ಮಂಗಳೂರು ಮಂಗಳಾದೇವಿ ನವರಾತ್ರಿ ಉತ್ಸವದಲ್ಲಿ ಧರ್ಮ ದಂಗಲ್: ಹಿಂದೂ ಸ್ಟಾಲ್​ಗಳ ಮೇಲೆ ಹಾರಾಡಿದ ‘ಭಗವಾಧ್ವಜ’

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ಹಬ್ಬ ಹರಿದಿನಗಳಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರ-ವಹಿವಾಟು ನಡೆಸಲು ಅವಕಾಶ ಕಲ್ಪಿಸಬೇಕು ಎಂದು ವಿಹೆಚ್‌ಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹೆಚ್.ಕೆ.ಪುರುಷೋತ್ತಮ ದತ್ತನಗರ ಒತ್ತಾಯಿಸಿದರು.

ಮಂಗಳೂರು ಮಂಗಳಾದೇವಿ ನವರಾತ್ರಿ ಉತ್ಸವದಲ್ಲಿ ಧರ್ಮ ದಂಗಲ್:  ಹಿಂದೂ ಸ್ಟಾಲ್​ಗಳ ಮೇಲೆ ಹಾರಾಡಿದ 'ಭಗವಾಧ್ವಜ'
ಅಂಗಡಿಗಳ ಮುಂದೆ ಕೇಸರಿ ಧ್ವಜ
Follow us
ವಿವೇಕ ಬಿರಾದಾರ
|

Updated on:Oct 18, 2023 | 12:48 PM

ಮಂಗಳೂರು ಅ.18: ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯಲ್ಲಿ ಮತ್ತೆ ಧರ್ಮ ಯುದ್ಧ ಶುರುವಾಗಿದೆ. ಮಂಗಳೂರಿನ (Mangaluru) ಮಂಗಳಾದೇವಿ (Mnagaladevi) ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿವೆ. ಈ ವಿಚಾರ ಕಳೆದ ಎರಡ್ಮೂರು ದಿನಗಳಿಂದ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಹಿಂದುಯೇತರರಿಗೂ ಅಂಗಡಿ ಇಡಲು ಜಿಲ್ಲಾಡಳಿತ ಅನುಮತಿ ನೀಡಿದ ಬೆನ್ನಲ್ಲೇ ಮಂಗಳಾದೇವಿ ದೇವಸ್ಥಾನದ ಎಲ್ಲಾ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮುಂದೆ ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತರು ಕೇಸರಿ ಧ್ವಜ ಹಾಕಿದ್ದಾರೆ.

ಈ ಬಗ್ಗೆ ವಿಹೆಚ್‌ಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹೆಚ್.ಕೆ.ಪುರುಷೋತ್ತಮ ದತ್ತನಗರ ಮಾತನಾಡಿ, ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಬೇಕು. “ಹಬ್ಬದ ಸಂದರ್ಭದಲ್ಲಿ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿದ ಮಂಗಳಾದೇವಿ ದೇವಸ್ಥಾನದ ಆಡಳಿತ ಮಂಡಳಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ. ಆದರೆ, ಜಿಲ್ಲಾಡಳಿತದ ವತಿಯಿಂದ ಮರು ಹರಾಜಿನಲ್ಲಿ ಹಿಂದೂಯೇತರಗೂ ಮಳಿಗೆಗಳನ್ನು ಹಾಕಲು ಅವಕಾಶ ನೀಡಿರುವುದು ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ: ಗೋಪೂಜೆ ನಡೆಯುವ ದೇವಸ್ಥಾನದಲ್ಲಿ ಗೋಹತ್ಯೆ ಮಾಡುವವರಿಗೆ ಯಾಕೆ ಅವಕಾಶ: ಪ್ರಮೋದ್​ ಮುತಾಲಿಕ್​

ನವರಾತ್ರಿ ಜಾತ್ರೆಯ ಸಂದರ್ಭ ಮುಸ್ಲಿಂ ವ್ಯಾಪಾರಿಗಳಿಗೂ ಅಂಗಡಿ ಮುಂಗಟ್ಟು ನೀಡುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಉತ್ಸವ ವರ್ತಕರ ಸಮನ್ವಯ ಸಮಿತಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತ್ತು. ನಂತರ, ಕೆಲವು ಮುಸ್ಲಿಂ ವ್ಯಾಪಾರಿಗಳಿಗೆ ಸ್ಥಳಗಳ ಹರಾಜಿನಲ್ಲಿ ಭಾಗವಹಿಸಲು ಅವಕಾಶ ನೀಡಲಾಯಿತು. ಆದರೆ ಈ ಕ್ರಮವನ್ನು ದತ್ತನಗರ ಅವರು ಪ್ರಶ್ನಿಸಿದ್ದು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯ್ದೆ, 1997 ರ ಪ್ರಕಾರ, ಹಿಂದೂಯೇತರರಿಗೆ ರಥಬೀದಿಯಲ್ಲಿ ವ್ಯಾಪಾರ ಮಾಡಲು ಅವಕಾಶವಿಲ್ಲ.

ಎಲ್ಲಾ ಹಿಂದೂ ವ್ಯಾಪಾರಿಗಳು ತಮ್ಮ ಜೀವನೋಪಾಯಕ್ಕಾಗಿ ಹಬ್ಬಗಳ ಸಮಯದಲ್ಲಿನ ವ್ಯಾಪಾರವನ್ನು ಮಾತ್ರ ಅವಲಂಬಿಸಿದ್ದಾರೆ. ಕೇಸರಿ ಧ್ವಜಗಳನ್ನು ಹಾಕಲಾಗಿರುವ ಹಿಂದೂ ವ್ಯಾಪಾರಿಗಳ ಅಂಗಡಿಗಳಿಗೆ ಮಾತ್ರ ಭಕ್ತರು ಭೇಟಿ ನೀಡಬೇಕು ಎಂದು ಮನವಿ ಮಾಡಿಕೊಂಡರು.

ವಿಎಚ್‌ಪಿಯ ಈ ನಿರ್ಧಾರವನ್ನು ಡಿವೈಎಫ್‌ಐ ಖಂಡಿಸಿದೆ. ವಿಹೆಚ್​ಪಿ ಬಡ ಹಿಂದೂ ಮತ್ತು ಮುಸ್ಲಿಂ ವ್ಯಾಪಾರಿಗಳ ನಡುವೆ ಬಿರುಕು ಮೂಡಿಸುತ್ತಿದೆ ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷರಾದ ಬಿ.ಕೆ.ಇಮ್ತಿಯಾಜ್ ಅವರು ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 am, Wed, 18 October 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್