದಸ್ಯರು, ಡಿಸಿಸಿ ಅಧ್ಯಕ್ಷರು ಸೇರಿದಂತೆ ಮುಂಚೂಣಿ ಘಟಕದ ಎಲ್ಲಾ ಹಂತದ ಅಧ್ಯಕ್ಷರು ಕಡ್ಡಾಯ ಭಾಗಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 pm, Fri, 16 February 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್