ಮಂಗಳೂರು: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ; ಸಿಸಿಬಿ ಪೊಲೀಸರಿಂದ ಇಬ್ಬರು ಆರೋಪಿಗಳ ಸೆರೆ

ಇದೇ ಫೆಬ್ರವರಿ 2 ರಂದು ಒಡಿಶಾದಿಂದ ಬೆಂಗಳೂರಿಗೆ 2 ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಪುತ್ರ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಇದೀಗ ಮಂಗಳೂರಿನಲ್ಲಿ ಗಾಂಜಾ ಸಾಗಾಟ ಮಾಡುವವರು ಸಿಕ್ಕಿಬಿದ್ದಿದ್ದಾರೆ. ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆಯಾಗಿದೆ.

ಮಂಗಳೂರು: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ; ಸಿಸಿಬಿ ಪೊಲೀಸರಿಂದ ಇಬ್ಬರು ಆರೋಪಿಗಳ ಸೆರೆ
ಮಂಗಳೂರು
Edited By: ಕಿರಣ್ ಹನುಮಂತ್​ ಮಾದಾರ್

Updated on: Feb 06, 2024 | 7:17 PM

ದಕ್ಷಿಣ ಕನ್ನಡ, ಫೆ.06: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆಯಾಗಿದ್ದು, ಮಂಗಳೂರು(Mangalore) ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ 120 ಕೆ.ಜಿ ಗಾಂಜಾ(Ganja)ವನ್ನು ಮಹೇಂದ್ರ ಬೊಲೆರೋ ವಾಹನದಲ್ಲಿ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ದಾಳಿ ಮಾಡಿದ್ದು, ಕೇರಳ ವಯನಾಡಿನ ಅನೂಪ್ ಎಂ.ಎಸ್(28), ಕೇರಳ ಕಣ್ಣೂರಿನ ಲತೀಪ್ ಕೆ.ವಿ(36) ಎಂಬುವವರನ್ನು ಬಂಧಿಸಲಾಗಿದೆ.

ಕರ್ನಾಟಕ, ಕೇರಳದ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲು ಹುನ್ನಾರ

ಇನ್ನು ಕರ್ನಾಟಕ, ಕೇರಳದ ಸಾರ್ವಜನಿಕರಿಗೆ ಮಾದಕ ಗಾಂಜಾ ಮಾರಾಟ ಮಾಡಲು ಹುನ್ನಾರ ಮಾಡಲಾಗಿತ್ತು. ಇದೀಗ ಬರೊಬ್ಬರಿ 28 ಲಕ್ಷ ರೂ. ಮೌಲ್ಯದ 120 ಕೆಜಿ ಗಾಂಜಾ, ಸಾಗಾಟದ ವಾಹನ ಹಾಗೂ ಮೊಬೈಲ್ ಫೋನ್ ಸೇರಿದಂತೆ ಒಟ್ಟು 35 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಇದನ್ನು ಒರಿಸ್ಸಾದಿಂದ ಅಂಧ್ರಪ್ರದೇಶ, ಬೆಂಗಳೂರು ಮೂಲಕ ಸಾಗಾಟ ಮಾಡಲಾಗುತ್ತಿತ್ತು.

ಇದನ್ನೂ ಓದಿ:ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ಸಾಗಾಟ: ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಪುತ್ರ ಸೇರಿದಂತೆ ಮೂವರ ಬಂಧನ

ಇದೇ ಫೆಬ್ರವರಿ 2 ರಂದು ಒಡಿಶಾದಿಂದ ಬೆಂಗಳೂರಿಗೆ 2 ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಪುತ್ರ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಆಂಧ್ರಪ್ರದೇಶದ ಗುಂಟೂರಿನಲ್ಲಿ ಗಾಂಜಾ ಸಮೇತ ಸಿಕ್ಕಿಬಿದಿದ್ದರು. ಹೆಚ್​ಎಸ್​ಆರ್ ಬಡಾವಣೆ ವಾಸಿ ಕಿಶೋರ್ ಪ್ರಕಾಶ್ ರೆಡ್ಡಿ(34), ಸುದ್ದಗುಂಟೆಪಾಳ್ಯ ಮಾಜಿ ಕಾರ್ಪೊರೇಟರ್ ಮಗ ಅಭಿನವ್(30) ಮತ್ತು ಬಾಲಾಜಿ ನಗರ ವಾಸಿ ಸುಮಂತ್ ಕುಮಾರ್ (24) ಬಂಧಿತರು.  ಚುನಾವಣೆ ಹಿನ್ನೆಲೆ ಪೊತ್ತೂರಿನ ಚೆಕ್ ಪೊಸ್ಟ್​ನಲ್ಲಿ ತಪಾಸಣೆ ವೇಳೆ ಒಂದು ಕಾರಿನಲ್ಲಿ 48 ಕೆಜಿ ಗಾಂಜಾ ಮತ್ತೊಂದು ಕಾರಿನಲ್ಲಿ 12 ಗಾಂಜಾ ಪತ್ತೆ ಆಗಿತ್ತು. ಇವರು 60 ಕೆಜಿ ಗಾಂಜಾ, ಏಳು ಮೊಬೈಲ್, ಎರಡು ಕಾರು ಮತ್ತು 2.28 ಲಕ್ಷ ನಗದು ಸೇರಿದಂತೆ ಒಟ್ಟು 44 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಒಡಿಶಾದ ಕೋರಾಪುಟ್ ಜಿಲ್ಲೆಯ ಅರಗೊಂಡ ಗ್ರಾಮದಿಂದ ಗಾಂಜಾ ಖರೀದಿ ಮತ್ತು ಮಾರಾಟದ ಬಗ್ಗೆ ತನಿಖೆ ವೇಳೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us